ಪಾಕ್ ವಿರುದ್ಧ ಅಜೇಯ, ಆಸ್ಟ್ರೇಲಿಯಾ ಕಂಡ್ರೆ ಭಯ; ವಿಶ್ವಕಪ್‌ನ 9 ಎದುರಾಳಿಗಳ ವಿರುದ್ಧ ಭಾರತದ ದಾಖಲೆ ಹೀಗಿದೆ
- ICC Men's Cricket World Cup 2023: ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವು ಇದುವರೆಗೂ ಭಾರತ ತಂಡವನ್ನು ಸೋಲಿಸಲು ಸಾಧ್ಯವಾಗಿಲ್ಲ. ಏಕದಿನ ವಿಶ್ವಕಪ್‌ನಲ್ಲಿ ಈ ಬಾರಿ ಟೀಮ್ ಇಂಡಿಯಾ 9 ತಂಡಗಳನ್ನು ಎದುರಿಸಲಿದೆ. ಈ ಎಲ್ಲಾ ತಂಡಗಳ ವಿರುದ್ಧ ವಿಶ್ವಕಪ್ ಇತಿಹಾಸದಲ್ಲಿ ಭಾರತದ ಸೋಲು-ಗೆಲುವಿನ ದಾಖಲೆ ಹೇಗಿದೆ ಎಂಬುದನ್ನು ನೋಡೋಣ.
- ICC Men's Cricket World Cup 2023: ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವು ಇದುವರೆಗೂ ಭಾರತ ತಂಡವನ್ನು ಸೋಲಿಸಲು ಸಾಧ್ಯವಾಗಿಲ್ಲ. ಏಕದಿನ ವಿಶ್ವಕಪ್‌ನಲ್ಲಿ ಈ ಬಾರಿ ಟೀಮ್ ಇಂಡಿಯಾ 9 ತಂಡಗಳನ್ನು ಎದುರಿಸಲಿದೆ. ಈ ಎಲ್ಲಾ ತಂಡಗಳ ವಿರುದ್ಧ ವಿಶ್ವಕಪ್ ಇತಿಹಾಸದಲ್ಲಿ ಭಾರತದ ಸೋಲು-ಗೆಲುವಿನ ದಾಖಲೆ ಹೇಗಿದೆ ಎಂಬುದನ್ನು ನೋಡೋಣ.
(1 / 10)
ಭಾರತ ತಂಡವು ಇದುವರೆಗೆ ಎರಡು ಬಾರಿ ಏಕದಿನ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ. 1983ರ ಬಳಿಕ 2011ರಲ್ಲಿ ಭಾರತವು ವಿಶ್ವ ಚಾಂಪಿಯನ್ ಆಯಿತು. ಇದೀಗ ಭಾರತ ತಂಡ ಮೂರನೇ ವಿಶ್ವಕಪ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಅದಕ್ಕೂ ಮುನ್ನ, ಈ ಬಾರಿಯ ವಿಶ್ವಕಪ್‌ನಲ್ಲಿ ಭಾಗವಹಿಸುವ ಇತರ 9 ತಂಡಗಳ ವಿರುದ್ಧ ವಿಶ್ವಕಪ್‌ನಲ್ಲಿ ಭಾರತದ ಸೋಲು-ಗೆಲುವಿನ ಅಂಕಿಅಂಶಗಳನ್ನು ನೋಡೋಣ.(PTI)
(2 / 10)
ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು, ಅಂದರೆ 12 ಪಂದ್ಯಗಳನ್ನು ಆಡಿದೆ. ವಿಶ್ವಕಪ್‌ನಲ್ಲಿ ಕಾಂಗರೂಗಳ ವಿರುದ್ಧ ಟೀಮ್ ಇಂಡಿಯಾ 8 ಪಂದ್ಯಗಳಲ್ಲಿ ಸೋತಿದೆ. ಉಳಿದ 4 ಪಂದ್ಯಗಳಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಸೋಲಿಸಿದೆ. ವಿಶ್ವಕಪ್‌ನಲ್ಲಿ ಭಾರತವು ಹೆಚ್ಚು ಪಂದ್ಯಗಳನ್ನು ಸೋತಿರುವುದು ಆಸೀಸ್ ವಿರುದ್ಧ. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್‌ನಲ್ಲಿ ಭಾರತ 4-8ರಿಂದ ಹಿನ್ನಡೆ ಸಾಧಿಸಿದೆ.
(3 / 10)
ಏಕದಿನ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ಭಾರತ 9 ಪಂದ್ಯಗಳನ್ನು ಆಡಿದೆ. ಅದರಲ್ಲಿ 4 ಪಂದ್ಯಗಳನ್ನು ಗೆದ್ದಿರೆ, 4 ಪಂದ್ಯಗಳಲ್ಲಿ ಸೋತಿದೆ. 1 ಪಂದ್ಯ ರದ್ದಾಗಿದೆ. ಏಕದಿನ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ಭಾರತ 4-4ರಲ್ಲಿ ಸಮಬಲ ಸಾಧಿಸಿದೆ.(Twitter)
(4 / 10)
ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಒಟ್ಟು 8 ಪಂದ್ಯಗಳಲ್ಲಿ ಪರಸ್ಪರ ಸೆಣಸಿವೆ. ಇದರಲ್ಲಿ ಭಾರತ 3 ಪಂದ್ಯಗಳಲ್ಲಿ ಗೆದ್ದರೆ, 4 ಪಂದ್ಯಗಳಲ್ಲಿ ಸೋತಿದೆ. 2011ರಲ್ಲಿ ನಡೆದ ವಿಶ್ವಕಪ್ ಪಂದ್ಯವು ಟೈ ಆಗಿದೆ. ಹೀಗಾಗಿ, ಇಂಗ್ಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಮುಖಾಮುಖಿಯಲ್ಲಿ ಭಾರತವು 3-4ರಿಂದ ಹಿನ್ನಡೆ ಸಾಧಿಸಿದೆ.(Twitter)
(5 / 10)
ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತvu ನ್ಯೂಜಿಲೆಂಡ್ ವಿರುದ್ಧ ಒಟ್ಟು 8 ಪಂದ್ಯಗಳನ್ನು ಆಡಿದೆ. ಭಾರತ 3 ಪಂದ್ಯಗಳಲ್ಲಿ ಗೆದ್ದರೆ, 5 ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ, ನ್ಯೂಜಿಲೆಂಡ್ ವಿರುದ್ಧದ ಏಕದಿನ ವಿಶ್ವಕಪ್ ಮುಖಾಮುಖಿಯಲ್ಲಿ ಭಾರತ 3-5ರಿಂದ ಹಿನ್ನಡೆ ಸಾಧಿಸಿದೆ.(Twitter)
(6 / 10)
ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ವಿಶ್ವಕಪ್ ವೇದಿಕೆಯಲ್ಲಿ ಭಾರತವನ್ನು ಪಾಕಿಸ್ತಾನ ಒಮ್ಮೆಯೂ ಸೋಲಿಸಲು ಸಾಧ್ಯವಾಗಿಲ್ಲ. ಆಡಿದ ಎಲ್ಲಾ 7 ಪಂದ್ಯಗಳಲ್ಲಿಯೂ ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿಗಳನ್ನು ಸೋಲಿಸಿದೆ. ಹೀಗಾಗಿ ಪಾಕಿಸ್ತಾನ ವಿರುದ್ಧದ ಏಕದಿನ ವಿಶ್ವಕಪ್‌ನಲ್ಲಿ ಭಾರತ 7-0 ಅಂತರದಿಂದ ಸಂಪೂರ್ಣ ಮೇಲುಗೈ ಸಾಧಿಸಿದೆ.
(7 / 10)
ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಒಟ್ಟು 5 ಪಂದ್ಯಗಳನ್ನು ಆಡಿದೆ. ಇದರಲ್ಲಿ 2 ಪಂದ್ಯ ಗೆದ್ದಿದೆ. 3 ಪಂದ್ಯಗಳಲ್ಲಿ ಸೋತಿದೆ. ಹರಿಣಗಳ ವಿರುದ್ಧದ ಏಕದಿನ ವಿಶ್ವಕಪ್ ಮುಖಾಮುಖಿಯಲ್ಲಿ ಭಾರತ 2-3 ಹಿನ್ನಡೆಯಲ್ಲಿದೆ.(Twitter)
(8 / 10)
ಭಾರತ ಮತ್ತು ಬಾಂಗ್ಲಾದೇಶ ಏಕದಿನ ವಿಶ್ವಕಪ್‌ನಲ್ಲಿ 4 ಪಂದ್ಯಗಳಲ್ಲಿ ಪರಸ್ಪರ ಆಡಿವೆ. ಇದರಲ್ಲಿ ಭಾರತ 3 ಪಂದ್ಯಗಳಲ್ಲಿ ಗೆದ್ದರೆ, ಬಾಂಗ್ಲಾದೇಶ 1 ಪಂದ್ಯ ಗೆದ್ದಿದೆ. ಬಾಂಗ್ಲಾದೇಶ ವಿರುದ್ಧದ ಏಕದಿನ ವಿಶ್ವಕಪ್ ಮುಖಾಮುಖಿಯಲ್ಲಿ ಭಾರತ 3-1ಯಿಂದ ಮುನ್ನಡೆ ಸಾಧಿಸಿದೆ.(Twitter)
(9 / 10)
ನೆದರ್ಲೆಂಡ್ಸ್ ವಿರುದ್ಧ ಟೀಮ್ ಇಂಡಿಯಾ 2 ಪಂದ್ಯಗಳನ್ನು ಆಡಿದ್ದು, ಭಾರತ ಎರಡೂ ಪಂದ್ಯಗಳನ್ನು ಗೆದ್ದಿದೆ. ಡಚ್ಚರ ವಿರುದ್ಧದ ಏಕದಿನ ವಿಶ್ವಕಪ್‌ನಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ.(Twitter)
ಇತರ ಗ್ಯಾಲರಿಗಳು