Train Mishap:ಮೂರು ರೈಲುಗಳನ್ನು ಒಳಗೊಂಡ ಭಯಾನಕ ಅಪಘಾತ ಸ್ಥಳದ ಕೆಲವು ಫೋಟೋಸ್ ಇಲ್ಲಿವೆ
Train Mishap: ಒಡಿಶಾ ಬಾಲಸೋರ್‌ನಲ್ಲಿ ಶುಕ್ರವಾರ ಮುಸ್ಸಂಜೆ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದ ನಂತರ ಭಯಾನಕ ದೃಶ್ಯಗಳ ಫೋಟೋಸ್ ಇಲ್ಲಿವೆ.
(1 / 8)
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಮುಸ್ಸಂಜೆ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 261 ಜನರು ಮೃತಪಟ್ಟಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ. ಅಪಘಾತ ಸ್ಥಳದ ದೃಶ್ಯ ಹೀಗಿದೆ.(AFP)
(2 / 8)
ಬಹನಗಾ ಬಜಾರ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಈ ದುರಂತ ನಡೆದಿದೆ. ಬಹನಾಗ ಬಜಾರ್ ನಿಲ್ದಾಣವು ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿದೆ.(REUTERS)
(3 / 8)
ಭೀಕರ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳಾಂತರಿಸಲು ಮತ್ತು ಚಿಕಿತ್ಸೆಗೆ ಸಹಾಯ ಮಾಡಲು ಹಾಗೂ ಒಟ್ಟಾರೆಯಾಗಿ ರಕ್ಷಣಾ ಕಾರ್ಯಕ್ಕೆ ಭಾರತೀಯ ಸೇನೆಯನ್ನು ನಿಯೋಜಿಸಲಾಗಿದೆ.(AFP)
(4 / 8)
ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಮುಂದಿನ ಬಂಧುಗಳಿಗೆ 10 ಲಕ್ಷ ರೂಪಾಯಿಗಳನ್ನು ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 5 ಲಕ್ಷ ರೂಪಾಯಿಗಳನ್ನು ಮತ್ತು ಸಣ್ಣಪುಟ್ಟ ಗಾಯಗೊಂಡ ವ್ಯಕ್ತಿಗಳಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ರೈಲ್ವೆ ಸಚಿವಾಲಯವು ಘೋಷಿಸಿದೆ.(AFP)
(5 / 8)
ಈ ದುರಂತ ಘಟನೆಯಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಹಾನಿಗೀಡಾಗಿವೆ.(AFP)
(6 / 8)
ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹಲವಾರು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದಾಗ ಈ ದುರಂತ ಸಂಭವಿಸಿದೆ.(AFP)
(7 / 8)
ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಈ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ ಬೋಗಿಗಳು ಮಗುಚಿ ಬಿದ್ದವು. ಗೂಡ್ಸ್ ರೈಲಿಗೂ ಈ ಬೋಗಿಗಳು ಡಿಕ್ಕಿ ಹೊಡೆದಿವೆ.(ANI)
ಇತರ ಗ್ಯಾಲರಿಗಳು