ಇವನು ಹುಡುಗನಲ್ಲ, ಸುನಾಮಿ; 35 ಬಾಲ್ಗಳಲ್ಲೇ ಶತಕ ಸಿಡಿಸಿ ಹಲವು ದಾಖಲೆ ನಿರ್ಮಿಸಿದ 14 ವರ್ಷದ ಪೋರ ವೈಭವ್ ಸೂರ್ಯವಂಶಿ
ಜೈಪುರದಲ್ಲಿ ಜರುಗಿದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಯುವ ಆಟಗಾರ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ ಬಾರಿಸಿ ಹಲವು ದಾಖಲೆ ನಿರ್ಮಿಸಿದ್ದಾರೆ.
(1 / 8)
ರಾಜಸ್ಥಾನ್ ರಾಯಲ್ಸ್ ಯಂಗ್ಸ್ಟರ್ ವೈಭವ್ ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ನೂತನ ಚರಿತ್ರೆ ಸೃಷ್ಟಿಸಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 35 ಎಸೆತಗಳಲ್ಲಿ ಶತಕ ಬಾರಿಸಿದ ವೈಭವ್, ಹಲವು ದಾಖಲೆ ನಿರ್ಮಿಸಿದ್ದಾರೆ.
(AFP)(2 / 8)
ಐಪಿಎಲ್ನ 47ನೇ ಪಂದ್ಯದಲ್ಲಿ 38 ಎಸೆತಗಳಲ್ಲಿ 7 ಬೌಂಡರಿ, 11 ಸಿಕ್ಸರ್ಗಳ ಸಹಿತ 265.79ರ ಸ್ಟ್ರೈಕ್ರೇಟ್ನಲ್ಲಿ 101 ಬಾರಿಸಿದ ವೈಭವ್, ಪ್ರಸಿದ್ಧ್ ಕೃಷ್ಣ ಬೌಲಿಂಗ್ನಲ್ಲಿ ಕ್ಲೀನ್ ಬೋಲ್ಡ್ ಆದರು. ಇದೀಗ 14 ವರ್ಷದ ಪೋರ ನಿರ್ಮಿಸಿದ ದಾಖಲೆಗಳ ಪಟ್ಟಿ ನೋಡೋಣ.
(AFP)(3 / 8)
ಅತಿ ವೇಗದ ಶತಕ: ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕ ಬಾರಿಸಿದ ಎರಡನೇ ಆಟಗಾರ ಎನಿಸಿದ್ದಾರೆ. ಕ್ರಿಸ್ಗೇಲ್ ಮೊದಲ ಸ್ಥಾನ ಪಡೆದಿದ್ದಾರೆ. ಅವರು 30 ಎಸೆತಗಳಲ್ಲೇ ಈ ಸಾಧನೆ ಮಾಡಿದ್ದರು.
(AP)(4 / 8)
ಭಾರತದ ವೇಗದ ಶತಕವೀರ: ಐಪಿಎಲ್ನಲ್ಲಿ ಭಾರತದ ಪರ ಅತಿ ವೇಗವಾಗಿ ಸೆಂಚುರಿ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರಿಗಿಂತ ಯೂಸಫ್ ಪಠಾಣ್ ವೇಗವಾಗಿ 100 ಬಾರಿಸಿದ ಭಾರತದ ಆಟಗಾರನಾಗಿದ್ದರು. ಇದೀಗ ಇವರ ದಾಖಲೆ ವೈಭವ್ ಮುರಿದಿದ್ದಾರೆ.
(REUTERS)(5 / 8)
ಅತ್ಯಂತ ಕಿರಿಯ ಆಟಗಾರ: ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಐಪಿಎಲ್ನಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
(REUTERS)(6 / 8)
ರಿಯಾನ್ ಪರಾಗ್ ದಾಖಲೆ ಬ್ರೇಕ್: ಈ ಪಂದ್ಯದಲ್ಲಿ ವೈಭವ್ 17 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿ ಕಿರಿಯ ಆಟಗಾರ ಎನಿಸಿದ್ದಾರೆ. 14 ವರ್ಷ 32 ದಿನಗಳಲ್ಲಿ ಈ ಮೈಲಿಗಲ್ಲು ತಲುಪಿದ ವೈಭವ್, ತಮ್ಮ ತಂಡದ ಹಿರಿಯ ಆಟಗಾರ ರಿಯಾನ್ ಪರಾಗ್ (2019 ರಲ್ಲಿ 17 ವರ್ಷ 175 ದಿನಗಳು) ದಾಖಲೆ ಮುರಿದರು.
(AFP)(7 / 8)
ವೈಭವ್ ಸೂರ್ಯವಂಶಿ ಐಪಿಎಲ್ನಲ್ಲಿ ಮಾತ್ರವಲ್ಲದೆ ಪುರುಷರ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಚರಿತ್ರೆ ಸೃಷ್ಟಿಸಿದ್ದಾರೆ.
(AFP)ಇತರ ಗ್ಯಾಲರಿಗಳು