Gambhir on Ramiz Raja: 'ವಿಶ್ವಕಪ್ ಆಡಲು ಭಾರತಕ್ಕೆ ಹೋಗಲ್ಲ' ಎಂಬ ರಮೀಜ್ ಹೇಳಿಕೆಗೆ ಗಂಭೀರ್ ಪ್ರತಿಕ್ರಿಯೆ ಹೀಗಿತ್ತು
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಈ ನಿರ್ಧಾರ ನನ್ನದಲ್ಲ. ಬಿಸಿಸಿಐ ಮತ್ತು ಪಿಸಿಬಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ನಿಲುವನ್ನು ಸ್ಪಷ್ಟಪಡಿಸುವ ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ ಅವರ ಸ್ಫೋಟಕ ಹೇಳಿಕೆಯು ಜಾಗತಿಕ ಕ್ರಿಕೆಟ್‌ನಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. 2023ರ ಏಷ್ಯಾಕಪ್‌ಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಮತ್ತು ಎಸಿಸಿ ಅಧ್ಯಕ್ಷ ಜಯ್ ಶಾ ಬಹಿರಂಗಪಡಿಸಿದ ಒಂದು ತಿಂಗಳ ಬಳಿಕ, ಬಿಸಿಸಿಐ ತಮ್ಮ ಮಾತುಗಳಲ್ಲಿ ದೃಢವಾಗಿದ್ದರೆ ಪಾಕಿಸ್ತಾನ ಏಕದಿನ ವಿಶ್ವಕಪ್ ಅನ್ನು ಬಹಿಷ್ಕರಿಸುತ್ತದೆ ಎಂದು ರಮೀಜ್ ಪುನರುಚ್ಚರಿಸಿದ್ದರು. ಇದನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದೀಗ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ರಮಿಜ್ ಅವರ ಆವೇಶಭರಿತ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಕಳೆದ ತಿಂಗಳು ಟಿ20 ವಿಶ್ವಕಪ್‌ಗೂ ಮುನ್ನ, 14 ವರ್ಷಗಳ ಬಳಿಕ ಮೊದಲ ಬಾರಿಗೆ ಏಷ್ಯಾಕಪ್‌ನಲ್ಲಿ ಆಡಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ತಂಡಕ್ಕೆ ಬಿಸಿಸಿಐ ಅವಕಾಶ ನೀಡಲಿದೆ ಎಂದು ವರದಿಯಾಗಿತ್ತು. ಆ ಬಳಿಕ, ಶಾ ಅವರು ಪಿಸಿಬಿಯನ್ನು ಕೆರಳಿಸುವ ಹೇಳಿಕೆಯೊಂದಿಗೆ ಎಲ್ಲಾ ವದಂತಿಗಳನ್ನು ತಳ್ಳಿಹಾಕಿದ್ದರು. ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಮಾತೇ ಇಲ್ಲ. ಏಷ್ಯಾಕಪ್‌ಅನ್ನು ಯುಎಇಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದರು.
ಶಾ ಅವರ ಹೇಳಿಕೆಯ ಒಂದು ತಿಂಗಳ ಬಳಿಕ, ರಮೀಜ್ ರಾಜಾ ಶುಕ್ರವಾರ ಉರ್ದು ನ್ಯೂಸ್‌ಗೆ ಹೇಳಿಕೆ ನೀಡಿದ್ದರು.“ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸದಿದ್ದರೆ ಅದನ್ನು ಯಾರು ನೋಡುತ್ತಾರೆ? ನಮಗೆ ಸ್ಪಷ್ಟ ನಿಲುವಿದೆ. ಭಾರತ ತಂಡ ಇಲ್ಲಿಗೆ ಬಂದರೆ ನಾವು ವಿಶ್ವಕಪ್‌ಗೆ ಭಾರತಕ್ಕೆ ಹೋಗುತ್ತೇವೆ. ಅವರು ಬರದಿದ್ದರೆ ನಾವು ಅಲ್ಲಿಗೆ ಹೋಗುವುದಿಲ್ಲ. ಅವರು ಕೂಡಾ ನಾವು ಇಲ್ಲದೆ ವಿಶ್ವಕಪ್ ಆಡಬಹುದು. ನಾವು ಈ ವಿಚಾರವಾಗಿ ಆಕ್ರಮಣಕಾರಿ ವಿಧಾನವನ್ನು ಅಳವಡಿಸಿಕೊಳ್ಳುತ್ತೇವೆ. ನಮ್ಮ ತಂಡ ಉತ್ತಮ ಪ್ರದರ್ಶನ ತೋರುತ್ತಿದೆ. ನಾವು ಪಾಕಿಸ್ತಾನ ಕ್ರಿಕೆಟ್‌ನ ಆರ್ಥಿಕ ಸ್ಥಿತಿಯನ್ನು ಸುಧಾರಿಸಬೇಕು ಎಂದು ನಾನು ಯಾವಾಗಲೂ ಹೇಳುತ್ತೇನೆ. ನಾವು ಉತ್ತಮ ಪ್ರದರ್ಶನ ನೀಡಿದಾಗ ಮಾತ್ರ ಅದು ಸಾಧ್ಯ. 2021ರ ಟಿ20 ವಿಶ್ವಕಪ್‌ನಲ್ಲಿ ನಾವು ಭಾರತವನ್ನು ಸೋಲಿಸಿದ್ದೇವೆ. ಟಿ20 ಏಷ್ಯಾಕಪ್‌ನಲ್ಲೂ ನಾವು ಭಾರತವನ್ನು ಸೋಲಿಸಿದ್ದೇವೆ. ಒಂದು ವರ್ಷದಲ್ಲಿ, ಪಾಕಿಸ್ತಾನ ಕ್ರಿಕೆಟ್ ತಂಡವು ಶತಕೋಟಿ ಡಾಲರ್ ಶ್ರೀಮಂತ ತಂಡವನ್ನು ಎರಡು ಬಾರಿ ಸೋಲಿಸಿತು,” ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಈ ನಿರ್ಧಾರ ನನ್ನದಲ್ಲ. ಬಿಸಿಸಿಐ ಮತ್ತು ಪಿಸಿಬಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಇದು ಬಿಸಿಸಿಐ ಮತ್ತು ಪಿಸಿಬಿಯ ನಿರ್ಧಾರ. ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಜಂಟಿಯಾಗಿ ತೆಗೆದುಕೊಳ್ಳುತ್ತಾರೆ ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.
ಇದಕ್ಕೂ ಹಿಂದೆ ಇದೇ ವಿಚಾರವಾಗಿ ಕೇಂದ್ರ ಕೀಡಾ ಸಚಿವ ಅನುರಾಗ್ ಠಾಕೂರ್ ಅವರು ರಮೀಜ್ ರಾಜಾಗೆ ಪ್ರತಿಕ್ರಿಯೆ ನೀಡಿದ್ದರು. ಯಾವುದೇ ದೇಶವು ಭಾರತವನ್ನು ಕಡೆಗಣಿಸುವುದಿಲ್ಲ ಎಂದು ಹೇಳಿದ್ದರು. “ಸರಿಯಾದ ಸಮಯಕ್ಕಾಗಿ ಕಾಯಿರಿ. ಭಾರತವು ಕ್ರೀಡಾ ಜಗತ್ತಿನಲ್ಲಿ ಪ್ರಮುಖ ಶಕ್ತಿಯಾಗಿದೆ. ಹೀಗಾಗಿ ಯಾವುದೇ ದೇಶವು ಭಾರತವನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಅವರು ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.
ಗಮನಿಸಬಹುದಾದ ಇತರೆ ಸುದ್ದಿಗಳು
'ಆಟಗಾರರು ಚೆನ್ನಾಗಿ ಆಡದಿದ್ದರೆ ಅವರನ್ನೇ ದೂರಿ, ಐಪಿಎಲ್ ಮೇಲೆ ಬೊಟ್ಟು ಮಾಡಬೇಡಿ'
ಭಾರತ ತಂಡವು ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸೋತು ನಿರ್ಗಮಿಸಿದ ಬಳಿಕ, ತಂಡದ ಆಟಗಾರರ ಬಗ್ಗೆ ವ್ಯಾಪಕ ಟೀಕೆ ಕೇಳಿಬಂದಿದೆ. ಭಾರತದ ಆಟಗಾರರು ಕೆಲವು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಹೋಲಿಸಿದರೆ, ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂದು ಟೀಕಿಸಲಾಗುತ್ತಿದೆ. ಆದರೆ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಈ ಎಲ್ಲಾ ಟೀಕಾಕಾರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ