ಕನ್ನಡ ಸುದ್ದಿ  /  Sports  /  Cricket News Ipl 2023 Kolkata Knight Riders Vs Punjab Kings Toss And Playing Eleven Shikhar Dhawan Nitish Rana Jra

KKR vs PBKS: ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್; ತಂಡಕ್ಕೆ ರಾಜಪಕ್ಸೆ ಕಂಬ್ಯಾಕ್

ಕೆಕೆಆರ್ ಮತ್ತು ಪಂಜಾಬ್‌ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 31 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಅದರಲ್ಲಿ ಕೆಕೆಆರ್ 20 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಕೇವಲ 11 ಪಂದ್ಯಗಳಲ್ಲಿ ಗೆದ್ದಿದೆ.

ಧವನ್‌, ನಿತೀಶ್‌ ರಾಣಾ
ಧವನ್‌, ನಿತೀಶ್‌ ರಾಣಾ

ಐಪಿಎಲ್‌ನ 2023ರ ಆವೃತ್ತಿಯು ಪ್ಲೇಆಫ್‌ ಹಂತಕ್ಕೆ ಸಮೀಪಿಸುತ್ತಿದೆ. ಹೀಗಾಗಿ ಮುಂದಿನ ಪಂದ್ಯಗಳು ರೋಚಕ ಹಂತದತ್ತ ಸಾಗಲಿವೆ. ನಾಕೌಟ್‌ ಹಂತದ ಪಂದ್ಯಗಳ ಹಿನ್ನೆಲೆಯಲ್ಲಿ ಇಂದು (ಸೋಮವಾರ, ಮೇ 8) ನಡೆಯುತ್ತಿರುವ ಪಂದ್ಯವು, ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌(Punjab Kings) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡವನ್ನು ಎದುರಿಸುತ್ತಿದೆ. ನಿತೀಶ ರಾಣಾ ಬಳಗವು ತನ್ನ ತವರು ಮೈದಾನ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಧವನ್‌ ಬಳಗವನ್ನು ಎದುರಿಸುತ್ತಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ನಾಯಕ ಶಿಖರ್‌ ಧವನ್‌, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಬೃಹತ್‌ ಮೊತ್ತ ಕಲೆಹಾಕಿದ ಹೊರತಾಗಿಯೂ ತಂಡ ಸೋಲೊಪ್ಪಿತ್ತು. ಆದರೂ, ಪಂಜಾಬ್‌ ನಾಯಕ ಇಂದು ಮತ್ತೆ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು, ಕೆಕೆಆರ್‌ಗೆ ಬೃಹತ್‌ ಗುರಿ ನಿಗದಿಪಡಿಸುವ ವಿಶ್ವಾಸದಲ್ಲಿದ್ದಾರೆ. ತಂಡದಲ್ಲಿ ಇಂದು ಒಂದು ಬದಲಾವಣೆ ಮಾಡಲಾಗಿದ್ದು, ಭಾನುಕಾ ರಾಜಪಕ್ಷೆ ತಂಡಕ್ಕೆ ಪುನರಾಗಮನ ಮಾಡುತ್ತಿದ್ದಾರೆ.

ಮತ್ತೊಂದೆಡೆ ತವರಿನಲ್ಲಿ ಈ ಆವೃತ್ತಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತಿರುವ ಕೆಕೆಆರ್‌, ಇಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ತಂಡದಲ್ಲಿ ಇಂದು ಯಾವುದೇ ಬದಲಾವಣೆ ಮಾಡಲಾಗಿಲ್ಲ.

ತಂಡಗಳ ಬಲಾಬಲ

ಕೆಕೆಆರ್ ತಂಡವು, ಪ್ರಸ್ತುತ ಆಡಿರುವ 10 ಪಂದ್ಯಗಳಲ್ಲಿ ಎಂಟು ಅಂಕಗಳೊಂದಿಗೆ ಹತ್ತು ತಂಡಗಳ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಇದರಲ್ಲಿ ನಾಲ್ಕು ಗೆಲುವುಗಳು ಮತ್ತು ಆರು ಸೋಲು ಸೇರಿದೆ. ಈ ನಡುವೆ, ಪಂಜಾಬ್‌ ತಂಡವು ಆಡಿರುವ 10 ಪಂದ್ಯಗಳಲ್ಲಿ ಐದು ಗೆಲುವುಗಳು ಮತ್ತು ಐದು ಸೋಲುಗಳನ್ನು ಕಂಡಿದೆ. ಹೀಗಾಗಿ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಉಭಯ ತಂಡಗಳು ಈ ಋತುವಿನ ಆರಂಭಿಕ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾದ್ದವು. ಆವೃತ್ತಿಯ ಎರಡನೇ ಪಂದ್ಯದಲ್ಲಿ ಪಂಜಾಬ್ ಏಳು ರನ್‌ಗಳಿಂದ ಜಯಗಳಿಸಿತ್ತು. ಇಂದು ಇದೇ ತಂಡಗಳು ಎರಡನೇ ಬಾರಿ ಮುಖಾಮುಖಿಯಾಗುತ್ತಿವೆ.

ಹೆಡ್‌ ಟು ಹೆಡ್‌ ದಾಖಲೆ

ಕೆಕೆಆರ್ ಮತ್ತು ಪಂಜಾಬ್‌ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 31 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಅದರಲ್ಲಿ ಕೆಕೆಆರ್ 20 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಕೇವಲ 11 ಪಂದ್ಯಗಳಲ್ಲಿ ಗೆದ್ದಿದೆ.

ಪಂಜಾಬ್‌ ಕಿಂಗ್ಸ್‌ ಆಡುವ ಬಳಗ

ಪ್ರಭ್‌ಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟನ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಸ್ಯಾಮ್ ಕರನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್.

ಕೆಕೆಆರ್‌ ಆಡುವ ಬಳಗ

ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ‌ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಶ್ ಶರ್ಮಾ, ವರುಣ್ ಚಕ್ರವರ್ತಿ.