Devarayanadurga Jatre: ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದಲ್ಲಿ ಜಾತ್ರೆ, ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದ ವೈಭವದ ಫೋಟೋಗಳು
- Devarayanadurga Jatre: ತುಮಕೂರು ಜಿಲ್ಲೆಯ ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ವೈಭವದ ರಥೋತ್ಸವದ ಫೋಟೋಗಳು ಇಲ್ಲಿವೆ. (ಸಚಿತ್ರ ವರದಿ: ಈಶ್ವರ್, ತುಮಕೂರು)
- Devarayanadurga Jatre: ತುಮಕೂರು ಜಿಲ್ಲೆಯ ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ವೈಭವದ ರಥೋತ್ಸವದ ಫೋಟೋಗಳು ಇಲ್ಲಿವೆ. (ಸಚಿತ್ರ ವರದಿ: ಈಶ್ವರ್, ತುಮಕೂರು)
(1 / 8)
ತುಮಕೂರು ಜಿಲ್ಲೆಯ ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಕರಿಗಿರಿ ಕ್ಷೇತ್ರದಲ್ಲಿ ಲಕ್ಷ್ಮಿನರಸಿಂಹಸ್ವಾಮಿಯ ಬ್ರಹ್ಮರಥೋತ್ಸವವು ಮಧ್ಯಾಹ್ನ ಭಕ್ತಾದಿಗಳ ಹರ್ಷೋದ್ಘಾರದ ನಡುವೆ ಗರುಡ ಬಂದು ರಥ ಪ್ರದಕ್ಷಿಣೆ ಹಾಕಿದ ನಂತರ ವಿದ್ಯುಕ್ತವಾಗಿ ನೆರವೇರಿತು.
(2 / 8)
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಶಾಸಕ ಬಿ. ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಟಿ. ಸುನೀಲ್ ಕುಮಾರ್ ಅವರು ಶ್ರೀಲಕ್ಷ್ಮಿ ನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ರಥೋತ್ಸವಕ್ಕೆ ಚಾಲನೆ ದೊರೆಯಿತು.
(3 / 8)
ರಥೋತ್ಸವದ ಅಂಗವಾಗಿ ಮುಂಜಾನೆಯೇ ಶ್ರೀಸ್ವಾಮಿಗೆ ಅಭಿಷೇಕ ನೆರವೇರಿತು, ದೇವರು ಮತ್ತು ರಥಕ್ಕೆ ಗೆ ವಿವಿಧ ಬಗೆಯ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಮುಂಜಾನೆಯಿಂದಲೇ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯ ನೆರವೇರಿದ್ದು, 7 ಗಂಟೆಯ ನಂತರ ಶ್ರೀಲಕ್ಷ್ಮಿನರಸಿಂಹ ಸ್ವಾಮಿ ಭಕ್ತರ ಮನೆಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆಯಾದ ನಂತರ ಮಧ್ಯಾಹ್ನ ರಥದ ಬಳಿ ಬಂದ ದೇವರನ್ನು ರಥಕ್ಕೆ ಕೂರಿಸಲಾಯಿತು.
(4 / 8)
ರಥಕ್ಕೆ ಗರುಡ ಪ್ರದಕ್ಷಿಣೆ ಹಾಕಿದ ನಂತರ ಭಕ್ತರ ಜೈಕಾರ, ವೇದ ಘೋಷದೊಂದಿಗೆ ರಥ ಮುಂದಕ್ಕೆ ಎಳೆಯಲಾಯಿತು, ರಥದ ಗಾಲಿಗಳು ಮುಂದಕ್ಕೆ ಚಲಿಸುತ್ತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಘಾರಮುಗಿಲು ಮುಟ್ಟಿತು, ಭಕ್ತಾದಿಗಳು ರಥಕ್ಕೆ ಹೂ, ಬಾಳೆಹಣ್ಣು, ದವನ ಎಸೆಯುವ ಮೂಲಕ ತಮ್ಮ ಹರಕೆ ತೀರಿಸಿದರು.
(5 / 8)
ರಥೋತ್ಸವದಲ್ಲಿ ಪಾಲ್ಗೊಳ್ಳಲು ಬಂದ ಭಕ್ತಾದಿಗಳಿಗೆ ಅಲ್ಲಲ್ಲಿ ಕೊಪ್ಪಲು ಹಾಕಿಕೊಂಡಿದ್ದ ಭಕ್ತರು ಪಾನಕ, ಮಜ್ಜಿಗೆ ನೀಡಿ ಅವರ ದಣಿವನ್ನು ತಣಿಸಿದರು, ಹಾಗೆಯೇ ದೇವಾಲಯದ ವತಿಯಿಂದಲೂ ಭಕ್ತಾದಿಗಳಿಗಾಗಿ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗಿತ್ತು, ರಥೋತ್ಸವದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಸಂಭ್ರಮಿಸಿದರು.
(6 / 8)
ತುಮಕೂರು ಜಿಲ್ಲೆಯ ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದ ಫೋಟೋಗಳು.
(7 / 8)
ತುಮಕೂರು ಜಿಲ್ಲೆಯ ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಇತರ ಗ್ಯಾಲರಿಗಳು