ಚಾಂಪಿಯನ್ಸ್ ಟ್ರೋಫಿಯಲ್ಲಿ ಅತ್ಯಂತ ಯಶಸ್ವಿ ನಾಯಕ ಯಾರು? ಅಗ್ರ-5 ಸ್ಥಾನಗಳಲ್ಲಿ ಭಾರತದ ಇಬ್ಬರಿಗೆ ಸ್ಥಾನ
- ಐಸಿಸಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಟಾಪ್ -5 ನಾಯಕರ ಪಟ್ಟಿಯಲ್ಲಿ ಎಂಎಸ್ ಧೋನಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ಇಬ್ಬರು ಮಾಜಿ ನಾಯಕರು ಇರುವುದು ವಿಶೇಷ.
- ಐಸಿಸಿ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಟಾಪ್ -5 ನಾಯಕರ ಪಟ್ಟಿಯಲ್ಲಿ ಎಂಎಸ್ ಧೋನಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ಇಬ್ಬರು ಮಾಜಿ ನಾಯಕರು ಇರುವುದು ವಿಶೇಷ.
(1 / 5)
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಆಸ್ಟ್ರೇಲಿಯಾದ ದಿಗ್ಗಜ ರಿಕಿ ಪಾಂಟಿಂಗ್ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಟೂರ್ನಿಯಲ್ಲಿ ನಾಯಕನಾಗಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ನಿರ್ಮಿಸಿದ್ದಾರೆ. ಆಸೀಸ್ ಮಾಜಿ ನಾಯಕ 16 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿ, 12 ಗೆಲುವು ಸಾಧಿಸಿದ್ದಾರೆ. 1 ಡ್ರಾ ಸಾಧಿಸಿದ್ದಾರೆ. ಮೂರು ಪಂದ್ಯ ಸೋತಿದ್ದಾರೆ.
(ICC)(2 / 5)
ವೆಸ್ಟ್ ಇಂಡೀಸ್ ಮಾಜಿ ನಾಯಕ ಬ್ರಿಯಾನ್ ಲಾರಾ 2ನೇ ಸ್ಥಾನ ಪಡೆದಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ 15 ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕತ್ವ ವಹಿಸಿದ್ದ ಲಾರಾ 11 ಬಾರಿ ಗೆಲುವಿನ ರುಚಿ ಕಂಡಿದ್ದಾರೆ. 4ರಲ್ಲಿ ಸೋಲನ್ನು ಎದುರಿಸಬೇಕಾಯಿತು.
(X)(3 / 5)
ನ್ಯೂಜಿಲೆಂಡ್ನ ಸ್ಟೀಫನ್ ಫ್ಲೆಮಿಂಗ್ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ 13 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದರು. ಈ ಪೈಕಿ 8 ಗೆಲುವು, 5 ಸೋಲು ಕಂಡಿದ್ದಾರೆ.
(ICC)(4 / 5)
4ನೇ ಸ್ಥಾನದಲ್ಲಿರುವ ಸೌರವ್ ಗಂಗೂಲಿ, ಚಾಂಪಿಯನ್ಸ್ ಟ್ರೋಫಿಯಲ್ಲಿ 11 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿ 7 ಗೆಲುವು, 2 ಸೋಲು ಕಂಡಿದ್ದಾರೆ. ಉಳಿದೆರಡು ಪಂದ್ಯಗಳಿಂದ ಫಲಿತಾಂಶ ಬಂದಿಲ್ಲ.
(X)ಇತರ ಗ್ಯಾಲರಿಗಳು