ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಭಾರತದ ಅತ್ಯಂತ ಯಶಸ್ವಿ ನಾಯಕ ಯಾರು? ಗಂಗೂಲಿ ದಾಖಲೆ ಮುರಿದ ರೋಹಿತ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಭಾರತದ ಅತ್ಯಂತ ಯಶಸ್ವಿ ನಾಯಕ ಯಾರು? ಗಂಗೂಲಿ ದಾಖಲೆ ಮುರಿದ ರೋಹಿತ್

ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಭಾರತದ ಅತ್ಯಂತ ಯಶಸ್ವಿ ನಾಯಕ ಯಾರು? ಗಂಗೂಲಿ ದಾಖಲೆ ಮುರಿದ ರೋಹಿತ್

  • Rohit Sharma: ಅಂತಾರಾಷ್ಟ್ರೀಯ ಕ್ರಿಕೆಟ್​​​ನಲ್ಲಿ ಅತ್ಯಂತ ಯಶಸ್ವಿ ಭಾರತೀಯ ನಾಯಕರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರು ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿದ್ದಾರೆ.

ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋಲು, ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ವೈಟ್​ವಾಶ್ ಮತ್ತು ಬಾರ್ಡರ್-ಗವಾಸ್ಕರ್ ಟ್ರೋಫಿ ಸೋಲಿನ ಬೆನ್ನಲ್ಲೇ ರೋಹಿತ್​ ಶರ್ಮಾ ಅವರನ್ನು ನಾಯಕತ್ವದಿಂದ ವಜಾಗೊಳಿಸಬೇಕು ಎಂಬ ದೂರುಗಳು ಬಂದಿದ್ದವು. ಆದರೀಗ ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದು ರೋಹಿತ್ ತಿರುಗೇಟು ಕೊಟ್ಟಿದ್ದಾರೆ.
icon

(1 / 8)

(AP)

ರೋಹಿತ್​ ಶರ್ಮಾ ನಾಯಕತ್ವದಲ್ಲಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ವೈಟ್​ ವಾಶ್ ಮಾಡಿಕೊಂಡ ಭಾರತ ತಂಡ, ದಾಖಲೆ ಬರೆಯಿತು. ಈ ಸರಣಿ ಜಯದೊಂದಿಗೆ ಹಿಟ್​ಮ್ಯಾನ್​ ಕೂಡ ದಾಖಲೆಗೆ ಒಳಗಾದರು.
icon

(2 / 8)

(Surjeet Yadav)

ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4ನೇ ಅತ್ಯಂತ ಯಶಸ್ವಿ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ ಸೌರವ್ ಗಂಗೂಲಿ ದಾಖಲೆಯನ್ನು ಹಿಂದಿಕ್ಕಿದ್ದಾರೆ.
icon

(3 / 8)

(PTI)

ರೋಹಿತ್​ ಶರ್ಮಾ ನಾಯಕನಾಗಿ ಇದುವರೆಗೆ ಮುನ್ನಡೆಸಿದ 137 ಪಂದ್ಯಗಳಲ್ಲಿ 98ರಲ್ಲಿ ಗೆಲುವಿನ ಸಿಹಿ ಕಂಡಿದ್ದಾರೆ. ಅಹ್ಮದಾಬಾದ್​ನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮಾಡಿದರು. ಆ ಪಂದ್ಯದಲ್ಲಿ ಭಾರತ 142 ರನ್‌ಗಳಿಂದ ಗೆದ್ದಿತು.
icon

(4 / 8)

ನಾಯಕನಾಗಿ ಭಾರತಕ್ಕೆ ಅತಿ ಹೆಚ್ಚು ಪಂದ್ಯಗಳನ್ನು ಗೆಲ್ಲಿಸುವ ವಿಷಯದಲ್ಲಿ ರೋಹಿತ್, ಸೌರವ್ ಗಂಗೂಲಿಯನ್ನು ಹಿಂದಿಕ್ಕಿದ್ದಾರೆ. ಗಂಗೂಲಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಗಂಗೂಲಿ ತಮ್ಮ ಕ್ರಿಕೆಟ್​ ಕರಿಯರ್​ನಲ್ಲಿ 195 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿ 97 ಬಾರಿ ಗೆಲುವು ತಂದುಕೊಟ್ಟಿದ್ದಾರೆ.
icon

(5 / 8)

(X)

ಎಂಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಭಾರತೀಯ ನಾಯಕ. ಅವರು ಗರಿಷ್ಠ ಸಂಖ್ಯೆಯ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಲ್ಲದೆ, ಗರಿಷ್ಠ ಸಂಖ್ಯೆಯ ಗೆಲುವುಗಳನ್ನು ದಾಖಲಿಸಿದ್ದಾರೆ. ಧೋನಿ ನಾಯಕತ್ವದಲ್ಲಿ ಭಾರತ 332 ಪಂದ್ಯಗಳಲ್ಲಿ 178ರಲ್ಲಿ ಗೆದ್ದಿದೆ.
icon

(6 / 8)

ಭಾರತದ ಪರ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ನಾಯಕರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತ 135 ಪಂದ್ಯಗಳಲ್ಲಿ ಜಯಗಳಿಸಿದೆ. ಅವರು 213 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದರು. 2013 ರಿಂದ ಜನವರಿ 2022 ರವರೆಗೆ ಭಾರತದ ನಾಯಕರಾಗಿ ಸೇವೆ ಸಲ್ಲಿಸಿದರು.
icon

(7 / 8)

(AFP)

ಮೊಹಮ್ಮದ್ ಅಜರುದ್ದೀನ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ 221 ಪಂದ್ಯಗಳಲ್ಲಿ 104ರಲ್ಲಿ ಗೆದ್ದಿತು. ಅಜರುದ್ದೀನ್ 1990 ರಿಂದ 1999 ರವರೆಗೆ ಭಾರತವನ್ನು ಮುನ್ನಡೆಸಿದ್ದರು.
icon

(8 / 8)

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು