Nani: ಕ್ರಾಂತಿ ಕಥೆಯಲ್ಲಿ ನ್ಯಾಚುರಲ್‌ ಸ್ಟಾರ್‌ ನಾನಿ; ಮೋಡಿ ಮಾಡಲು ಮತ್ತೆ ಒಂದಾಯ್ತು ದಸರಾ ಸಿನಿಮಾ ಜೋಡಿ-tollywood news actor nani teams up with srikanth odela again a year after dasara movie release mnk ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Nani: ಕ್ರಾಂತಿ ಕಥೆಯಲ್ಲಿ ನ್ಯಾಚುರಲ್‌ ಸ್ಟಾರ್‌ ನಾನಿ; ಮೋಡಿ ಮಾಡಲು ಮತ್ತೆ ಒಂದಾಯ್ತು ದಸರಾ ಸಿನಿಮಾ ಜೋಡಿ

Nani: ಕ್ರಾಂತಿ ಕಥೆಯಲ್ಲಿ ನ್ಯಾಚುರಲ್‌ ಸ್ಟಾರ್‌ ನಾನಿ; ಮೋಡಿ ಮಾಡಲು ಮತ್ತೆ ಒಂದಾಯ್ತು ದಸರಾ ಸಿನಿಮಾ ಜೋಡಿ

  • ದಸರಾ ಮೂಲಕ ಟಾಲಿವುಡ್‌ನಲ್ಲಿ ಧೂಳೆಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀಕಾಂತ್‌ ಒಡೆಲಾ, ಈ ಚಿತ್ರಕ್ಕೂ ಆಕ್ಷನ್‌ ಕಟ್‌ ಹೇಳಲಿದ್ದಾರೆ.

ದಸರಾಗೆ ಆಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ, ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಈ ಕ್ರೇಜಿ ಕಾಂಬೋದ ಹೊಸ ಪ್ರಾಜೆಕ್ಟ್ ಫಸ್ಟ್ ಲುಕ್ ರಿವೀಲ್ ಆಗಿದೆ.
icon

(1 / 7)

ಬಾಯಲ್ಲಿ ಸಿಗರೇಟ್, ಸಖತ್ ರಗಡ್ ಲುಕ್ ನಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಪೋಸ್ಟರ್ ನಲ್ಲಿ ಸಾಕಷ್ಟು ಸಂಖ್ಯೆಯ ಜನರನ್ನು ಕೂಡ ತೋರಿಸಲಾಗಿದೆ. 
icon

(2 / 7)

ಕ್ರಾಂತಿಯು ಪ್ರಾರಂಭವಾಗುವ ಮೊದಲು ಹಿಂಸಾಚಾರವು ಅದರ ಸರಿಯಾದ ರೂಪವನ್ನು ಪಡೆಯುತ್ತದೆ. ಮತ್ತೊಂದು ಪವರ್ ಪ್ಯಾಕ್ಡ್ ಆಕ್ಷನ್ ನೊಂದಿಗೆ ನಾನಿ ಪರಿಚಯ ಎಂದು ಶ್ರೀಕಾಂತ್ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ತಿಳಿಸಿದ್ದಾರೆ. 
icon

(3 / 7)

ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ (SLV ಸಿನಿಮಾಸ್) ನಡಿ ಸುಧಾಕರ್ ಚೆರುಕುರಿ ನಾನಿ 33ನೇ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ.  
icon

(4 / 7)

.  ನಾನಿ ಈ ಚಿತ್ರದಲ್ಲಿ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. 2025ಕ್ಕೆ ಸಿನಿಮಾ ತೆರೆಗೆ ತರೋದಿಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ. 
icon

(5 / 7)

‘ದಸರಾ’ ಸಿನಿಮಾ ತೆರೆಕಂಡು ಒಂದು ವರ್ಷವಾಗಿದೆ. ಈ ಖುಷಿಯಲ್ಲಿ ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಲಾಗಿದೆ. ಸದ್ಯ ನಾನಿ 33 ಎಂದು ಟೈಟಲ್ ಇಡಲಾಗಿದೆ. 
icon

(6 / 7)

ಕಳೆದ ವರ್ಷ ತೆರೆಗೆ ಬಂದಿದ್ದ ಮಾಸ್ ಆಕ್ಷನ್ ಎಂಟರ್ಟೈನರ್ ದಸರಾ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಬೇಟೆಯಾಡಿತ್ತು. ಈಗ ಅದೇ ದಿನದಂದೇ ಹೊಸ ಸಿನಿಮಾ ಘೋಷಣೆಯಾಗಿದೆ. 
icon

(7 / 7)

ಇತರ ಗ್ಯಾಲರಿಗಳು