ಕುತೂಹಲಕ್ಕೆ ಬಿತ್ತು ತೆರೆ; ಪ್ರಭಾಸ್ ನಟನೆಯ Kalki 2898 AD ಸಿನಿಮಾ ಬಿಡುಗಡೆಗೆ ನಿಗದಿಯಾಯ್ತು ದಿನ
- ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಸಿನಿಮಾ ತಂಡದಿಂದ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಈ ವರೆಗೂ ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.
- ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಸಿನಿಮಾ ತಂಡದಿಂದ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಈ ವರೆಗೂ ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.
(1 / 6)
ಬಹುನಿರೀಕ್ಷಿತ ಪ್ಯಾನ್ ಇಂಡಿಯನ್ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿರುವ ಕಲ್ಕಿ 2898 ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಅದರಲ್ಲೂ ಪ್ರಭಾಸ್ ಸಿನಿಮಾ ಅಂದಮೇಲೆ ಅಲ್ಲಿ ನಿರೀಕ್ಷೆ ಆಕಾಶ ಮುಟ್ಟಿರುತ್ತದೆ.
(2 / 6)
ನಾಗಅಶ್ವಿನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೈನ್ಸ್ ಫಿಕ್ಷನ್ ಕಥೆಯುಳ್ಳ ಕಲ್ಕಿ 2898 AD ಸಿನಿಮಾವನ್ನು ವೈಜಯಂತಿ ಫಿಲಂಸ್ ಅದ್ದೂರಿಯಾಗಿಯೇ ನಿರ್ಮಾಣ ಮಾಡಿದೆ. ಬಹುಕೋಟಿ ವೆಚ್ಚದಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಬಹುತಾರಾಗಣವೂ ಹೈಲೈಟ್
(3 / 6)
ಪ್ರಭಾಸ್ ನಾಯಕನಾದರೆ, ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾಣಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ಇದೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ ಚಿತ್ರತಂಡ
(4 / 6)
ಕಲ್ಕಿ 2898 ಎಡಿ ಸಿನಿಮಾ ತಂಡದಿಂದ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಈ ವರೆಗೂ ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಜೂನ್ 27ರಂದು ಅಂದರೆ ಇಂದಿಗೆ ಸರಿಯಾಗಿ ಎರಡು ತಿಂಗಳಿಗೆ ಈ ಚಿತ್ರ ಬಿಡುಗಡೆ ಆಗಲಿದೆ.
(5 / 6)
ಈಗ ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಿರ್ಮಾಣ ಸಂಸ್ಥೆ, ಉತ್ತಮ ನಾಳೆಗಾಗಿ ಎಲ್ಲಾ ಶಕ್ತಿಗಳು ಒಗ್ಗೂಡುತ್ತವೆ ಎಂಬ ಕ್ಯಾಪ್ಷನ್ ನೀಡಿ ಹೊಸ ಪೋಸ್ಟರ್ ಜತೆಗೆ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.
ಇತರ ಗ್ಯಾಲರಿಗಳು