ಡಬ್ಲ್ಯೂಪಿಎಲ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ ಮೆಗ್ ಲ್ಯಾನಿಂಗ್; ಈ ಸಾಧನೆ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ್ತಿ
- ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್, ಡಬ್ಲ್ಯೂಪಿಎಲ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ. ವಿಮಿನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಈ ದಾಖಲೆ ನಿರ್ಮಿಸಿದ ಮೊದಲ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಅರ್ಧಶತಕ ಸಿಡಿಸಿದ ಅವರು, ಡಬ್ಲ್ಯೂಪಿಎಲ್‌ನಲ್ಲಿ 500 ರನ್ ಗಡಿ ದಾಟಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ.

(1 / 6)
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಹಾಗೂ ಮಾಜಿ ಆಟಗಾರ್ತಿ, ವಿಶ್ವ ಕ್ರಿಕೆಟ್‌ನಲ್ಲಿ ಹಲವಾರು ದಾಖಲೆ ನಿರ್ಮಿಸಿದ್ದಾರೆ. ಇದೀಗ ವಿಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲೂ ತಮ್ಮ ಅಬ್ಬರ ಮುಂದುವರೆಸಿದ್ದಾರೆ.(Delhi Capitals Twitter)
(2 / 6)
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 53 ರನ್ ಸಿಡಿಸಿದ ಅವರು, ಅದರೊಂದಿಗೆ ಮಹತ್ವದ ದಾಖಲೆ ನಿರ್ಮಿಸಿದ್ದಾರೆ. ಡಬ್ಲ್ಯೂಪಿಎಲ್ ಕ್ರಿಕೆಟ್ ಲೀಗ್‌ನಲ್ಲಿ 500ಕ್ಕೂ ಅಧಿಕ ರನ್ ಗಳಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ.(PTI)
(3 / 6)
ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೇಳಿರುವ ಲ್ಯಾನಿಂಗ್, ಲೀಗ್ ಪಂದ್ಯಗಳಲ್ಲಿ ಆಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಅವರು, ನಾಯಕಿಯಾಗಿ ಚೊಚ್ಚಲ ಆವೃತ್ತಿಯಲ್ಲೇ ತಂಡವನ್ನು ಫೈನಲ್ ಪಂದ್ಯದತ್ತ ಮುನ್ನಡೆಸಿದ್ದರು.(PTI)
(4 / 6)
ಚೊಚ್ಚಲ ಡಬ್ಲ್ಯೂಪಿಎಲ್ ಆವೃತ್ತಿಯಲ್ಲಿ ಒಟ್ಟು 345 ರನ್ ಗಳಿಸಿದ್ದ ಅವರು, ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು. ಆರಂಭಿಕ ಆಟಗಾರ್ತಿಯಾಗಿ ತಂಡದ ಯುವ ಆಟಗಾರ್ತಿಯರಿಗೂ ಮಾರ್ಗದರ್ಶ ನೀಡಿದ್ದರು.(PTI)
(5 / 6)
ಇದೀಗ ಡಬ್ಲ್ಯೂಪಿಎಲ್ ಎರಡನೇ ಆವೃತ್ತಿಯಲ್ಲಿಯೂ ಲ್ಯಾನಿಂಗ್ ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದಾರೆ. ಈಗಾಗಲೇ 201 ರನ್ ಕಲೆ ಹಾಕಿರುವ ಅವರು, ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ.(PTI)
ಇತರ ಗ್ಯಾಲರಿಗಳು