Border Gavaskar Trophy: ಪ್ರತಿಷ್ಠಿತ ಟ್ರೋಫಿ ಉಳಿಸಿಕೊಳ್ಳಲು ಭಾರತದ ಸಿದ್ಧತೆ; ಅಭ್ಯಾಸ ಅವಧಿಯಲ್ಲಿ ಕಾಣಿಸಿಕೊಂಡ ರಾಹುಲ್, ಜಡೇಜಾ
- ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಸವಾಲು ನೀಡಲು ಬಲಿಷ್ಠ ಆಸ್ಟ್ರೇಲಿಯಾ ಸಜ್ಜಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಉಭಯ ತಂಡಗಳು ಈಗಾಗಲೇ ಅಭ್ಯಾಸ ಆರಂಭಿಸಿವೆ. ಈ ಸರಣಿಯು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶ ಪಡೆಯುವ ನಿಟ್ಟಿನಲ್ಲಿ ಭಾರತಕ್ಕೆ ಮಹತ್ವದ್ದಾಗಿದೆ. ಅದಲ್ಲದೆ, ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಭಾರತ ಎದುರು ನೋಡುತ್ತಿದೆ. ಭಾರತವು ತವರಿನಲ್ಲಿ ಸರಣಿಯನ್ನು ಆಡುತ್ತಿರುವುದರಿಂದ, ಗೆಲ್ಲುವ ಅವಕಾಶ ಹಾಗೂ ಸವಾಲು ಭಾರತಕ್ಕೆ ಹೆಚ್ಚಿದೆ. ಅತ್ತ ಆಸ್ಟ್ರೇಲಿಯಾ ಕೂಡ ಆತಿಥೇಯರಿಗೆ ತವರಿನಲ್ಲಿ ಭರ್ಜರಿ ಪೈಪೋಟಿ ನೀಡುವ ಸಾಮರ್ಥ್ಯ ಹೊಂದಿದೆ. ಸರಣಿಗಾಗಿ ಟೀಮ್ ಇಂಡಿಯಾ ತಯಾರಿ ಆರಂಭಿಸಿದ್ದು, ಬಿಸಿಸಿಐ ತಂಡದ ಅಭ್ಯಾಸದ ಕೆಲವು ಚಿತ್ರಗಳನ್ನು ಹಂಚಿಕೊಂಡಿದೆ.

(1 / 6)
ಇತ್ತೀಚೆಗಷ್ಟೇ ಕನ್ನಡಿಗ ಕೆಎಲ್ ರಾಹುಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅವರು ಈಗಾಗಲೇ ನಾಗ್ಪುರದಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ನೆಟ್ಸ್‌ನಲ್ಲೂ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಸರಣಿಯಲ್ಲಿ ಉಪನಾಯಕನ ಮೇಲೆ ದೊಡ್ಡ ಜವಾಬ್ದಾರಿ ಇದೆ.(BCCI)
(2 / 6)
ಗಾಯದಿಂದಾಗಿ ಸುದೀರ್ಘ ಅವಧಿಗೆ ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ಕೂಡ, ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ರವೀಂದ್ರ ಜಡೇಜಾ ಗಾಯಗೊಂಡಿದ್ದರು. ಅವರು ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಆಸ್ಟ್ರೇಲಿಯಾ ವಿರುದ್ಧ ಆಡಲು ಸಿದ್ಧರಾಗಿದ್ದಾರೆ.(BCCi)
(3 / 6)
ಭಾರತದ ಟೆಸ್ಟ್ ತಂಡದ ಇಬ್ಬರು ಪ್ರಮುಖ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಈ ಇಬ್ಬರು ಸ್ಟಾರ್‌ಗಳ ಬ್ಯಾಟಿಂಗ್ ಅತ್ಯಂತ ಮಹತ್ವದ್ದಾಗಿದೆ.(BCCI)
(4 / 6)
ಈ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ನಗರಕ್ಕೆ ಆಗಮಿಸಿ ಅಭ್ಯಾಸ ಆರಂಭಿಸಿದೆ.(BCCI)
(5 / 6)
ಕೊನೆಯ ಬಾರಿಗೆ, ಅಂದರೆ 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಸರಣಿಯನ್ನು ಭಾರತ ಗೆದ್ದಿದೆ. ಹೀಗಾಗಿ ಪ್ರಸ್ತುತ ಬಾರ್ಡರ್-ಗವಾಸ್ಕರ್ ಟ್ರೋಫಿಯು ಭಾರತದ ಕೈಯಲ್ಲಿದೆ. ಇದನ್ನು ಉಳಿಸಿಕೊಳ್ಳು ಭಾರತ ಎದುರು ನೋಡುತ್ತಿದೆ.(BCCI)
(6 / 6)
ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಭಾರತದ ಟೆಸ್ಟ್ ತಂಡ:ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್(ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್ , ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್.(BCCI)
ಇತರ ಗ್ಯಾಲರಿಗಳು