ಟಿ20 ಕ್ರಿಕೆಟ್‌ನಲ್ಲಿ ಚರಿತ್ರೆ ಸೃಷ್ಟಿಸಿದ ವಿರಾಟ್ ಕೊಹ್ಲಿ; ಈ ಮೈಲಿಗಲ್ಲು ತಲುಪಿದ ಭಾರತದ ಮೊದಲ, ವಿಶ್ವದ 2ನೇ ಆಟಗಾರ
- Virat Kohli: ಆರ್ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಬಾರಿಸಿದ ವಿಶ್ವದ 2ನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
- Virat Kohli: ಆರ್ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಬಾರಿಸಿದ ವಿಶ್ವದ 2ನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
(1 / 7)
ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಕರ್ಷಕ ಅರ್ಧಶತಕ ಸಿಡಿಸಿದ ಆರ್ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಟಿ20 ಕ್ರಿಕೆಟ್‌ನಲ್ಲಿ ನೂತನ ಇತಿಹಾಸ ನಿರ್ಮಿಸಿದ್ದಾರೆ.
(REUTERS)(2 / 7)
ಐಪಿಎಲ್ನ 28ನೇ ಪಂದ್ಯದಲ್ಲಿ 45 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಿತ ಅಜೇಯ 62 ರನ್ ಸಿಡಿಸಿದ ಕೊಹ್ಲಿ, ಚುಟುಕು ಕ್ರಿಕೆಟ್‌ನಲ್ಲಿ ಅರ್ಧಶತಕಗಳ 'ಶತಕ' ಸಾಧನೆ ಮಾಡಿದ್ದಾರೆ.
(Surjeet Yadav)(3 / 7)
ಟಿ20 ಕ್ರಿಕೆಟ್ ಇತಿಹಾಸದಲ್ಲಿ ನೂರು ಅರ್ಧಶತಕಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೂ ವಿಶ್ವದ ಎರಡನೇ ಬ್ಯಾಟರ್ ಕೂಡ ಆಗಿದ್ದಾರೆ.
(PTI)(4 / 7)
ಚುಟುಕು ಕ್ರಿಕೆಟ್ ಇತಿಹಾಸದಲ್ಲಿ 405 ಪಂದ್ಯಗಳ 388 ಇನ್ನಿಂಗ್ಸ್ಗಳಲ್ಲಿ ಕಣಕ್ಕಿಳಿದಿರುವ ವಿರಾಟ್, 13134 ರನ್ ಸಿಡಿಸಿದ್ದಾರೆ. ಬಲಗೈ ಬ್ಯಾಟ್ಸ್‌ಮನ್ ಟಿ20ಗಳಲ್ಲಿ 100 ಅರ್ಧಶತಕ, 9 ಶತಕ ಬಾರಿಸಿದ್ದಾರೆ.
(PTI)(5 / 7)
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 125 ಪಂದ್ಯಗಳ 117 ಇನ್ನಿಂಗ್ಸ್ಗಳಲ್ಲಿ 4188 ರನ್ ಗಳಿಸಿದ್ದಾರೆ. 38 ಅರ್ಧಶತಕ, 1 ಶತಕ ಸಿಡಿಸಿದ್ದಾರೆ. ಐಪಿಎಲ್ನಲ್ಲಿ 58 ಅರ್ಧಶತಕ, 8 ಶತಕ ಬಾರಿಸಿರುವ ಕೊಹ್ಲಿ, ದೇಶೀಯ ಕ್ರಿಕೆಟ್ ಸೇರಿದಂತೆ ಉಳಿದ ಟಿ20ಗಳಲ್ಲಿ 4 ಅರ್ಧಶತಕ ಚಚ್ಚಿದ್ದಾರೆ.
(PTI)(6 / 7)
ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಭಾರತದ ಆಟಗಾರರ ಪೈಕಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಅವರು 452 ಪಂದ್ಯಗಳ 439 ಇನ್ನಿಂಗ್ಸ್ಗಳಲ್ಲಿ 78 ಅರ್ಧಶತಕ ಸಿಡಿಸಿದ್ದಾರೆ. 8 ಶತಕ ಬಾರಿಸಿದ್ದಾರೆ.
(PTI)ಇತರ ಗ್ಯಾಲರಿಗಳು