ತುಮಕೂರು ಸಿದ್ದಗಂಗಾಮಠದಲ್ಲಿ ನಟ ಶಿವರಾಜಕುಮಾರ್‌, ಗೀತಾಶಿವರಾಜ್‌ಕುಮಾರ್‌ ದಂಪತಿ, ಗದ್ದುಗೆ ದರ್ಶನ, ಸ್ವಾಮೀಜಿ ಆಶಿರ್ವಾದ photos
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ತುಮಕೂರು ಸಿದ್ದಗಂಗಾಮಠದಲ್ಲಿ ನಟ ಶಿವರಾಜಕುಮಾರ್‌, ಗೀತಾಶಿವರಾಜ್‌ಕುಮಾರ್‌ ದಂಪತಿ, ಗದ್ದುಗೆ ದರ್ಶನ, ಸ್ವಾಮೀಜಿ ಆಶಿರ್ವಾದ Photos

ತುಮಕೂರು ಸಿದ್ದಗಂಗಾಮಠದಲ್ಲಿ ನಟ ಶಿವರಾಜಕುಮಾರ್‌, ಗೀತಾಶಿವರಾಜ್‌ಕುಮಾರ್‌ ದಂಪತಿ, ಗದ್ದುಗೆ ದರ್ಶನ, ಸ್ವಾಮೀಜಿ ಆಶಿರ್ವಾದ photos

  • ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಪತಿ ಶಿವರಾಜ್‌ಕುಮಾರ್‌  ಅವರೊಂದಿಗೆ ಭೇಟಿ ಸ್ವಾಮೀಜಿ ಆಶಿರ್ವಾದ ಪಡೆದುಕೊಂಡರು.
  • ಚಿತ್ರ- ಮಾಹಿತಿ: ಈಶ್ವರ್‌ ತುಮಕೂರು

ತುಮಕೂರಿನ ಸಿದ್ಧಗಂಗಾ ಮಠಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.
icon

(1 / 6)

ಹಿರಿಯ ಶ್ರೀಗಳ ಗದ್ದುಗೆಗೆ ತೆರಳಿದ ನಟ ಶಿವರಾಜಕುಮಾರ್ ದಂಪತಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು, ನಂತರ ಶ್ರೀಗಳ ಧ್ಯಾನ ಮಂದಿರಕ್ಕೂ ಭೇಟಿ ನೀಡಿ ಕೊಂಚ ಸಮಯ ಧ್ಯಾನ ಮಗ್ನರಾದರು
icon

(2 / 6)

 ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಶ್ರೀಮಠಕ್ಕೆ ಶ್ರೀಗಳ ಆಶೀರ್ವಾದ ಪಡೆಯಲು ಭೇಟಿ ನೀಡಿದ್ದೇನೆ. ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು, ಶ್ರಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದೇವೆ. ಈ ಹಿಂದೆ ದೊಡ್ಡವರು ಅಂದರೆ ನಮ್ಮ ಮಾವನರು ಹಾಗೂ ನಮ್ಮ ತಂದೆಯವರು  ಮಠದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು, ಇಲ್ಲಿಗೆ ಅನೇಕ ಭಾರಿ ಭೇಟಿ ನೀಡಿದ್ದೇನೆ, ಅದೆಲ್ಲವೂ ಈಗ ನೆನಪಾಗುತ್ತಿದೆ ಎಂದು ಶಿವರಾಜಕುಮಾರ್‌ ಹೇಳಿದರು.
icon

(3 / 6)

ನಮ್ಮ ತಂದೆಯವರು ಮಠದ ಬಗ್ಗೆ ಅಪಾರ ಗೌರವ ಹೊಂದಿದ್ದರು, ಅದೇ ರೀತಿ, ಇಲ್ಲಿ ತಂದೆಯವರ ಅನೇಕ ಸಿನಿಮಾಗಳನ್ನು ಚಿತ್ರಿಸಲಾಗಿದೆ, ಇತ್ತೀಚೆಗೆ ನಾನು ನಟಿಸಿದ ಟಗರು ಸಿನಿಮಾ ಕೂಡ ಇಲ್ಲಿಯೇ ಚಿತ್ರಿಸಲಾಗಿತ್ತು. ಆದ್ದರಿಂದ, ಇಲ್ಲಿನ ಪರಿಸರ ನನಗೆ ತುಂಬಾ ಇಷ್ಟ ಎನ್ನುವುದು ಶಿವರಾಜಕುಮಾರ್‌ ಅವರ ಅಭಿಮಾನದ ನುಡಿ,
icon

(4 / 6)

ಪತ್ನಿ ಗೀತಾ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ, ಪತಿಯಾಗಿ ಅರ್ಧಾಂಗಿಗೆ ಬೆಂಬಲ ಸೂಚಿಸುವುದು ನನ್ನ ಜವಬ್ದಾರಿ, ಶಿವಮೊಗ್ಗ ಕ್ಷೇತ್ರದಲ್ಲಿ ಮತದಾರರು ಗೀತಾ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ, ಈ ಬಾರಿಯ ಚುನಾವಣೆಯ ಫಲಿತಾಂಶ ಗೀತಾ ಪರವಾಗಿರಲಿದೆ ಎಂಬ ನಂಬಿಕೆ ನನಗಿದೆ ಎಂದರು ಶಿವರಾಜಕುಮಾರ್‌.
icon

(5 / 6)

ಪತ್ನಿ ಗೀತಾ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ, ಪತಿಯಾಗಿ ಅರ್ಧಾಂಗಿಗೆ ಬೆಂಬಲ ಸೂಚಿಸುವುದು ನನ್ನ ಜವಬ್ದಾರಿ, ಶಿವಮೊಗ್ಗ ಕ್ಷೇತ್ರದಲ್ಲಿ ಮತದಾರರು ಗೀತಾ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ, ಈ ಬಾರಿಯ ಚುನಾವಣೆಯ ಫಲಿತಾಂಶ ಗೀತಾ ಪರವಾಗಿರಲಿದೆ ಎಂಬ ನಂಬಿಕೆ ನನಗಿದೆ ಎಂದು ಗೀತಾ ಶಿವರಾಜಕುಮಾರ್‌ ಹೇಳಿದರು.
icon

(6 / 6)

ಇತರ ಗ್ಯಾಲರಿಗಳು