ಐಪಿಎಲ್ ಅಲ್ಲ, ಟಿ20 ಕ್ರಿಕೆಟ್ ಇತಿಹಾಸದಲ್ಲೇ ನೂತನ ವಿಶ್ವದಾಖಲೆ ನಿರ್ಮಿಸಿದ ಸನ್ರೈಸರ್ಸ್ ಹೈದರಾಬಾದ್-ಮುಂಬೈ ಇಂಡಿಯನ್ಸ್
- Most Runs In A T20 match : ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಅತ್ಯಧಿಕ ರನ್ ಗಳಿಸಿದ ದಾಖಲೆಗೆ ಐಪಿಎಲ್ನ ಸನ್ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಸಾಕ್ಷಿಯಾಗಿದೆ.
- Most Runs In A T20 match : ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಅತ್ಯಧಿಕ ರನ್ ಗಳಿಸಿದ ದಾಖಲೆಗೆ ಐಪಿಎಲ್ನ ಸನ್ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಸಾಕ್ಷಿಯಾಗಿದೆ.
(1 / 6)
ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಟಿ20 ಕ್ರಿಕೆಟ್ನಲ್ಲಿ ವಿಶ್ವದಾಖಲೆ ನಿರ್ಮಿಸಿವೆ. ಪಂದ್ಯವೊಂದರಲ್ಲಿ ಅತ್ಯಧಿಕ ಮೊತ್ತ ದಾಖಲಿಸಿದ ಹೆಗ್ಗಳಿಕೆಗೆ ಪಾತ್ರವಾದ ಉಭಯ ತಂಡಗಳು ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ನಿರ್ಮಿಸಿದ್ದ ದಾಖಲೆ ಉಡೀಸ್ ಮಾಡಿದ್ದು, ಮೊದಲ ಸ್ಥಾನಕ್ಕೇರಿವೆ.
(2 / 6)
ಹೈದರಾಬಾದ್ನ ರಾಜೀವ್ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ರಣರೋಚಕ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ 3 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿತು. ಮುಂಬೈ 5 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತು. ಉಭಯ ತಂಡಗಳ ನಡುವಿನ ಒಟ್ಟು ಸ್ಕೋರ್ 526 ರನ್ ಆಗಿದೆ. ವಿಶ್ವ ಕ್ರಿಕೆಟ್ನಲ್ಲಿ ಪಂದ್ಯವೊಂದರಲ್ಲಿ ದಾಖಲಾದ ಗರಿಷ್ಠ ಸ್ಕೋರ್ ಇದಾಗಿದೆ.
(3 / 6)
ಇದಕ್ಕೂ ಮೊದಲು 2023ರಲ್ಲಿ ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯದಲ್ಲಿ 517 ರನ್ ದಾಖಲಾಗಿತ್ತು. ವಿಂಡೀಸ್ 5 ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿತ್ತು. ಸೌತ್ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 259 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತ್ತು. ಗರಿಷ್ಠ ಸ್ಕೋರ್ ದಾಖಲಾಗಿದ್ದ ಈ ಪಂದ್ಯ ಎರಡನೇ ಸ್ಥಾನಕ್ಕೆ ಕುಸಿದಿದೆ.
(4 / 6)
ಪಾಕಿಸ್ತಾನ ಸೂಪರ್ ಲೀಗ್ನಲ್ಲೂ ಪಂದ್ಯವೊಂದರಲ್ಲಿ 500+ ರನ್ ದಾಖಲಾಗಿದೆ. 2023ರಲ್ಲಿ ನಡೆದ ಪಿಎಸ್ಎಲ್ನ 28ನೇ ಪಂದ್ಯದಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ಮತ್ತು ಮುಲ್ತಾನ್ ಸುಲ್ತಾನ್ ನಡುವೆ 515 ರನ್ ಹರಿದು ಬಂದಿದ್ದವು. ಮುಲ್ತಾನ್ ತಂಡವು 3 ವಿಕೆಟ್ಗೆ 262 ರನ್ ಗಳಿಸಿತ್ತು. ಗ್ಲಾಡಿಯೇಟರ್ಸ್ ತಂಡವು 253 ರನ್ ಗಳಿಸಿ ಸೋತಿತ್ತು.
(5 / 6)
2023ರ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ಸರ್ರೆ vs ಮಿಡ್ಲ್‌ಸೆಕ್ಸ್ ನಡುವಿನ ಪಂದ್ಯದಲ್ಲಿ 506 ರನ್ ದಾಖಲಾಗಿದೆ. ಸೆರ್ರೆ 7 ವಿಕೆಟ್ಗೆ 252 ರನ್ ಗಳಿಸಿದರೆ, ಮಿಡ್ಲ್‌ಸೆಕ್ಸ್ 3 ವಿಕೆಟ್ಗೆ 254 ರನ್ ಗಳಿಸಿತ್ತು. ಸದ್ಯ ಪಂದ್ಯವೊಂದರಲ್ಲಿ ದಾಖಲಾದ ಗರಿಷ್ಠ ಸ್ಕೋರ್ ಪೈಕಿ ನಾಲ್ಕನೇ ಸ್ಥಾನದಲ್ಲಿದೆ.
ಇತರ ಗ್ಯಾಲರಿಗಳು