ಧೋನಿ, ಸ್ಯಾಮ್ಸನ್ ಸಿಕ್ಸರ್ ದಾಖಲೆ; ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್-5 ಆಟಗಾರರಿವರು!
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಧೋನಿ, ಸ್ಯಾಮ್ಸನ್ ಸಿಕ್ಸರ್ ದಾಖಲೆ; ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್-5 ಆಟಗಾರರಿವರು!

ಧೋನಿ, ಸ್ಯಾಮ್ಸನ್ ಸಿಕ್ಸರ್ ದಾಖಲೆ; ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್-5 ಆಟಗಾರರಿವರು!

ಐಪಿಎಲ್​ನ ಸಿಎಸ್​ಕೆ ಮತ್ತು ಆರ್​​ಆರ್ ನಡುವಿನ ಪಂದ್ಯದಲ್ಲಿ ಎಂಎಸ್ ಧೋನಿ ಮತ್ತು ಸಂಜು ಸ್ಯಾಮ್ಸನ್ ವಿಶೇಷ ಕ್ಲಬ್​ ಪ್ರವೇಶಿಸಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಆಟಗಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅದರ ಪಟ್ಟಿ ಇಂತಿದೆ.

ಟಿ20 ಕ್ರಿಕೆಟ್​​ನಲ್ಲಿ ಭಾರತದ ಪರ ಅತಿ ಹೆಚ್ಚು ಸಿಕ್ಸರ್​​​ಗಳನ್ನು ಬಾರಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್​ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ 459 ಪಂದ್ಯಗಳಲ್ಲಿ 542 ಸಿಕ್ಸರ್​​ಗಳನ್ನು ಬಾರಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್, ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ.
icon

(1 / 5)

(ANI)

ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದು, 434 ಸಿಕ್ಸರ್​​ ಸಿಡಿಸಿದ್ದಾರೆ. ಕೊಹ್ಲಿ ಈವರೆಗೆ 410 ಟಿ20 ಪಂದ್ಯಗಳನ್ನು ಆಡಿದ್ದು, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಕೊಹ್ಲಿ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದಾರೆ.
icon

(2 / 5)

(REUTERS)

ಚುಟುಕು ಫಾರ್ಮೆಟ್​​ನಲ್ಲಿ ಸೂರ್ಯಕುಮಾರ್ ಯಾದವ್ 368 ಸಿಕ್ಸರ್ ಬಾರಿಸಿ ಮೂರನೇ ಸ್ಥಾನ ಪಡೆದಿದ್ದಾರೆ. ಕಡಿಮೆ ಸ್ವರೂಪದಲ್ಲಿ 321 ಪಂದ್ಯಗಳನ್ನು ಆಡಿದ್ದಾರೆ. ಅವರು ಭಾರತೀಯ ಟಿ20 ತಂಡದ ನಾಯಕರಾಗಿದ್ದಾರೆ ಮತ್ತು ಮುಂಬೈ ಇಂಡಿಯನ್ಸ್​​ ಪರವೂ ಆಡುತ್ತಿದ್ದಾರೆ.
icon

(3 / 5)

(Hindustan Times)

ಟಿ20 ಕ್ರಿಕೆಟ್​​​ನಲ್ಲಿ 350 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್​​ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಮಾಜಿ ವಿಕೆಟ್ ಕೀಪರ್-ಬ್ಯಾಟರ್​ ಎಂಎಸ್ ಧೋನಿ ಸ್ಥಾನ ಪಡೆದಿದ್ದಾರೆ. ಐಪಿಎಲ್ 2025ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಸಿಕ್ಸರ್​ ಬಾರಿಸುವುದರೊಂದಿಗೆ 350 ಸಿಕ್ಸರ್​ಗಳ ಸಾಧನೆ ಮಾಡಿದರು. ಅತಿ ಹೆಚ್ಚು ಸಿಕ್ಸರ್​ ಬಾರಿಸಿದವರ ಪಟ್ಟಿಯಲ್ಲಿ ಇದೀಗ 4ನೇ ಸ್ಥಾನದಲ್ಲಿದ್ದಾರೆ.
icon

(4 / 5)

(PTI)

ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ 5ನೇ ಸ್ಥಾನದಲ್ಲಿದ್ದಾರೆ. ಅವರು ಕೂಡ ಸ್ಪೆಷಲ್ ಕ್ಲಬ್​ಗೆ ಪ್ರವೇಶಿಸಿದ್ದಾರೆ. ಚೆನ್ನೈ ವಿರುದ್ಧ 31 ಎಸೆತಗಳಲ್ಲಿ 41 ರನ್ ಗಳಿಸಿದ ಸ್ಯಾಮ್ಸನ್ 350 ಸಿಕ್ಸರ್​ಗಳ ಗಡಿ ತಲುಪಿದರು. ಅವರು ತಮ್ಮ ಇನ್ನಿಂಗ್ಸ್​​ನಲ್ಲಿ 2 ಸಿಕ್ಸರ್ ಸಿಡಿಸುವ ಮೂಲಕ ಈ ಸಾಧನೆ ಮಾಡಿದರು. ಸ್ಯಾಮ್ಸನ್ ಇದುವರೆಗೆ 304 ಟಿ20 ಪಂದ್ಯ ಆಡಿದ್ದಾರೆ.
icon

(5 / 5)

(AFP)

ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು