WTC Final Scenario: ಬಾಂಗ್ಲಾದೇಶ ಸೋಲಿಸಿ ಅಂಕಪಟ್ಟಿಯಲ್ಲಿ ಮೇಲೇರಿದ ದಕ್ಷಿಣ ಆಫ್ರಿಕಾ; ಇಂಡೋ-ಆಸೀಸ್ಗೆ ಹೆಚ್ಚಿದ ಒತ್ತಡ
- ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿದ ಸೌತ್ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಿಸುವ ತಂಡದ ರೇಸ್ಗೆ ಎಂಟ್ರಿಯಾಗಿದೆ. ಇದು ಭಾರತ ಮತ್ತು ಆಸ್ಟ್ರೇಲಿಯಾ ತಂಡಕ್ಕೆ ಒತ್ತಡ ಹೆಚ್ಚಿಸಿದೆ.
- ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿದ ಸೌತ್ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಿಸುವ ತಂಡದ ರೇಸ್ಗೆ ಎಂಟ್ರಿಯಾಗಿದೆ. ಇದು ಭಾರತ ಮತ್ತು ಆಸ್ಟ್ರೇಲಿಯಾ ತಂಡಕ್ಕೆ ಒತ್ತಡ ಹೆಚ್ಚಿಸಿದೆ.
(1 / 5)
ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ದಕ್ಷಿಣ ಆಫ್ರಿಕಾ ಇನ್ನಿಂಗ್ಸ್ ಮತ್ತು 273 ರನ್ಗಳ ಅಂತರದಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಟಿಕೆಟ್ ಪಡೆಯುವತ್ತ ಹೆಜ್ಜೆ ಇಟ್ಟಿದೆ. ಆಫ್ರಿಕಾ ಉಳಿದ 4 ಟೆಸ್ಟ್ ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದರೆ ಫೈನಲ್ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ಗೆಲುವು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಮೇಲೆ ಒತ್ತಡ ಹೇರುವಂತೆ ಮಾಡಿದೆ.(AFP)
(2 / 5)
ಶ್ರೀಲಂಕಾ ಮತ್ತು ಪಾಕಿಸ್ತಾನ ವಿರುದ್ಧ ತಲಾ 2 ಟೆಸ್ಟ್ ಪಂದ್ಯಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಸೋಲಿಸಿದ ನಂತರ ಗೆಲುವಿನ ಶೇಕಡವಾರು 54.17ಕ್ಕೆ ಏರಿಸಿಕೊಂಡಿದೆ. ಉಳಿದ ನಾಲ್ಕು ಟೆಸ್ಟ್ ಪಂದ್ಯಗಳನ್ನು ಗೆದ್ದರೆ ಗೆಲುವಿನ ಶೇಕಡಾ 69.44ಕ್ಕೆ ತಲುಪಲಿದೆ, ಇದರೊಂದಿಗೆ ಫೈನಲ್ಗೆ ನೇರ ಟಿಕೆಟ್ ಪಡೆಯುವ ಸಾಧ್ಯತೆ ಇದೆ. ಮತ್ತೊಂದೆಡೆ, ಶ್ರೀಲಂಕಾ ತಂಡಕ್ಕೂ ಅವಕಾಶ ಇದ್ದು, ತನ್ನ ಉಳಿದ ಸರಣಿಗಳನ್ನು ಗೆದ್ದರೆ ಫೈನಲ್ಗೆ ಅರ್ಹತೆ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ತಂಡಗಳ ನಡುವೆ ಪೈಪೋಟಿ ಹೆಚ್ಚಾಗಿದೆ.(AFP)
(3 / 5)
ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಭಾರತ ತಂಡ ಗೆಲುವಿನ ಶೇಕಡವಾರು 62.82 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆದರೆ ಫೈನಲ್ ಟಿಕೆಟ್ ಗಿಟ್ಟಿಸಿಕೊಳ್ಳಬೇಕೆಂದರೆ ಉಳಿದ 6 ಪಂದ್ಯಗಳಲ್ಲಿ 4 ಗೆಲುವು ಸಾಧಿಸಲೇಬೇಕು. ನವೆಂಬರ್ 1ರಿಂದ ಶುರುವಾಗುವ ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯ ಗೆದ್ದರೆ ಡಬ್ಲ್ಯುಟಿಸಿ ಫೈನಲ್ಗೆ ಹತ್ತಿರವಾಗಲಿದೆ. ಆದರೆ, ಫೈನಲ್ ಟಿಕೆಟ್ ಖಚಿತಪಡಿಸಿಕೊಳ್ಳಲು ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳಲ್ಲಿ ಮೂರನ್ನು ಗೆಲ್ಲಬೇಕು, ಇಲ್ಲದಿದ್ದರೆ ಫೈನಲ್ ಹಾದಿ ಕಠಿಣವಾಗಲಿದೆ.(Hindustan Times)
(4 / 5)
ಭಾರತ ತಂಡವು ನ್ಯೂಜಿಲೆಂಡ್ ಅನ್ನು ಸೋಲಿಸಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು 2-2 ರಿಂದ ಡ್ರಾ ಮಾಡಿಕೊಂಡರೂ ಫೈನಲ್ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಆಸೀಸ್ ವಿರುದ್ಧ ಸರಣಿಯನ್ನು ಗೆಲ್ಲಲೇಬೇಕು. ಇಲ್ಲಿ ಮೂರು ಪಂದ್ಯಗಳನ್ನು ಗೆಲ್ಲುವುದು ಅನಿವಾರ್ಯ. ಪ್ರಸ್ತುತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ದ ಸರಣಿಯನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.(PTI)
(5 / 5)
ಆಸ್ಟ್ರೇಲಿಯಾ ಗೆಲುವಿನ ಶೇಕಡಾ 62.50 ಅಂಕ ಹೊಂದಿದ್ದು, ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ತವರು ನೆಲದಲ್ಲಿ 4 ಟೆಸ್ಟ್ ಪಂದ್ಯಗಳನ್ನು ಗೆದ್ದರೆ ಆಸೀಸ್ ಅನ್ನು ಹಿಂದಿಕ್ಕಲಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ತಂಡವೂ ಫೈನಲ್ ತಲುಪುವುದು ಕಷ್ಟಕರವಾಗಲಿದೆ ಎಂದು ಹೇಳಲಾಗುತ್ತಿದೆ. ಭಾರತ, ಕಿವೀಸ್ ಎದುರಿನ ಕೊನೆಯ ಟೆಸ್ಟ್ನಲ್ಲಿ ಸೋತರೆ ಆಸೀಸ್ ವಿರುದ್ಧದ ಎಲ್ಲಾ ಪಂದ್ಯ ಗೆಲ್ಲಬೇಕಾಗುತ್ತದೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ಕೂಡ ಉಳಿದ ಪಂದ್ಯ ಸೋಲಲೇಬೇಕು. ಹೀಗಿದ್ದಾಗ ಭಾರತ ಫೈನಲ್ ಪ್ರವೇಶಿಸಲು ಸಾಧ್ಯವಾಗುತ್ತದೆ.(Action Images via Reuters)
ಇತರ ಗ್ಯಾಲರಿಗಳು