ಲೆಜೆಂಡ್ಸ್ ಲೀಗ್ ಫೈನಲ್ಗೇರಲು ಭಾರತಕ್ಕೆ ಒಂದೇ ಹೆಜ್ಜೆ ಬಾಕಿ; ಇಂಡೋ-ಆಸೀಸ್ ಸೆಮಿಫೈನಲ್ ವೀಕ್ಷಿಸುವುದೇಗೆ?
- Indian Champions vs Australia Champions: ವಿಶ್ವ ಚಾಂಪಿಯನ್ಶಿಪ್ ಲೆಜೆಂಡ್ಸ್ ಲೀಗ್ನಲ್ಲಿ ಭಾರತ ಚಾಂಪಿಯನ್ಸ್ ಮತ್ತು ಆಸ್ಟ್ರೇಲಿಯಾ ಚಾಂಪಿಯನ್ಸ್ ನಡುವಿನ ಸೆಮಿಫೈನಲ್ ಪಂದ್ಯವನ್ನು ಯಾವಾಗ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ವಿವರ.
- Indian Champions vs Australia Champions: ವಿಶ್ವ ಚಾಂಪಿಯನ್ಶಿಪ್ ಲೆಜೆಂಡ್ಸ್ ಲೀಗ್ನಲ್ಲಿ ಭಾರತ ಚಾಂಪಿಯನ್ಸ್ ಮತ್ತು ಆಸ್ಟ್ರೇಲಿಯಾ ಚಾಂಪಿಯನ್ಸ್ ನಡುವಿನ ಸೆಮಿಫೈನಲ್ ಪಂದ್ಯವನ್ನು ಯಾವಾಗ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ವಿವರ.
(1 / 7)
ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಲೀಗ್-2024ರ 2ನೇ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ಚಾಂಪಿಯನ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಗೆದ್ದ ತಂಡವು ಫೈನಲ್ಗೆ ಅರ್ಹತೆ ಪಡೆದುಕೊಳ್ಳಲಿದೆ.
(2 / 7)
ನಾರ್ಥಾಂಪ್ಟನ್ ಕೌಂಟಿ ಗ್ರೌಂಡ್ನಲ್ಲಿ ಇಂಡೋ-ಆಸೀಸ್ ಸೆಮಿಫೈನಲ್ ನಡೆಯಲಿದೆ. ಇಂದು ರಾತ್ರಿ 9 ಗಂಟೆಗೆ ನಡೆಯುವ ಪಂದ್ಯದ ನೇರ ಪ್ರಸಾರ ವೀಕ್ಷಿಸುವುದೇಗೆ? ಇಲ್ಲಿದೆ ವಿವರ. 8.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
(3 / 7)
ಇಂದು ನಡೆಯುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ಮತ್ತು ವೆಸ್ಟ್ ಇಂಡೀಸ್ ಚಾಂಪಿಯನ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ನಾರ್ಥಾಂಪ್ಟನ್ ಕೌಂಟಿ ಗ್ರೌಂಡ್ನಲ್ಲೇ ನಡೆಯಲಿದೆ. ಮೊದಲ ಸೆಮಿಫೈನಲ್ ಸಂಜೆ 5 ಗಂಟೆಗೆ ಆರಂಭವಾಗಲಿದೆ. ಸಂಜೆ 4:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
(4 / 7)
ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಲೀಗ್ನ ಎರಡೂ ಸೆಮಿಫೈನಲ್ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಹೆಚ್ಡಿ, ಸ್ಟಾರ್ ಸ್ಪೋರ್ಟ್ಸ್ 1 ಕನ್ನಡದಲ್ಲಿ ಈ ಪಂದ್ಯ ಪ್ರಸಾರವಾಗಲಿದೆ.
(5 / 7)
ಭಾರತದಲ್ಲಿ ಪಂದ್ಯಗಳನ್ನು ಲೈವ್ ಸ್ಟ್ರೀಮ್ ಮಾಡುವ ಹಕ್ಕುಗಳನ್ನು ಫ್ಯಾನ್ ಕೋಡ್ ಹೊಂದಿದೆ. ಆದ್ದರಿಂದ, ಆಟವನ್ನು ಫ್ಯಾನ್ಕೋಡ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ನೋಡಬಹುದು. ಮೊಬೈಲ್ನಲ್ಲಿ ಆಟವನ್ನು ಉಚಿತವಾಗಿ ನೋಡಲು ಸಾಧ್ಯವಿಲ್ಲ.
(6 / 7)
ಭಾರತ ಚಾಂಪಿಯನ್ಸ್ ತಂಡ: ಯುವರಾಜ್ ಸಿಂಗ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಗುರ್ಕೀರತ್ ಮನ್, ರಾಹುಲ್ ಶರ್ಮಾ, ನಮನ್ ಓಜಾ, ರಾಹುಲ್ ಶುಕ್ಲಾ, ಆರ್ಪಿ ಸಿಂಗ್, ವಿನಯ್ ಕುಮಾರ್, ಧವಳ್ ಕುಲಕರ್ಣಿ, ಸೌರಭ್ ತಿವಾರಿ, ಅನುರೀತ್ ಸಿಂಗ್, ಪವನ್ ನೇಗಿ.
ಇತರ ಗ್ಯಾಲರಿಗಳು