Rahul Gandhi In Ballari: ಕರ್ನಾಟಕದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಏಕಿವೆ?: ರಾಹುಲ್ ಗಾಂಧಿ ಪ್ರಶ್ನೆ!
- ಬಳ್ಳಾರಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಬಳ್ಳಾರಿ ತಲುಪಿದೆ. ಈ ಪಾದಯಾತ್ರೆ ಇಲ್ಲಿಯವರೆಗೆ ಬರೋಬ್ಬರಿ 1,000 ಕಿ.ಮೀ. ಪ್ರಯಾಣಿಸಿದ್ದು, ಬಳ್ಳಾರಿಯಲ್ಲಿ ಆಯೋಜಿಸಿದ್ದ ಭಾರತ ಐಕ್ಯತಾ ಯಾತ್ರೆಯ ಬೃಹತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಮಾತನಾಡಿದರು. ರಾಹುಲ್ ಗಾಂಧಿ ಭಾಷಣದ ಸಾರಾಂಶ ಇಲ್ಲಿದೆ.

(1 / 5)
ಕರ್ನಾಟಕದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಏಕೆ ಖಾಲಿ ಇವೆ ಎಂದು ಪ್ರಶ್ನಿಸಿರುವ ರಾಹುಲ್ ಗಾಂಧಿ, ರಾಜ್ಯದ ನಿರುದ್ಯೋಗ ಪ್ರಮಾಣ ಹೆಚ್ಚುತ್ತಲೇ ಇದ್ದು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಕರ್ನಾಟಕದ ಯುವ ಸಮುದಾಯಕ್ಕೆ ವಂಚನೆ ಮಾಡುತ್ತಿವೆ ಎಂದು ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು.(ANI)
(2 / 5)
ಕರ್ನಾಟಕದಲ್ಲಿ ನೀವು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಆಗಲು ಬಯಸಿದರೆ, 80 ಲಕ್ಷ ರೂ. ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ನಿಮ್ಮ ಬಳಿ ಹಣವಿದ್ದರೆ ಮಾತ್ರ ಕರ್ನಾಟಕದಲ್ಲಿ ನೀವು ಸರ್ಕಾರಿ ಉದ್ಯೋಗ ಪಡೆಯಬಹುದು. ಹಣವಿಲ್ಲದಿದ್ದರೆ ಜೀವನಪೂರ್ತಿ ನಿರುದ್ಯೋಗಿಯಾಗಿ ಇರಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದರು.(Verified Twitter)
(3 / 5)
ಇಂದು ಭಾರತವು 45 ವರ್ಷಗಳಲ್ಲೇ ಅತಿ ಹೆಚ್ಚು ನಿರುದ್ಯೋಗ ಪ್ರಮಾಣವನ್ನು ಹೊಂದಿದೆ. ಪ್ರತಿ ವರ್ಷ 2 ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಆ ಕೆಲಸಗಳು ಎಲ್ಲಿ ಹೋದವು ಎಂಬುದು ಯಾರಿಗೂ ಗೊತ್ತಿಲ್ಲ ಎಂದು ರಾಹುಲ್ ಗಾಂಧಿ ಹರಿಹಾಯ್ದರು.(Verified Twitter)
(4 / 5)
ದೇಶದಲ್ಲಿ ಕೋಟ್ಯಂತರ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಯುವಕರಿಗೆ ಉದ್ಯೋಗ ಕೊಡಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೆಲವೇ ಕೆಲವು ಉದ್ಯಮಪತಿಗಳ ಜೇಬು ತುಂಬಿಸಲು ಮುಂದಾಗಿವೆ. ಈ ಅಸಮಾನತೆ ವಿರುದ್ಧ ಕಾಂಗ್ರೆಸ್ ಪಕ್ಷ ಧ್ವನಿ ಎತ್ತಿದೆ ಎಂದು ರಾಹುಲ್ ಗಾಂಧಿ ಗುಡುಗಿದರು.(Verified Twitter)
ಇತರ ಗ್ಯಾಲರಿಗಳು