ಐಪಿಎಲ್​ನಲ್ಲಿ ಅತ್ಯಧಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರು ಯಾರು? ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಪಿಎಲ್​ನಲ್ಲಿ ಅತ್ಯಧಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರು ಯಾರು? ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ

ಐಪಿಎಲ್​ನಲ್ಲಿ ಅತ್ಯಧಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರು ಯಾರು? ಧೋನಿ ದಾಖಲೆ ಮುರಿದ ವಿರಾಟ್ ಕೊಹ್ಲಿ

  • ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಟಾಪ್-6 ಆಟಗಾರರ ಪಟ್ಟಿಯಲ್ಲಿ ಮೂವರು ಭಾರತೀಯರಿದ್ದಾರೆ. ಅವರ ಪಟ್ಟಿ ಇಲ್ಲಿದೆ ನೋಡಿ.

ಪಂಜಾಬ್ ಕಿಂಗ್ಸ್ ವಿರುದ್ಧ ಆರ್​​ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 7 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ ಅಜೇಯ 73 ರನ್ ಗಳಿಸಿದರು. ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ದಕ್ಕಿತು.
icon

(1 / 8)

(AFP)

ಇದು ಐಪಿಎಲ್‌ನಲ್ಲಿ ಕೊಹ್ಲಿ ಅವರ 19ನೇ ಪಂದ್ಯಶ್ರೇಷ್ಠ ಪ್ರಶಸ್ತಿಯಾಗಿದೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 4ನೇ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಭಾರತದ ಎರಡನೇ ಆಟಗಾರನೂ ಆಗಿದ್ದಾರೆ.
icon

(2 / 8)

(PTI)

ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ದಾಖಲೆ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ. ದಕ್ಷಿಣ ಆಫ್ರಿಕಾದ ಮಾಜಿ ಶ್ರೇಷ್ಠ ಬ್ಯಾಟ್ಸ್‌ಮನ್ ಡಿವಿಲಿಯರ್ಸ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 25 ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ.
icon

(3 / 8)

(X)

ಡಿವಿಲಿಯರ್ಸ್ ನಂತರ, ವೆಸ್ಟ್ ಇಂಡೀಸ್‌ನ ಮಾಜಿ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಹೆಸರು ಮುಂದಿನದು. ಗೇಲ್ ಐಪಿಎಲ್‌ನಲ್ಲಿ 22 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
icon

(4 / 8)

ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಅವರು 3ನೇ ಸ್ಥಾನ ಪಡೆದಿದ್ದಾರೆ. 'ಹಿಟ್‌ಮ್ಯಾನ್' ಎಂದೇ ಖ್ಯಾತರಾಗಿರುವ ರೋಹಿತ್, ಐಪಿಎಲ್‌ನಲ್ಲಿ 20 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ.
icon

(5 / 8)

ಅತಿ ಹೆಚ್ಚು ಪಂದ್ಯ ಮ್ಯಾನ್ ಆಫ್ ದಿ ಮ್ಯಾಚ ಪ್ರಶಸ್ತಿ ಜಯಿಸಿದವರ ಪಟ್ಟಿಯಲ್ಲಿ ಕೊಹ್ಲಿ 4ನೇ ಸ್ಥಾನ ಪಡೆದಿದ್ದಾರೆ. ಅವರು 19 ಸಲ ಗೌರವಕ್ಕೆ ಭಾಜನರಾಗಿದ್ದಾರೆ. ಅಲ್ಲದೆ, ಧೋನಿ ದಾಖಲೆ ಮುರಿದಿದ್ದಾರೆ.
icon

(6 / 8)

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಐಪಿಎಲ್‌ನಲ್ಲಿ 18 ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ. 43 ವರ್ಷದ ಧೋನಿ ಇತ್ತೀಚೆಗೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅಜೇಯ 26 ರನ್ ಗಳಿಸುವ ಮೂಲಕ ತಮ್ಮ 18ನೇ ಪ್ರಶಸ್ತಿಯನ್ನು ಗೆದ್ದರು.
icon

(7 / 8)

(ANI)

ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಐಪಿಎಲ್‌ನಲ್ಲಿ 18 ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ. ಕಳೆದ ವರ್ಷದ ಮೆಗಾ ಹರಾಜಿನಲ್ಲಿ ವಾರ್ನರ್ ಮಾರಾಟವಾಗಲಿಲ್ಲ.
icon

(8 / 8)

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು