Vande Bharat Express: ಕಲಬುರಗಿ-ಬೆಂಗಳೂರು ಮಾರ್ಗದ ವಂದೇ ಭಾರತ್ ರೈಲು ವೇಳಾಪಟ್ಟಿ, ಟಿಕೆಟ್ ದರ ಹೀಗಿದೆ
ಕಲಬುರಗಿ-ಬೆಂಗಳೂರು ಮಧ್ಯದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೋಡ್‍ನಲ್ಲಿ ಚಾಲನೆ ನೀಡುವ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಕನಸು ನನಸು ಮಾಡಿದ್ದಾರೆ.
(1 / 7)
ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಸುಮಾರು 2000ಕ್ಕೂ ಅಧಿಕ ಜನರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವ ಮೂಲಕ ಹೊಸ ರೈಲು ಸಂಚಾರಕ್ಕೆ ಪ್ರಧಾನಿ ಮೋದಿಯವರು ಹಸಿರು ನಿಶಾನೆ ತೋರುತ್ತಿದ್ದಂತೆಯೇ ಜನರು ಶಿಳ್ಳೆ ಮತ್ತು ಚಪ್ಪಾಳೆ ಮೂಲಕ ಸಂತಸ ವ್ಯಕ್ತಪಡಿಸಿದರು.ಈ ವೇಳೆ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ಡಾ.ಉಮೇಶ್ ಜಾಧವ್ ಮಾತನಾಡಿ, ಮೊದಲ ದಿನದ ವಂದೇ ಭಾರತ್ ಎಕ್ಸ್ಸ್‌ಪ್ರೆಸ್ ರೈಲಿನಲ್ಲಿ ವಿಶೇಷ ಕಾಳಜಿಯೊಂದಿಗೆ ಕ್ಯಾನ್ಸರ್ ರೋಗಿಗಳಿಗೆ ಸ್ಪೆಷಲ್ ಟಿಕೆಟ್ ಮೂಲಕ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ಹೀಗೆ ಪ್ರಯಾಣಿಸುವ ವ್ಯಕ್ತಿಗಳು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದರು.
(2 / 7)
ಅಫಜಲಪುರದಿಂದ ಶಹಾಪುರ ಗಡಿಯವರೆಗೆ 1575 ಕೋಟಿ ರೂಪಾಯಿ ವೆಚ್ಚದಲ್ಲಿ 71 ಕಿ.ಮೀ. ಭಾರತ್ ಮಾಲಾ ರಸ್ತೆ ನಿರ್ಮಾಣವಾಗುತ್ತಿದೆ. 500 ಕೋಟಿ ರೂಪಾಯಿ ವೆಚ್ಚದಲ್ಲಿ ಮನೆಮನೆಗೆ ಅಡುಗೆ ಅನಿಲ ಪೂರೈಕೆ ಪ್ರಗತಿಯಲ್ಲಿದೆ. 1500 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಅಡಿ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಸಂಸದ ಡಾ.ಉಮೇಶ್ ಜಾಧವ್ ಚಾಲನೆ ನೀಡಿದರು.
(3 / 7)
ಇದೇ ಫೆಬ್ರವರಿ 22ರಿಂದ ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಸೇವೆ ಆರಂಭಿಸಲಾಗಿದೆ. ಈ ವಿಮಾನ ನಿಲ್ದಾಣದಲ್ಲಿ ಎರಡು ಪೈಲೆಟ್ ತರಬೇತಿ ಸಂಸ್ಥೆಗಳು ಕಾರ್ಯಾಚರಿಸುತ್ತಿವೆ. ರಿಂಗ್ ರೋಡ್ ಸರ್ವಿಸ್ ರಸ್ತೆಗೆ ಚಾಲನೆ ನೀಡಲಾಗಿದೆ. ಕಲಬುರಗಿಯ ಕೋಟನೂರ್ ಬಳಿ ಕೃಷಿ ಶೀತಲೀಕರಣ ಘಟಕ ಆರಂಭಿಸಲಾಗಿದೆ. ಸನ್ನತಿ-ಕನಗನಹಳ್ಳಿ ಬೌದ್ಧ ಸ್ತೂಪ ಅಭಿವೃದ್ಧಿಗೆ ಹಣ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಸರಕಾರದ ಸಾಧನೆಗಳನ್ನು ವಿವರಿಸಿದರು ಅವರು ವಿವರಿಸಿದರು.
(4 / 7)
ಕಲಬುರಗಿ ರೈಲ್ವೆ ನಿಲ್ದಾಣದಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ಸರ್‌ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ವಾರದ 6 ದಿನಗಳು ಸಂಚಾರವಾಗಲಿದೆ. ಕಲಬುರಗಿಯಿಂದ ಬೆಳಗ್ಗೆ 5.15ಕ್ಕೆ ಹೊರಡಲಿರುವ ವಂದೇ ಭಾರತ್ ರೈಲು ಮಧ್ಯಾಹ್ನ, 2 ಗಂಟೆಗೆ ಬೆಂಗಳೂರು ತಲುಪಲಿದೆ.
(5 / 7)
ಕಲಬುರಗಿಯಿಂದ ಬೆಳಗ್ಗೆ 5.15ಕ್ಕೆ ಹೊರಟ ರೈಲು 5.40ಕ್ಕೆ ವಾಡಿ, 6.53ಕ್ಕೆ ರಾಯಚೂರು, 7.08ಕ್ಕೆ ಮಂತ್ರಾಲಯಂ ರೂಡ್ ನಿಲ್ದಾಣಕ್ಕೆ, 8.25ಕ್ಕೆ ಗುಂತಕಲ್‌ಗೆ ಆಗಮಿಸಲಿದೆ. ಕಲಬುರಗಿಯಿಂದ ಬರುವ ವಂದೇ ಭಾರತ್ ರೈಲು ಬೆಳಗ್ಗೆ 9.28ಕ್ಕೆ ಅನಂತಪುರಂ, 10.50ಕ್ಕೆ ಧರ್ಮಾವರಂ, 12.45ಕ್ಕೆ ಯಲಹಂಕ, ಮಧ್ಯಾಹ್ನ 2 ಗಂಟೆಗೆ ಬೈಯ್ಯಪ್ಪನಹಳ್ಳಿಗೆ ಆಗಮಿಸುತ್ತದೆ.
ಇತರ ಗ್ಯಾಲರಿಗಳು