ಕನ್ನಡ ಸುದ್ದಿ  /  Photo Gallery  /  Yashasvi Jaiswal Becomes Second Indian Batter After Sunil Gavaskar To Score 700 Runs In A Series India Vs England Jra

ಒಂದೇ ಸರಣಿಯಲ್ಲಿ 700 ರನ್; ಸುನಿಲ್ ಗವಾಸ್ಕರ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಯಶಸ್ವಿ ಜೈಸ್ವಾಲ್

  • Yashasvi Jaiswal: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್‌ ಮತ್ತೆ ಅಬ್ಬರಿಸಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಸಿಡಿಸಿದ ಅವರು, ಹಲವು ದಾಖಲೆ ನಿರ್ಮಿಸಿದ್ದಾರೆ. ಧರ್ಮಶಾಲಾ ಟೆಸ್ಟ್‌ನಲ್ಲಿ 58 ಎಸೆತಗಳಲ್ಲಿ 57 ರನ್ ಗಳಿಸಿದ ಆರಂಭಿಕ ಆಟಗಾರ, ಮಹತ್ವದ ಸಾಧನೆ ಮಾಡಿದ್ದಾರೆ.

ಪಂದ್ಯದಲ್ಲಿ ಜೈಸ್ವಾಲ್, ಟೆಸ್ಟ್‌ ಕ್ರಿಕೆಟ್‌ನಲ್ಲಿ 1000 ರನ್‌ಗಳ ಮೈಲಿಗಲ್ಲನ್ನು ತಲುಪಿದರು. ಇದರೊಂದಿಗೆ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ದಾಖಲೆಯನ್ನು ಸರಿಗಟ್ಟಿದರು.
icon

(1 / 6)

ಪಂದ್ಯದಲ್ಲಿ ಜೈಸ್ವಾಲ್, ಟೆಸ್ಟ್‌ ಕ್ರಿಕೆಟ್‌ನಲ್ಲಿ 1000 ರನ್‌ಗಳ ಮೈಲಿಗಲ್ಲನ್ನು ತಲುಪಿದರು. ಇದರೊಂದಿಗೆ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ದಾಖಲೆಯನ್ನು ಸರಿಗಟ್ಟಿದರು.

ಪ್ರಸ್ತುತ ಸರಣಿಯಲ್ಲಿ ಜೈಸ್ವಾಲ್ ಇಲ್ಲಿಯವರೆಗೆ‌ ಬರೋಬ್ಬರಿ 712 ರನ್ ಗಳಿಸಿದ್ದಾರೆ. ಈ ಸರಣಿಯ ಎಲ್ಲಾ ಐದು ಪಂದ್ಯಗಳಲ್ಲೂ ಜೈಸ್ವಾಲ್‌ ಕನಿಷ್ಠ ಅರ್ಧಶತಕ ಸಿಡಿಸಿದ್ದಾರೆ. 
icon

(2 / 6)

ಪ್ರಸ್ತುತ ಸರಣಿಯಲ್ಲಿ ಜೈಸ್ವಾಲ್ ಇಲ್ಲಿಯವರೆಗೆ‌ ಬರೋಬ್ಬರಿ 712 ರನ್ ಗಳಿಸಿದ್ದಾರೆ. ಈ ಸರಣಿಯ ಎಲ್ಲಾ ಐದು ಪಂದ್ಯಗಳಲ್ಲೂ ಜೈಸ್ವಾಲ್‌ ಕನಿಷ್ಠ ಅರ್ಧಶತಕ ಸಿಡಿಸಿದ್ದಾರೆ. (AFP)

ಯಶಸ್ವಿ ಪ್ರಸ್ತುತ ಒಂಬತ್ತನೇ ಟೆಸ್ಟ್ ಆಡುತ್ತಿದ್ದಾರೆ. ಅವರು 16 ಇನ್ನಿಂಗ್ಸ್ ಆಡಿದ್ದಾರೆ. ಅಷ್ಟರಲ್ಲೇ ಅವರು 1,028 ರನ್ ಗಳಿಸಿದ್ದಾರೆ. ಸರಣಿಯಲ್ಲಿ ಅವರು 712 ರನ್‌ ಕಲೆ ಹಾಕಿದ್ದಾರೆ. ಈವರೆಗೆ ಒಟ್ಟು 29 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
icon

(3 / 6)

ಯಶಸ್ವಿ ಪ್ರಸ್ತುತ ಒಂಬತ್ತನೇ ಟೆಸ್ಟ್ ಆಡುತ್ತಿದ್ದಾರೆ. ಅವರು 16 ಇನ್ನಿಂಗ್ಸ್ ಆಡಿದ್ದಾರೆ. ಅಷ್ಟರಲ್ಲೇ ಅವರು 1,028 ರನ್ ಗಳಿಸಿದ್ದಾರೆ. ಸರಣಿಯಲ್ಲಿ ಅವರು 712 ರನ್‌ ಕಲೆ ಹಾಕಿದ್ದಾರೆ. ಈವರೆಗೆ ಒಟ್ಟು 29 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.(AFP)

ಭಾರತದ ಇನ್ನಿಂಗ್ಸ್‌ನ 15ನೇ ಓವರ್‌ನಲ್ಲಿ ಶೋಯೆಬ್ ಬಶೀರ್ ಎಸೆತದಲ್ಲಿ ಬೌಂಡರಿ ಸಿಡಿಸುವುದರೊಂದಿಗೆ, ಜೈಸ್ವಾಲ್ ಅವರು ವಿನೋದ್ ಕಾಂಬ್ಳಿ (14) ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 1000 ರನ್ ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ದಾಖಲೆ ಮಾಡಿದ್ದಾರೆ. ಜೈಸ್ವಾಲ್ 16 ಇನ್ನಿಂಗ್ಸ್ ತೆಗೆದುಕೊಂಡು ಈ ದಾಖಲೆ ನಿರ್ಮಿಸಿದ್ದಾರೆ.
icon

(4 / 6)

ಭಾರತದ ಇನ್ನಿಂಗ್ಸ್‌ನ 15ನೇ ಓವರ್‌ನಲ್ಲಿ ಶೋಯೆಬ್ ಬಶೀರ್ ಎಸೆತದಲ್ಲಿ ಬೌಂಡರಿ ಸಿಡಿಸುವುದರೊಂದಿಗೆ, ಜೈಸ್ವಾಲ್ ಅವರು ವಿನೋದ್ ಕಾಂಬ್ಳಿ (14) ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 1000 ರನ್ ಗಳಿಸಿದ ಎರಡನೇ ಭಾರತೀಯ ಆಟಗಾರ ಎಂಬ ದಾಖಲೆ ಮಾಡಿದ್ದಾರೆ. ಜೈಸ್ವಾಲ್ 16 ಇನ್ನಿಂಗ್ಸ್ ತೆಗೆದುಕೊಂಡು ಈ ದಾಖಲೆ ನಿರ್ಮಿಸಿದ್ದಾರೆ.

ಇದೇ ವೇಳೆ, ಸುನಿಲ್ ಗವಾಸ್ಕರ್ ನಂತರ ಒಂದೇ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ 700ಕ್ಕೂ ಅಧಿಕ ರನ್ ಗಳಿಸಿದ ಮೊದಲ ಮತ್ತು ಏಕೈಕ ಭಾರತೀಯ ಎಂಬ ದಾಖಲೆಯನ್ನು ಜೈಸ್ವಾಲ್ ನಿರ್ಮಿಸಿದ್ದಾರೆ. ಭಾರತದ ಮಾಜಿ ನಾಯಕ ಗವಾಸ್ಕರ್ ತಮ್ಮ ವೃತ್ತಿಜೀವನದಲ್ಲಿ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ. 1971ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅವರು ದಾಖಲೆಯ 774 ರನ್ ಗಳಿಸಿದ್ದರು.‌ ಆ ಬಳಿಕ 1978/79ರಲ್ಲಿ ತವರಿನಲಿ 732 ರನ್ ಗಳಿಸಿದರು.
icon

(5 / 6)

ಇದೇ ವೇಳೆ, ಸುನಿಲ್ ಗವಾಸ್ಕರ್ ನಂತರ ಒಂದೇ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ 700ಕ್ಕೂ ಅಧಿಕ ರನ್ ಗಳಿಸಿದ ಮೊದಲ ಮತ್ತು ಏಕೈಕ ಭಾರತೀಯ ಎಂಬ ದಾಖಲೆಯನ್ನು ಜೈಸ್ವಾಲ್ ನಿರ್ಮಿಸಿದ್ದಾರೆ. ಭಾರತದ ಮಾಜಿ ನಾಯಕ ಗವಾಸ್ಕರ್ ತಮ್ಮ ವೃತ್ತಿಜೀವನದಲ್ಲಿ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ. 1971ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅವರು ದಾಖಲೆಯ 774 ರನ್ ಗಳಿಸಿದ್ದರು.‌ ಆ ಬಳಿಕ 1978/79ರಲ್ಲಿ ತವರಿನಲಿ 732 ರನ್ ಗಳಿಸಿದರು.(REUTERS)

ಧರ್ಮಶಾಲಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಭಾರತವು 30 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿದೆ. ಸದ್ಯ ಟೀಮ್‌ ಇಂಡಿಯಾ 83 ರನ್‌ಗಳ ಹಿನ್ನಡೆಯಲ್ಲಿದೆ. ರೋಹಿತ್ ಶರ್ಮಾ 83 ಎಸೆತಗಳಲ್ಲಿ 52 ರನ್ ಸಿಡಿಸಿ ಅಜೇಯರಾಗಿ ಉಳಿದಿದ್ದಾರೆ. ಶುಬ್ಮನ್ ಗಿಲ್ 39 ಎಸೆತಗಳಲ್ಲಿ 26 ರನ್ ಸಿಡಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.
icon

(6 / 6)

ಧರ್ಮಶಾಲಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಭಾರತವು 30 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿದೆ. ಸದ್ಯ ಟೀಮ್‌ ಇಂಡಿಯಾ 83 ರನ್‌ಗಳ ಹಿನ್ನಡೆಯಲ್ಲಿದೆ. ರೋಹಿತ್ ಶರ್ಮಾ 83 ಎಸೆತಗಳಲ್ಲಿ 52 ರನ್ ಸಿಡಿಸಿ ಅಜೇಯರಾಗಿ ಉಳಿದಿದ್ದಾರೆ. ಶುಬ್ಮನ್ ಗಿಲ್ 39 ಎಸೆತಗಳಲ್ಲಿ 26 ರನ್ ಸಿಡಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.(ANI )


IPL_Entry_Point

ಇತರ ಗ್ಯಾಲರಿಗಳು