ಐಪಿಎಲ್​ನಲ್ಲಿ ಅತಿ ಹೆಚ್ಚು ಫೈನಲ್ ಆಡಿದ ಟಾಪ್-5 ನಾಯಕರು; ಗಂಭೀರ್, ಪಾಂಡ್ಯ ಹಿಂದಿಕ್ಕಿದ ಶ್ರೇಯಸ್ ಅಯ್ಯರ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್​ನಲ್ಲಿ ಅತಿ ಹೆಚ್ಚು ಫೈನಲ್ ಆಡಿದ ಟಾಪ್-5 ನಾಯಕರು; ಗಂಭೀರ್, ಪಾಂಡ್ಯ ಹಿಂದಿಕ್ಕಿದ ಶ್ರೇಯಸ್ ಅಯ್ಯರ್

ಐಪಿಎಲ್​ನಲ್ಲಿ ಅತಿ ಹೆಚ್ಚು ಫೈನಲ್ ಆಡಿದ ಟಾಪ್-5 ನಾಯಕರು; ಗಂಭೀರ್, ಪಾಂಡ್ಯ ಹಿಂದಿಕ್ಕಿದ ಶ್ರೇಯಸ್ ಅಯ್ಯರ್

18ನೇ ಆವೃತ್ತಿಯ ಐಪಿಎಲ್ ಫೈನಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯುವುದರೊಂದಿಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ದಾಖಲೆ ನಿರ್ಮಿಸಿದ್ದಾರೆ. ಆ ಮೂಲಕ ಐಪಿಎಲ್​ನಲ್ಲಿ ನಾಯಕನಾಗಿ ಅತಿ ಹೆಚ್ಚು ಫೈನಲ್ ಆಡಿದ ನಾಯಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅತಿ ಹೆಚ್ಚು ಫೈನಲ್ ಆಡಿದ ನಾಯಕ ಎಂಬ ಹೆಗ್ಗಳಿಕೆಗೆ ಎಂಎಸ್ ಧೋನಿ ಪಾತ್ರರಾಗಿದ್ದಾರೆ. ಧೋನಿ ತಮ್ಮ ವೃತ್ತಿಜೀವನದಲ್ಲಿ 10 ಐಪಿಎಲ್​ ಫೈನಲ್ ಆಡಿದ್ದಾರೆ. ಅವರ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 5 ಟ್ರೋಫಿಗಳನ್ನು ಗೆದ್ದಿದೆ. ಇದು ಐಪಿಎಲ್​​ನಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ​ ಜಂಟಿ ದಾಖಲೆಯಾಗಿದೆ.
icon

(1 / 4)

(ANI)

ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಅವರು ನಾಯಕನಾಗಿ 5 ಐಪಿಎಲ್ ಫೈನಲ್ ಪಂದ್ಯಗಳನ್ನು ಆಡಿದ್ದಾರೆ. ಹಿಟ್​​ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. 2023ರವರೆಗೆ ಮುಂಬೈ ನಾಯಕತ್ವ ವಹಿಸಿದ್ದರು.
icon

(2 / 4)

(REUTERS)

ಪಂಜಾಬ್ ಕಿಂಗ್ಸ್​ ತಂಡವನ್ನು ಫೈನಲ್​ಗೇರಿಸುವ ಮೂಲಕ ಶ್ರೇಯಸ್ ಅಯ್ಯರ್ ಮೂರನೇ ಸ್ಥಾನಕ್ಕೇರಿದ್ದಾರೆ. ಅಯ್ಯರ್ ನಾಯಕನಾಗಿ 3 ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದ್ದಾರೆ. ಅವರು ಕೋಲ್ಕತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್​ಗೆ ಮುನ್ನಡೆಸಿದ್ದರು. ಐಪಿಎಲ್​​ನಲ್ಲಿ 3 ವಿಭಿನ್ನ ತಂಡಗಳನ್ನು ಫೈನಲ್​ಗೆ ಮುನ್ನಡೆಸಿದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
icon

(3 / 4)

(PTI)

ಹಾರ್ದಿಕ್ ಪಾಂಡ್ಯ ನಾಯಕನಾಗಿ 2 ಐಪಿಎಲ್ ಫೈನಲ್ ಪಂದ್ಯಗಳನ್ನು ಆಡಿದ್ದಾರೆ. ಅವರ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ 2022ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಫೈನಲ್​​ನಲ್ಲಿ ಗೆದ್ದು ಬೀಗಿತ್ತು. ಹಾರ್ದಿಕ್ ನೇತೃತ್ವದ ಜಿಟಿ 2023ರಲ್ಲಿ ಫೈನಲ್ ತಲುಪಿತು. ಆದರೆ, ರನ್ನರ್ ಅಪ್ ಆಗಿತ್ತು. ಹಾರ್ದಿಕ್ ಈಗ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದಾರೆ.
icon

(4 / 4)

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು