Women's Premier League: ಇಂದು ಗುಜರಾತ್-ಡೆಲ್ಲಿ ನಡುವೆ ಹಣಾಹಣಿ; ಪ್ಲೇ ಆಫ್ ಮೇಲೆ ತಂಡಗಳ ಕಣ್ಣು
ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಡೆಲ್ಲಿ ಕ್ಯಾಪಿಟಲ್ಸ್(Delhi Capitals) ತಂಡವು ಆಡಿದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(Mumbai Indians) ವಿರುದ್ಧ ಎಂಟು ವಿಕೆಟ್‌ಗಳಿಂದ ಸೋತಿತ್ತು. ಆ ಮೂಲಕ ವಿಮೆನ್ಸ್ ಪ್ರೀಮಿಯರ್ ಲೀಗ್ (WPL) 2023ರಲ್ಲಿ ಮೊದಲ ಸೋಲು ಅನುಭವಿಸಿತು. ಇಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿರುವ ಡೆಲ್ಲಿ, ಮತ್ತೆ ಗೆಲುವಿನ ಹಳಿಗೆ ಮರಳುವ ನಿರೀಕ್ಷೆಯಲ್ಲಿದೆ.
ಪಂದ್ಯದ ಕುರಿತು ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್, “ಇನ್ನಿಂಗ್ಸ್‌ನ ಒಂದು ಹಂತದಲ್ಲಿ ನಮ್ಮ ಬ್ಯಾಟಿಂಗ್ ಯೋಗ್ಯ ಸ್ಥಿತಿಯಲ್ಲಿತ್ತು. ಆದರೆ ನಿರ್ಣಾಯಕ ಸಮಯದಲ್ಲಿ ನಾವು ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ. ನಮ್ಮ ಬೌಲರ್‌ಗಳು ತಂಡವನ್ನು ಡಿಫೆಂಡ್ ಮಾಡಿಕೊಳ್ಳುವಷ್ಟು ರನ್‌ಗಳು ನಮ್ಮಿಂದ ಬರಲಿಲ್ಲ. ಆದರೆ ಆಟವು ಹೀಗೆ ಸಾಗುತ್ತದೆ. ಕೆಲವನ್ನು ಗೆಲ್ಲುತ್ತೇವೆ ಮತ್ತೆ ಕೆಲವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದರೆ ನಾವು ಬೇಗನೆ ಪುಟಿದೇಳಬೇಕು,” ಎಂದು ಅವರು ಹೇಳಿದ್ದಾರೆ.
ಈ ನಡುವೆ ಗುಜರಾತ್ ತಂಡವು ತಮ್ಮ ನಾಯಕಿ ಬೆತ್ ಮೂನಿ ಅವರನ್ನು ಈ ಋತುವಿನ ಎಲ್ಲಾ ಪಂದ್ಯಗಳಗೂ ಕಳೆದುಕೊಂಡಿದೆ. ಆದರೆ, ತಂಡವು ತಮ್ಮ ಕೊನೆಯ ಪಂದ್ಯದಲ್ಲಿ 201 ರನ್ ಬಾರಿಸಿ ಬಲಿಷ್ಠ ಆರ್‌ಸಿಬಿ ತಂಡವನ್ನು ಸೋಲಿಸುವ ಮೂಲಕ ಟೂರ್ನಿಯಲ್ಲಿ ತಮ್ಮ ಮೊದಲ ಗೆಲುವು ದಾಖಲಿಸಿತು. ಸ್ಟ್ಯಾಂಡ್ ಇನ್ ನಾಯಕಿ ಸ್ನೇಹ ರಾಣಾ ತಮ್ಮ ಸಹ ಆಟಗಾರ್ತಿಯರ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. “ಇಲ್ಲಿ ಡಿಫೆಂಡ್ ಮಾಡುವುದು ಸುಲಭವಲ್ಲ. ಇದು ಕಠಿಣ ಆಟ ಎಂಬುದು ನಮಗೆ ತಿಳಿದಿದೆ. ನಮ್ಮದು ಸಮತೋಲಿತ ತಂಡ. ನಮ್ಮಲ್ಲಿ ಉತ್ತಮ ಬ್ಯಾಟರ್‌ಗಳಿದ್ದಾರೆ. ಅಲ್ಲದೆ ಉತ್ತಮ ಆಟಗಾರರ ಸಂಯೋಜನೆಯನ್ನು ತಂಡ ಹೊಂದಿದೆ,” ಎಂದು ಅವರು ಹೇಳಿದ್ದಾರೆ.
ಸಂಭಾವ್ಯ ಆಡುವ ಬಳಗ
ಗುಜರಾತ್ ಜೈಂಟ್ಸ್: ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ (ವಿಕೆಟ್ ಕೀಪರ್), ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ ರಾಣಾ (ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಮರಿಜಾನ್ನೆ ಕಪ್, ಜೆಮಿಮಾ ರೋಡ್ರಿಗಸ್, ಆಲಿಸ್ ಕ್ಯಾಪ್ಸಿ, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್
ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ?
ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಯಾವಾಗ ನಡೆಯುತ್ತದೆ?
ಗುಜರಾತ್ ಹಾಗೂ ಡೆಲ್ಲಿ ನಡುವಿನ ಪಂದ್ಯವು ಶನಿವಾರ(ಮಾರ್ಚ್ 11) ನಡೆಯಲಿದೆ.
ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?
ಪಂದ್ಯವು ಸಂಜೆ 7:30ಕ್ಕೆ ಪ್ರಾರಂಭವಾಗುತ್ತದೆ.
ಯಾವ ಟಿವಿ ಚಾನೆಲ್‌ನಲ್ಲಿ ಪಂದ್ಯ ಪ್ರಸಾರವಾಗುತ್ತದೆ?
ಪಂದ್ಯವು ಭಾರತದಲ್ಲಿ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಪ್ರಸಾರವಾಗುತ್ತದೆ. ಕಲರ್ಸ್ ಕನ್ನಡ ಸಿನೆಮಾದಲ್ಲೂ ನೇರಪ್ರಸಾರ ಇರಲಿದೆ.
ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ನೋಡಬಹುದು?
ಭಾರತದಲ್ಲಿ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.