Amit Shah in Hubballi: ಹುಬ್ಬಳ್ಳಿಯ ಭೂಮರೆಡ್ಡಿ ಕಾಲೇಜಿನಲ್ಲಿ ಕ್ರೀಡಾಂಗಣ ಉದ್ಘಾಟಿಸಿದ ಅಮಿತ್ ಶಾ
ಹುಬ್ಬಳ್ಳಿ: ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹುಬ್ಬಳ್ಳಿಯಲ್ಲಿರುವ ಕೆಎಲ್‌ಇ ಸೊಸೈಟಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ, ಕ್ರೀಡಾಂಗಣವನ್ನು ಉದ್ಘಾಟಿಸಿದ್ದಾರೆ. ಬಳಿಕ ಕಾಲೇಜಿನ ಅಮೃತ ಮಹೋತ್ಸವದಲ್ಲಿ ಅಮಿತ್ ಶಾ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕುರಿತು ಇಲ್ಲಿದೆ ಮಾಹಿತಿ.
(1 / 5)
ಹುಬ್ಬಳ್ಳಿಯಲ್ಲಿರುವ ಕೆಎಲ್‌ಇ ಸೊಸೈಟಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರೀಡಾಂಗಣವನ್ನು ಉದ್ಘಾಟಿಸಿದರು.(ANI)
(2 / 5)
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.(ANI)
(3 / 5)
ಬಳಿಕ ಬಿವಿಬಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡರು.(ANI)
(4 / 5)
ಈ ವೇಳೆ ಮಾತನಾಡಿದ ಅಮಿತ್ ಶಾ, ಯುವ ಸಬಲೀಕರಣದತ್ತ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದೆ. ಖೇಲೋ ಇಂಡಿಯಾ ಯುವಕರ ಸಾಮರ್ಥ್ಯ ಪ್ರದರ್ಶನಕ್ಕೆ ಅಗತ್ಯ ವೇದಿಕೆ ಕಲ್ಪಿಸಿದೆ ಎಂದು ಹೇಳಿದರು.(ANI)
(5 / 5)
ನೀವು ದೇಶಕ್ಕಾಗಿ ಬದುಕಿ. ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡಿ. ಅದನ್ನು ಮಾಡಲು ಪ್ರಧಾನಿ ಮೋದಿ ನಿಮಗೆ ಎಲ್ಲಾ ಅವಕಾಶಗಳನ್ನು ನೀಡಿದ್ದಾರೆ ಎಂದು ಅಮಿತ್ ಶಾ ಇದೇ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.(ANI)
ಇತರ ಗ್ಯಾಲರಿಗಳು