ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್; ಎಂಎಸ್ ಧೋನಿಯನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ
- Virat Kohli Record in IPL: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ಸಿಕ್ಸರ್ ಬಾರಿಸಿದ ವಿರಾಟ್ ಕೊಹ್ಲಿ, ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.
- Virat Kohli Record in IPL: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ಸಿಕ್ಸರ್ ಬಾರಿಸಿದ ವಿರಾಟ್ ಕೊಹ್ಲಿ, ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.
(1 / 6)
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದರು. ಅವರು 4 ಬೌಂಡರಿ ಮತ್ತು 4 ಸಿಕ್ಸರ್ ಸಿಡಿಸಿ ಭರ್ಜರಿ ಇನ್ನಿಂಗ್ಸ್ ಕಟ್ಟಿದರು. ಈ ಪಂದ್ಯದಲ್ಲಿ 4 ಸಿಕ್ಸರ್ ಬಾರಿಸಿದ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಿದ್ದಾರೆ.
(2 / 6)
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ಗಳ ಪಟ್ಟಿಯಲ್ಲಿ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ, 4ನೇ ಸ್ಥಾನಕ್ಕೇರಿದ್ದಾರೆ. 240 ಐಪಿಎಲ್ ಪಂದ್ಯಗಳ 232 ಇನ್ನಿಂಗ್ಸ್ಗಳಲ್ಲಿ 241 ಸಿಕ್ಸರ್ ಬಾರಿಸಿದ್ದಾರೆ. ಕೊಹ್ಲಿ ಆರ್ಸಿಬಿ ತಂಡದ ಪರ ಮಾತ್ರ ಕಣಕ್ಕಿಳಿದು ಈ ಸಾಧನೆ ಮಾಡಿದ್ದಾರೆ.
(3 / 6)
ಐಪಿಎಲ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. 252 ಪಂದ್ಯಗಳ 218 ಇನ್ನಿಂಗ್ಸ್ಗಳಲ್ಲಿ 239 ಸಿಕ್ಸರ್ ಸಿಡಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪರ ಆಡುವ ಮೂಲಕ ಧೋನಿ ಈ ಸಾಧನೆ ಮಾಡಿದ್ದಾರೆ.
(4 / 6)
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 142 ಪಂದ್ಯಗಳ 141 ಇನ್ನಿಂಗ್ಸ್ಗಳಲ್ಲಿ 357 ಸಿಕ್ಸರ್ ಬಾರಿಸಿದ್ದಾರೆ. ಗೇಲ್ ಕೋಲ್ಕತಾ ನೈಟ್ ರೈಡರ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು.
(5 / 6)
ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ಯಶಸ್ವಿ ಬ್ಯಾಟ್ಸ್ಮನ್. ಡೆಕ್ಕನ್ ಚಾರ್ಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರ 245 ಪಂದ್ಯಗಳ 240 ಇನ್ನಿಂಗ್ಸ್ಗಳಲ್ಲಿ ಆಡಿರುವ ಅವರು ಒಟ್ಟು 261 ಸಿಕ್ಸರ್ ಚಚ್ಚಿದ್ದಾರೆ.
ಇತರ ಗ್ಯಾಲರಿಗಳು