ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್; ಎಂಎಸ್ ಧೋನಿಯನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್; ಎಂಎಸ್ ಧೋನಿಯನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ

  • Virat Kohli Record in IPL: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ಸಿಕ್ಸರ್ ಬಾರಿಸಿದ ವಿರಾಟ್ ಕೊಹ್ಲಿ,  ಅತಿ ಹೆಚ್ಚು ಸಿಕ್ಸರ್​ ಬಾರಿಸಿದವರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದರು. ಅವರು 4 ಬೌಂಡರಿ ಮತ್ತು 4 ಸಿಕ್ಸರ್​​ ಸಿಡಿಸಿ ಭರ್ಜರಿ ಇನ್ನಿಂಗ್ಸ್ ಕಟ್ಟಿದರು. ಈ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸಿದ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಿದ್ದಾರೆ.
icon

(1 / 6)

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್​​​ಗಳ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ, 4ನೇ ಸ್ಥಾನಕ್ಕೇರಿದ್ದಾರೆ. 240 ಐಪಿಎಲ್ ಪಂದ್ಯಗಳ 232 ಇನ್ನಿಂಗ್ಸ್​​ಗಳಲ್ಲಿ 241 ಸಿಕ್ಸರ್​​ ಬಾರಿಸಿದ್ದಾರೆ. ಕೊಹ್ಲಿ ಆರ್​ಸಿಬಿ ತಂಡದ ಪರ ಮಾತ್ರ ಕಣಕ್ಕಿಳಿದು ಈ ಸಾಧನೆ ಮಾಡಿದ್ದಾರೆ.
icon

(2 / 6)

ಐಪಿಎಲ್​​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್​​ಮನ್​ಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. 252 ಪಂದ್ಯಗಳ 218 ಇನ್ನಿಂಗ್ಸ್​​ಗಳಲ್ಲಿ 239 ಸಿಕ್ಸರ್​​ ಸಿಡಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪರ ಆಡುವ ಮೂಲಕ ಧೋನಿ ಈ ಸಾಧನೆ ಮಾಡಿದ್ದಾರೆ.
icon

(3 / 6)

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 142 ಪಂದ್ಯಗಳ 141 ಇನ್ನಿಂಗ್ಸ್​​ಗಳಲ್ಲಿ 357 ಸಿಕ್ಸರ್​​ ಬಾರಿಸಿದ್ದಾರೆ. ಗೇಲ್ ಕೋಲ್ಕತಾ ನೈಟ್ ರೈಡರ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು.
icon

(4 / 6)

ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ಯಶಸ್ವಿ ಬ್ಯಾಟ್ಸ್​ಮನ್​. ಡೆಕ್ಕನ್ ಚಾರ್ಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರ 245 ಪಂದ್ಯಗಳ 240 ಇನ್ನಿಂಗ್ಸ್​​ಗಳಲ್ಲಿ ಆಡಿರುವ ಅವರು ಒಟ್ಟು 261 ಸಿಕ್ಸರ್​ ಚಚ್ಚಿದ್ದಾರೆ.
icon

(5 / 6)

ಎಬಿ ಡಿವಿಲಿಯರ್ಸ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. 184 ಪಂದ್ಯಗಳ 170 ಇನ್ನಿಂಗ್ಸ್​ಗಳಲ್ಲಿ 251 ಸಿಕ್ಸರ್​ ಬಾರಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವ ಮೂಲಕ ಎಬಿಡಿ ಈ ಸಾಧನೆ ಮಾಡಿದ್ದಾರೆ.
icon

(6 / 6)

IPL_Entry_Point

ಇತರ ಗ್ಯಾಲರಿಗಳು