ಕನ್ನಡ ಸುದ್ದಿ  /  Photo Gallery  /  Weather Update Isolated To Scattered Rains Thunder Storms Very Likely Over Coastal Malenadu Dist Parts Till Apr 04 Uks

ಏಪ್ರಿಲ್ 4ರ ತನಕದ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಚದುರಿದ ಮಳೆ ನಿರೀಕ್ಷೆ

ಮುಂದಿನ ಒಂದು ವಾರದ ತನಕ ಅಂದರೆ ಏಪ್ರಿಲ್ 4ರ ತನಕ ಮಳೆ ಮುನ್ಸೂಚನೆ ಪ್ರಕಾರ, ಕರಾವಳಿ, ಮಲೆನಾಡು ಜಿಲ್ಲೆಗಳ ವ್ಯಾಪ್ತಿಯೊಳಗೆ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮಿಂಚುಗಳ ಮುನ್ನೆಚ್ಚರಿಕೆಯೂ ಇದೆ. 
CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಕರವಾಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 4ರ ತನಕ ಕೆಲವು ಕಡೆಗಳಲ್ಲಿ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಚದುರಿದ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ವರದಿ ಹೇಳಿದೆ. ಮಾರ್ಚ್ 27ರಿಂದ ಏಪ್ರಿಲ್ 4ರ ತನಕ ಮಳೆ ಮುನ್ಸೂಚನೆ ಗಮನಿಸಿದರೆ ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆ, ಬೆಳಗಾವಿ ತನಕವೂ ಮಳೆ ಮುನ್ಸೂಚನೆ ಕಾಣಿಸಿದೆ. 
icon

(1 / 7)

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿನ್ನೆ (ಮಾರ್ಚ್ 27) ಹಂಚಿಕೊಂಡಿರುವ ಮಾಹಿತಿ ಪ್ರಕಾರ, ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 4ರ ತನಕ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಮತ್ತು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಏಪ್ರಿಲ್ 04, 2024 ರವರೆಗೆ ಒಣ ಹವೆಯಿರುವ ಸಾಧ್ಯತೆಯಿದೆ. ಇಂದು (ಮಾರ್ಚ್ 28) ಮಂಗಳೂರು ಸುತ್ತಮುತ್ತ ಮತ್ತು ಕರಾವಳಿ ಜಿಲ್ಲೆಗಳ ಒಳನಾಡಿನಲ್ಲಿ, ಉಡುಪಿ, ಶಿವಮೊಗ್ಗ ಭಾಗದ ಕೆಲವು ಕಡೆ, ಉತ್ತರ ಕನ್ನಡ, ಕಾರವಾರ, ಬೆಳಗಾವಿ ಭಾಗದಲ್ಲಿ ಕೆಲವು ಕಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. 
icon

(2 / 7)

ಮಳೆ ಮುನ್ಸೂಚನೆ ಪ್ರಕಾರ ಮಾರ್ಚ್‌ 29 ಮತ್ತು 30 ರಂದು ಮಂಗಳೂರು, ದಕ್ಷಿಣ ಕನ್ನಡ ಭಾಗದಲ್ಲಿ ಮಳೆ ಪ್ರಮಾಣ ತುಸು ಹೆಚ್ಚಾಗಲಿದ್ದು, ಉಳಿದಂತೆ ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಹುಬ್ಬಳ್ಳಿ, ಉತ್ತರ ಕನ್ನಡ, ಬೆಳಗಾವಿ ತನಕವೂ ಮಳೆ ಬೀಳುವ ಸಾಧ್ಯತೆ ಇದೆ. ಇದಲ್ಲದೆ, ಬಳ್ಳಾರಿ, ರಾಯಚೂರು, ವಿಜಯಪುರದ ಒಂದೆರಡು ಕಡೆ ಮಳೆ ಬೀಳಬಹುದು.
icon

(3 / 7)

ಹಿಂದೂಸ್ತಾನ್ ಟೈಮ್ಸ್ ಕನ್ನಡದಲ್ಲಿ ಸುದ್ದಿ ಫಟಾಫಟ್ ಅಪ್‌ಡೇಟ್ ಆಗುತ್ತೆ. ಖುಷಿಪಟ್ಟು ಓದುವಂಥ ಎಷ್ಟೋ ವಿಷಯಗಳು ಸದಾ ಇರುತ್ವೆ. ಇದನ್ನು ನೀವಷ್ಟೆ ಓದಿ ಸುಮ್ಮನಾಗಲ್ಲ. ನಿಮ್ಮವರಿಗೂ ಶೇರ್ ಮಾಡ್ತೀರಿ. 
icon

(4 / 7)

ಹಿಂದೂಸ್ತಾನ್ ಟೈಮ್ಸ್ ಕನ್ನಡದಲ್ಲಿ ಸುದ್ದಿ ಫಟಾಫಟ್ ಅಪ್‌ಡೇಟ್ ಆಗುತ್ತೆ. ಖುಷಿಪಟ್ಟು ಓದುವಂಥ ಎಷ್ಟೋ ವಿಷಯಗಳು ಸದಾ ಇರುತ್ವೆ. ಇದನ್ನು ನೀವಷ್ಟೆ ಓದಿ ಸುಮ್ಮನಾಗಲ್ಲ. ನಿಮ್ಮವರಿಗೂ ಶೇರ್ ಮಾಡ್ತೀರಿ. (HT Kannnada)

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಶೇರ್ ಮಾಡಿರುವ ಮಳೆ ಮುನ್ಸೂಚನೆ ಪ್ರಕಾರ ಮಾರ್ಚ್ 31 ಮತ್ತು ಏಪ್ರಿಲ್ 1ರಂದು ಮಂಗಳೂರು, ಉಡುಪಿ, ಉತ್ತರ ಕನ್ನಡ, ಹುಬ್ಬಳ್ಳಿ, ಬೆಳಗಾವಿ ಭಾಗದಲ್ಲಿ ಒಂದೆರಡು ಕಡೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ. ಮಂಗಳೂರು ಸುತ್ತಮುತ್ತ ಮಳೆ ಪ್ರಮಾಣ ಹೆಚ್ಚು ಇರಬಹುದು. 
icon

(5 / 7)

ಮಳೆ ಮುನ್ಸೂಚನೆ ವರದಿ ಪ್ರಕಾರ ಏಪ್ರಿಲ್ 2 ಮತ್ತು 3 ರಂದು ಕೂಡ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಸುತ್ತಮುತ್ತ ಮತ್ತು ಶಿವಮೊಗ್ಗ ಸಮೀಪ ಹಗುರ ಚದುರಿದ ಮಳೆ ಬೀಳಲಿದೆ. 
icon

(6 / 7)

ಏಪ್ರಿಲ್ 4ರಂದು ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ. ಉಳಿದಂತೆ ಹುಬ್ಬಳ್ಳಿ, ಮೈಸೂರು, ಬೆಳಗಾವಿ ಭಾಗದಲ್ಲಿ ಒಂದೆರಡು ಕಡೆ ಮಳೆ ಬೀಳಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
icon

(7 / 7)

IPL_Entry_Point

ಇತರ ಗ್ಯಾಲರಿಗಳು