ಕನ್ನಡ ಸುದ್ದಿ  /  ಕ್ರೀಡೆ  /  Cricket Stadium: ಮತ್ತೊಂದು ಕ್ರಿಕೆಟ್​ ಸ್ಟೇಡಿಯಂ ನಿರ್ಮಾಣ.. ಪ್ರಧಾನಿ ಮೋದಿ ಅಡಿಪಾಯ.. ಎಲ್ಲಿ? ವೆಚ್ಚ ಎಷ್ಟು?

Cricket Stadium: ಮತ್ತೊಂದು ಕ್ರಿಕೆಟ್​ ಸ್ಟೇಡಿಯಂ ನಿರ್ಮಾಣ.. ಪ್ರಧಾನಿ ಮೋದಿ ಅಡಿಪಾಯ.. ಎಲ್ಲಿ? ವೆಚ್ಚ ಎಷ್ಟು?

Cricket Stadium: ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮತ್ತೊಂದು ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಸುಮಾರು 300 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕ್ರಿಕೆಟ್​ ಮೈದಾನ
ಕ್ರಿಕೆಟ್​ ಮೈದಾನ (Facebook)

ಭಾರತ ದೇಶದಲ್ಲಿ ಕ್ರಿಕೆಟ್ ಮೇಲಿರುವ ಪ್ರೀತಿ, ಅಭಿಮಾನ, ಕ್ರೇಜ್ ಕುರಿತು ಬಿಡಿಸಿ ಹೇಳಬೇಕಾಗಿಲ್ಲ. ಕ್ರಿಕೆಟ್​ ಅಂದರೆ ಭಾರತೀಯರಿಗೆ ಒಂದು ಎಮೋಷನ್​. ದೇಶದಲ್ಲಿ ಧರ್ಮವಾಗಿ ಬೆಳೆದು ನಿಂತಿದೆ. ಅಷ್ಟರಮಟ್ಟಿಗೆ ಕ್ರಿಕೆಟ್​​ ಭಾರತದಲ್ಲಿ ಖ್ಯಾತಿ ಪಡೆದಿದೆ. ಇದೇ ಕಾರಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್​ ಮತ್ತು ಐಪಿಎಲ್​ ನಡೆದಾಗ ಮೈದಾನಗಳು ಅಭಿಮಾನಿಗಳಿಂದ ಕಿಕ್ಕಿರಿದು ತುಂಬಿರುತ್ತವೆ. ಕ್ರಿಕೆಟ್​ ಜನಪ್ರಿಯತೆ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಶುಭ ಸುದ್ದಿ ನೀಡಿದೆ.

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮತ್ತೊಂದು ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದೆ ಎಂದು ವರದಿಯಾಗಿದೆ. ಇದಕ್ಕಾಗಿ ಸುಮಾರು 300 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಕ್ರಿಕೆಟ್ ಸ್ಟೇಡಿಯಂ ಕಾಮಗಾರಿ ಆರಂಭವಾಗಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಪ್ರಸಿದ್ಧ ಆಧ್ಯಾತ್ಮಿಕ ನಗರವಾದ ವಾರಣಾಸಿಯಲ್ಲಿ ಕ್ರೀಡಾಂಗಣವು ತಲೆ ಎತ್ತಲಿದೆ.

ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರ ಈಗಾಗಲೇ 31 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಇದಕ್ಕೆ ಪರಿಹಾರವಾಗಿ ರೈತರಿಗೆ 121 ಕೋಟಿ ರೂಪಾಯಿ ನೀಡಲಾಗಿದೆ. ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಸ್ಟೇಡಿಯಂ ನಿರ್ಮಾಣಗೊಳ್ಳಲಿರುವ ಪ್ರದೇಶವನ್ನು ಪರಿಶೀಲಿಸಿದ್ದು, ಇದರ ಮೇಲೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್​​​ ಶಾ ಅವರಿಗೂ ವರದಿ ನೀಡಲಾಗಿದೆ.

ವಾರಣಾಸಿಯಲ್ಲಿ ನಿರ್ಮಾಣವಾಗಲಿರುವ ಈ ಸ್ಟೇಡಿಯಂ ಅತ್ಯಂತ ಆಧುನಿಕ ಸ್ಪರ್ಶದಿಂದ ಕೂಡಿರಲಿದೆಯಂತೆ. ಸುಮಾರು 30 ಸಾವಿರ ಆಸನಗಳ ಸಾಮರ್ಥ್ಯ ಇರಲಿದೆಯಂತೆ. ಕ್ರೀಡಾಂಗಣ ನಿರ್ಮಾಣದ ಒಪ್ಪಂದ ಮತ್ತು ಇತರೆ ಕಾಗದ ಪತ್ರಗಳಿಗೆ ಸಂಬಂಧಿಸಿದ ಕೆಲಸಗಳು ಸುಮಾರು 2 ತಿಂಗಳ ಕಾಲ ತೆಗೆದುಕೊಳ್ಳುತ್ತವೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟತೆ ಬಂದ ಕೂಡಲೇ ಉದ್ಘಾಟನಾ ಸಮಾರಂಭ ನಡೆಯಲಿದೆ.

ಮೋದಿ ಅವರಿಂದ ಅಡಿಪಾಯ

ವಾರಣಾಸಿಯಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಮೈದಾನ ನಿರ್ಮಾಣ ಕಾರ್ಯಕ್ಕೆ ಅಡಿಪಾಯ ಹಾಕುವ ಸಾಧ್ಯತೆಯಿದೆ ಎಂದು ಜಿಲ್ಲಾ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ಲಾ ಮತ್ತು ಶಾ ಅವರೊಂದಿಗಿನ ಸಭೆಯ ನಂತರ, ವಾರಣಾಸಿ ಕ್ರಿಕೆಟ್ ಅಸೋಸಿಯೇಷನ್ ​​(VCA) ಕಾರ್ಯದರ್ಶಿ ಜಾವೇದ್ ಅಖ್ತರ್ ಖಾನ್ ಮಾತನಾಡಿ, ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ತಲೆ ಎತ್ತಲಿದೆ. ಜಾಗತಿಕ ಗುಣಮಟ್ಟದ ಕ್ರೀಡಾಂಗಣ ನಿರ್ಮಿಸಲು ಬೆಂಬಲ ನೀಡಿದ ಬಿಸಿಸಿಐ, ಯುಪಿಸಿಎ, ಭಾರತ ಸರ್ಕಾರ ಮತ್ತು ಯುಪಿ ಸರ್ಕಾರಕ್ಕೆ ಧನ್ಯವಾದಗಳು ಹೇಳಿದ್ದಾರೆ.

ಮೈದಾನ ನಿರ್ಮಾಣದ ಬೆಳವಣಿಗೆಯನ್ನು ಖಚಿತಪಡಿಸಿದ ಪ್ರಾದೇಶಿಕ ಕ್ರೀಡಾ ಅಧಿಕಾರಿ ಆರ್.ಪಿ.ಸಿಂಗ್, ಕ್ರೀಡಾಂಗಣದ ನಿರ್ಮಾಣವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಹೇಳಿದರು. ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ (VDA) ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶಗಳ ಒಟ್ಟಾರೆ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬಹುದು ಎಂದಿದ್ದಾರೆ.

ಗುಜರಾತ್‌ ರಾಜ್ಯದ ಅತಿದೊಡ್ಡ ನಗರವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಕ್ರೀಡಾಂಗಣವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸ್ಟೇಡಿಯಂ ಹಲವು ವಿಶೇಷತೆಗಳನ್ನು ಹೊಂದಿದೆ. ಇತ್ತೀಚೆಗಷ್ಟೇ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣಗೊಂಡ ಈ ಕ್ರೀಡಾಂಗಣವನ್ನು ಈ ಹಿಂದೆ ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಟೇಡಿಯಂ ಎಂದು ಕರೆಯಲಾಗುತ್ತಿತ್ತು. ಅಹಮದಾಬಾದ್‌ ನಗರದ ಹಳೆಯ ಹೆಗ್ಗುರುತಾದ ಈ ಕ್ರೀಡಾಂಗಣವನ್ನು 1983ರಲ್ಲಿ ತೆರೆಯಲಾಯ್ತು. ಆ ಬಳಿಕ 2020ರಲ್ಲಿ ಇದನ್ನು ದೊಡ್ಡ ಮಟ್ಟದಲ್ಲಿ ನವೀಕರಿಸಿ ಪುನಃ ತೆರೆಯಲಾಯಿತು. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ