ICC Test rankings: ಟೆಸ್ಟ್ ಶ್ರೇಯಾಂಕದಲ್ಲಿ ಜೈಸ್ವಾಲ್, ಸಿರಾಜ್‌ಗೆ ಭಾರಿ ಬಡ್ತಿ; ಅಗ್ರ ಹತ್ತರಲ್ಲಿ ಏಕೈಕ ಭಾರತೀಯ ಬ್ಯಾಟರ್
ಐಸಿಸಿಯ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಭಾರತೀಯರು ಭಾರಿ ಮುನ್ನಡೆ ಸಾಧಿಸಿದ್ದಾರೆ. ಆ ಪಟ್ಟಿ ಇಲ್ಲಿದೆ.

ವೆಸ್ಟ್ ವಿರುದ್ಧ (West Indies vs India) ಟೆಸ್ಟ್ ಸರಣಿ ಗೆದ್ದ ಟೀಮ್ ಇಂಡಿಯಾ, ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ ವನ್ ಸ್ಥಾನದಲ್ಲಿ ಮುಂದುವರೆದಿದೆ. ಇದೇ ವೇಳೆ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರು ಕೂಡಾ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಅಗ್ರ ಹತ್ತರೊಳಗೆ ಕಾಣಿಸಿಕೊಂಡಿದ್ದು, ಭಾರತ ತಂಡಕ್ಕೆ ಪದಾರ್ಪಣೆ ಮಾಡಿ ಆರಂಭದಲ್ಲೇ ಯಶಸ್ವಿಯಾದ ಯಶಸ್ವಿ ಜೈಸ್ವಾಲ್ ಕೂಡಾ ಉನ್ನತ ಶ್ರೇಯಾಂಕ ದಕ್ಕಿಸಿಕೊಂಡಿದ್ದಾರೆ.
ಟ್ರೆಂಡಿಂಗ್ ಸುದ್ದಿ
ಬುಧವಾರ (ಜುಲೈ 26) ರಂದು ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಕೂಡಾ ಭಾರಿ ಮುನ್ನಡೆ ಸಾಧಿಸಿದ್ದಾರೆ. ಅತ್ತ ಏಕದಿನ ಶ್ರೇಯಾಂಕದಲ್ಲಿ ಸಿರಾಜ್ ಎರಡನೇ ಸ್ಥಾನದಲ್ಲಿದ್ದಾರೆ.
ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡರೂ, 80 ಮತ್ತು 57 ರನ್ ಗಳಿಸಿದ ಭಾರತ ತಂಡದ ನಾಯಕ ರೋಹಿತ್ ಬ್ಯಾಟರ್‌ಗಳ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಟೆಸ್ಟ್ ಶ್ರೇಯಾಂಕದಲ್ಲಿ ಅತಿ ಹೆಚ್ಚು ಶ್ರೇಯಾಂಕದ ಭಾರತೀಯ ಬ್ಯಾಟರ್ ಇವರೇ. ಅತ್ತ ಸತತ 6ಕ್ಕೂ ಹೆಚ್ಚು ತಿಂಗಳುಗಲ ಕಾಲದಿಂದ ಸಕ್ರಿಯ ಕ್ರಿಕೆಟ್‌ನಿಂದ ಹೊರಗುಳಿದಿರುವ ಸಹ ಆಟಗಾರ ರಿಷಬ್ ಪಂತ್, 743 ಅಂಕಗಳೊಂದಿಗೆ 12ನೇ ಸ್ಥಾನಕ್ಕೆ ಕುಸಿದಿದ್ದಾರೆ. 733 ಅಂಕಗಳೊಂದಿಗೆ ವಿರಾಟ್ ಕೊಹ್ಲಿ 14ನೇ ಸ್ಥಾನದಲ್ಲಿದ್ದಾರೆ.
ಐಸಿಸಿ ಟೆಸ್ಟ್ ಶ್ರೇಯಾಂಕ ನೋಡಲು ಇಲ್ಲಿ ಕ್ಲಿಕ್ ಮಾಡಿ
ಜೈಸ್ವಾಲ್ ಭಾರಿ ಮುನ್ನಡೆ
ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್, ಶತಕ ಸಿಡಿಸಿ ಮಿಂಚಿದ್ದರು. ಅದಾದ ಬಳಿಕ ತಮ್ಮ ಎರಡನೇ ಟೆಸ್ಟ್ ಪಂದ್ಯದಲ್ಲಿ 57 ಮತ್ತು 38 ರನ್ ಕಲೆಹಾಕಿ ಬ್ಯಾಟರ್‌ಗಳ ಪಟ್ಟಿಯಲ್ಲಿ 63ನೇ ಸ್ಥಾನ ಪಡೆದಿದ್ದಾರೆ. ವೃತ್ತಿಜೀವನದ ಉನ್ನತ ಸ್ಥಾನವನ್ನು ಪಡೆಯುವ ಮೂಲಕ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಮತ್ತಷ್ಟು ಮೇಲೇರುವ ಭರವಸೆ ಮೂಡಿಸಿದ್ದಾರೆ.
ವಿಲಿಯಮ್ಸನ್ ಅಗ್ರಸ್ಥಾನಿ
ಬ್ಯಾಟರ್‌ಗಳ ಪಟ್ಟಿಯಲ್ಲಿ ಕೇನ್ ವಿಲಿಯಮ್ಸನ್ ಈಗಲೂ ಮುನ್ನಡೆ ಸಾಧಿಸುವ ಮೂಲಕ ವಿಶ್ವದ ಅತ್ಯುನ್ನತ ಶ್ರೇಯಾಂಕದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಬಲಗೈ ಬ್ಯಾಟ್ಸ್‌ಮನ್ ಮತ್ತು ಮಾಜಿ ನಂಬರ್ ವನ್ ಬ್ಯಾಟರ್ ಮಾರ್ನಸ್ ಲ್ಯಾಬುಶೇನ್, ಓಲ್ಡ್ ಟ್ರಾಫರ್ಡ್‌ನಲ್ಲಿ ಶತಕ ಸಿಡಿಸಿದ ಬಳಿಕ ಎರಡನೇ ಸ್ಥಾನದಲ್ಲಿದ್ದಾರೆ. ಇದೇ ವೇಳೆ ಇಂಗ್ಲೆಂಡ್‌ನ ಜೋ ರೂಟ್ ಮೂರನೇ ಸ್ಥಾನ ಪಡೆದಿದ್ದಾರೆ. ಅತ್ತ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ದ್ವಿಶತಕ ಗಳಿಸಿದ ಪಾಕಿಸ್ತಾನದ ಶೌದ್ ಶಕೀಲ್ 12 ಸ್ಥಾನ ಮೇಲೇರಿ 15ನೇ ಸ್ಥಾನ ಪಡೆದಿದ್ದಾರೆ.
ಸಿರಾಜ್ ಜೀವನಶ್ರೇಷ್ಠ ಪ್ರದರ್ಶನ
ಟ್ರಿನಿಡಾಡ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ, ಮೊಹಮ್ಮದ್ ಸಿರಾಜ್ ಐದು ಜೀವನಶ್ರೇಷ್ಠ ಐದು ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ ಬೌಲರ್‌ಗಳ ಪಟ್ಟಿಯಲ್ಲಿ ಒಟ್ಟು ಆರು ಸ್ಥಾನಗಳ ಜಿಗಿತ ಕಂಡು 33ನೇ ಸ್ಥಾನದಲ್ಲಿ ನಿಂತಿದ್ದಾರೆ. ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದ್ದ ಸಿರಾಜ್, ವೃತ್ತಿಜೀವನದ ಅತ್ಯುನ್ನತ ರೇಟಿಂಗ್ ಪಡೆದಿದ್ದಾರೆ.
ಬೌಲರ್‌ಗಳ ಶ್ರೇಯಾಂಕದಲ್ಲಿ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ. ರವೀಂದ್ರ ಜಡೇಜಾ ಆರನೇ ಸ್ಥಾನಕ್ಕೆ ಏರಿದ್ದಾರೆ. ಅತ್ತ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜಡೇಜಾ ಹಾಗೂ ಅಶ್ವಿನ್ ಮೊದಲೆರಡು ಸ್ಥಾನದಲ್ಲಿದ್ದರೆ, ಅಕ್ಷರ್ ಐದನೇ ಸ್ಥಾನದಲ್ಲಿದ್ದಾರೆ. ಭಾರತತ ಮೂರು ಪ್ರಮುಖ ಆಲ್‌ರೌಂಡರ್‌ಗಳು ಅಗ್ರ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ.
ಸಂಬಂಧಿತ ಲೇಖನ