Asian Games 2023: ಏಷ್ಯನ್ ಗೇಮ್ಸ್‌ನಿಂದ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಔಟ್; ಕಾರಣ ಇದೇ
ಗಾಯದ ಸಮಸ್ಯೆಯಿಂದ ಏಷ್ಯನ್ ಗೇಮ್ಸ್‌ನಿಂದ ಹೊರಗುಳಿಯುವುದಾಗಿ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.
ದೆಹಲಿ: ಅಖಾಡಕ್ಕೆ ಇಳಿದರೆ ಸಾಕು ಭಾರತದ ಖಾತೆಗೆ ಚಿನ್ನದ ಪದಕ ಖಾತ್ರಿ ಮಾಡುತ್ತಿದ್ದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಈ ಬಾರಿ ಏಷ್ಯನ್ ಗೇಮ್ಸ್‌ನಿಂದ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಗಾಯದ ಕಾರಣದಿಂದಾಗಿ ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಭಾವಹಿಸುತ್ತಿಲ್ಲ ಎಂದು ರೆಸ್ಲರ್ ವಿನೇಶ್ ಫೋಗಟ್ ( ಮಾಹಿತಿಯನ್ನು ಬಹರಿಂಗ ಪಡಿಸಿದ್ದಾರೆ. ಈ ಬಗ್ಗೆ ಇವತ್ತು (ಆಗಸ್ಟ್ 15, ಮಂಗಳವಾರ) ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ಮೊಣಕಾಲಿನ ಗಾಯದಿಂದಾಗಿ ಏಷ್ಯನ್ ಗೇಮ್ಸ್‌ನಿಂದ ಹಿಂದೆ ಸರಿಯಬೇಕಾಗಿದೆ ಎಂದಿದ್ದಾರೆ.
28 ವರ್ಷದ ವಿನೇಶ್ ಫೋಗಟ್ 2018 ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಬಾರಿಯೂ ಚಿನ್ನದ ಪದಕ ಉಳಿಸಿಕೆೊಳ್ಳುವುದು ಈಕೆಯ ಕನಸಾಗಿತ್ತಾದರೂ ದುರಾದೃಷ್ಟವಶಾತ್ ಅವರು ಈ ಬಾರಿಯ ಪಂದ್ಯಗಳಿಂದ ದೂರ ಉಳಿಯಬೇಕಾಗಿದೆ ಎಂದು ವಿನೇಶ್ ಬೇಸರ ವ್ಯಕ್ತಪಡಸಿದ್ದಾರೆ.
ನಾನು ಈ ನೋವಿನ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಎರಡು ದಿನಗಳ ಹಿಂದೆ ಅಂದರೆ ಆಗಸ್ಟ್ 13 ರಂದು ನಾನು ತರಬೇತಿ ಸಮಯದಲ್ಲಿ ನನ್ನ ಮೊಣಕಾಲಿಗೆ ಗಾಯವಾಗಿದೆ. ಸ್ಕ್ಯಾನ್ ಮತ್ತು ಇತರೆ ಪರೀಕ್ಷೆಗಳನ್ನು ಮಾಡಿಸಿದ ನಂತರ ವೈದ್ಯರು ಈ ಗಾಯಕ್ಕೆ ಶಸ್ತ್ರ ಚಿಕಿತ್ಸೆಯೊಂದೇ ಆಯ್ಕೆ ಎಂದು ತೀರ್ಮಾನಿಸಿದ್ದಾರೆ. ಆಗಸ್ಟ್ 17ಕ್ಕೆ ನಾನು ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
2018ರಲ್ಲಿ ಜಕಾರ್ತದಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದು, ಈ ಬಾರಿಯೂ ಚಿನ್ನದ ಪದಕವನ್ನು ಉಳಿಸಿಕೊಳ್ಳುವುದು ನನ್ನ ಕನಸಾಗಿತ್ತು. ಆದರೆ ದುರಾದೃಷ್ಟವಶಾತ್ ಈ ಗಾಯ ನನ್ನನ್ನು ಗೇಮ್ಸ್‌ನಿಂದ ದೂರ ಇಡುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಅವರನ್ನು ನನ್ನ ಸ್ಥಾನದಲ್ಲಿ ಮೀಸಲು ಆಟಗಾರರನ್ನು ಕಳಿಸುತ್ತಾರೆ ಎಂದು ಫೋಗಟ್ ಟ್ವೀಟ್ ಮಾಡಿದ್ದಾರೆ.
ವಿನೇಶ್ ಏಷ್ಯನ್ ಗೇಮ್ಸ್ ಮಾತ್ರವಲ್ಲದೆ ಕಾಮನ್ ವೆಲ್ತ್ ಗೇಮ್ಸ್‌ನಲ್ಲೂ ಎರಡು ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು.
ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಚೀನಾದ ಹ್ಯಾಂಗ್‌ಝೌನಲ್ಲಿ ಏಷ್ಯನ್ ಗೇಮ್ಸ್ ನಡೆಯಲಿದೆ. ಈ ಬಾರಿ ಒಟ್ಟು 40 ಕ್ರೀಡೆಗಳಲ್ಲಿ ಸ್ಪರ್ಧೆ ನಡೆಯಲಿದೆ. ವಿಶೇಷವೆಂದರೆ ಈ ಬಾರಿ ಏಷ್ಯನ್ ಗೇಮ್ಸ್‌ನಲ್ಲಿ ಕ್ರಿಕೆಟ್ ಕೂಡ ಇರಲಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 8ರ ವರೆಗೆ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಏಷ್ಯನ್ ಗೇಮ್ಸ್‌ಗೆ ಟೀಂ ಇಂಡಿಯಾವನ್ನು ರುತುರಾಜ್ ಗಾಯಕ್ವಾಡ್ ತಂಡವನ್ನು ಮುನ್ನಡೆಸಲಿದ್ದಾರೆ.
ಏಷ್ಯನ್ ಗೇಮ್ಸ್ ತಂಡಕ್ಕೆ ಆಯ್ಕೆಯಾಗುವ ಆಟಗಾರರಲ್ಲಿ ವಿಶ್ವಕಪ್ ಸ್ಥಾನಕ್ಕಾಗಿ ಸ್ಪರ್ಧೆಯಲ್ಲಿರುವ ಆಟಗಾರು ಇರುವುದಿಲ್ಲ ಎಂದು ಬಿಸಿಸಿಐ ಈ ಹಿಂದೆ ಘೋಷಿಸಿತ್ತು. ಅದರಂತೆಯೇ ಭಾರತದ ಕಾಯಂ ನಾಯಕ ರೋಹಿತ್ ಶರ್ಮಾ, ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ಸೇರಿದಂತೆ ಹಿರಿಯ ಆಟಗಾರರನ್ನು ಏಷ್ಯನ್ ಗೇಮ್ಸ್‌ನ ಈ ತಂಡಕ್ಕೆ ಆಯ್ಕೆ ಮಾಡಿಲ್ಲ.
ವಿಭಾಗ