ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಪುಷ್ಪ 2 ಚಿತ್ರದ ಎರಡನೇ ಹಾಡು ರಿಲೀಸ್; ಕಪಲ್ ಸಾಂಗ್‌ಗೆ ಹೆಜ್ಜೆ ಹಾಕಿದ ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ

ಪುಷ್ಪ 2 ಚಿತ್ರದ ಎರಡನೇ ಹಾಡು ರಿಲೀಸ್; ಕಪಲ್ ಸಾಂಗ್‌ಗೆ ಹೆಜ್ಜೆ ಹಾಕಿದ ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ

  • ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 ಅಂಗಳದಿಂದ ಎರಡನೇ ಹಾಡು ಬಿಡುಗಡೆಯಾಗಿದೆ. ದಿ ಕಪಲ್ ಸಾಂಗ್‌ಗೆ ಪುಷ್ಪರಾಜ್ ಹಾಗೂ ಶ್ರೀವಲ್ಲಿ ಹೆಜ್ಜೆ ಹಾಕಿದ್ದಾರೆ. ಗಣೇಶ್ ಆಚಾರ್ಯ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ದೇವಿಶ್ರೀ ಪ್ರಸಾದ್ ಟ್ಯೂನ್ ಹಾಕಿದ್ದಾರೆ. ಒಟ್ಟು ಆರು ಭಾಷೆಗಳಲ್ಲಿ ಈ ಹಾಡು ಬಿಡುಗಡೆ ಆಗಿದೆ.

ಪುಷ್ಪ 2 ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಬೆಂಗಾಲಿ ಭಾಷೆಯಲ್ಲಿ ಸಾಂಗ್ ಬಿಡುಗಡೆಯಾಗಿದೆ. ಕನ್ನಡದ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಮೆಲೋಡಿ ಕ್ವೀನ್ ಶ್ರೇಯಾ ಘೋಷಾಲ್ ಆರು ಭಾಷೆಯ ಹಾಡಿಗೆ ಧ್ವನಿಯಾಗಿದ್ದಾರೆ.
icon

(1 / 5)

ಪುಷ್ಪ ಸೀಕ್ವೆಲ್ ಟೀಸರ್ ಹಾಗೂ ಟೈಟಲ್ ಟ್ರ್ಯಾಕ್ ಈಗಾಗ್ಲೇ ಭಾರೀ ಸದ್ದು ಮಾಡಿದ್ದು, ಇದೀಗ ರಿಲೀಸ್ ಆಗಿರುವ ಸಾಂಗ್ ಕೂಡ ಸೆನ್ಸೇಷನ್ ಸೃಷ್ಟಿಸುವ ಎಲ್ಲಾ ಲಕ್ಷಣ ಕಾಣುತ್ತಿದೆ. ಅದ್ಧೂರಿ ಸೆಟ್ನಲ್ಲಿ ರಶ್ಮಿಕಾ ಹಾಗೂ ಅಲ್ಲು ಅರ್ಜುನ್ ಹೆಜ್ಜೆ ಹಾಕಿದ್ದಾರೆ. 
icon

(2 / 5)

ಇವರಿಬ್ಬರ ಆನ್ ಸ್ಕ್ರೀನ್ ಕೆಮಿಸ್ಟ್ರೀಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಪುಷ್ಪ ಪುಷ್ಪ ಹಾಡು 100 ಮಿಲಿಯನ್ಸ್ ವೀಕ್ಷಣೆ ಕಂಡಿದೆ, ಕಪಲ್ ಸಾಂಗ್ ಕೂಡ ದಾಖಲೆ ಬರೆಯಲಿದೆ ಎಂಬ ನಿರೀಕ್ಷೆ ಚಿತ್ರತಂಡದಲ್ಲಿದೆ. 
icon

(3 / 5)

ತೆಲುಗಿನಲ್ಲಿ ‘ಸೂಸೆಕಿ..’ , ಕನ್ನಡದಲ್ಲಿ ‘ನೋಡೋಕ..’ ಎಂದು ಶುರುವಾಗುವ ಹಾಡು ಕೇಳುಗರಿಗೆ ಕಿಕ್ ಕೊಡುತ್ತಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾವಾಗಿರುವ ಪುಷ್ಪ 2 ಈ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. 
icon

(4 / 5)

ಈ ಚಿತ್ರಕ್ಕೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಾಣ ಮಾಡಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.
icon

(5 / 5)

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು