Kannada News  /  Sports  /  India Vs South Africa 1st Odi Preview
ಭಾರತ ತಂಡ
ಭಾರತ ತಂಡ (BCCI)

IND vs SA 1st ODI: ನಾಳೆ ಹರಿಣಗಳ ವಿರುದ್ಧ ಮೊದಲ ಏಕದಿನ ಪಂದ್ಯ, ಹೀಗಿರಲಿದೆ ಸಂಭಾವ್ಯ ತಂಡ

05 October 2022, 21:50 ISTHT Kannada Desk
05 October 2022, 21:50 IST

ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂಧ್ಯ ನಾಳೆ ನಡೆಯುತ್ತಿದೆ. ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಶಿಖರ್‌ ಧವನ್‌ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಗೆದ್ದಿರುವ ಭಾರತ, ಇದೀಗ ಏಕದಿನ ಸರಣಿಯತ್ತ ಗಮನ ಹರಿಸಿದೆ. ಟಿ20ಗಿಂತ ಭಿನ್ನ ತಂಡ ಹರಿಣಗಳ ವಿರುದ್ಧ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಆಡುತ್ತಿದೆ. ಲಖನೌನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾದ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ.

ಟ್ರೆಂಡಿಂಗ್​ ಸುದ್ದಿ

ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂಧ್ಯ ನಾಳೆ ನಡೆಯುತ್ತಿದೆ. ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಶಿಖರ್‌ ಧವನ್‌ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ದಕ್ಷಿಣ ಆಫ್ರಿಕಾ ಕೊನೆಯ ಬಾರಿಗೆ 2015ರ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ ಏಕದಿನ ಸರಣಿಯನ್ನು ಆಡಿತ್ತು. ಐದು ಪಂದ್ಯಗಳ ಸರಣಿಯನ್ನು 3-2ರಲ್ಲಿ ಗೆದ್ದುಕೊಂಡಿತ್ತು.

ಶಿಖರ್ ಧವನ್ ಮತ್ತೊಮ್ಮೆ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ. ಈ ಸರಣಿಯಲ್ಲಿ ಭಾರತದ ಟಿ20 ವಿಶ್ವಕಪ್ ತಂಡದಲ್ಲಿ ಬ್ಯಾಕಪ್ ಆಟಗಾರರಾಗಿ ಆಯ್ಕೆಯಾದ ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್ ಮತ್ತು ದೀಪಕ್ ಚಹಾರ್ ಕೂಡ ಇದ್ದಾರೆ. ಇನ್ನೊಂದೆಡೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಟಿ20 ವಿಶ್ವಕಪ್ ತಂಡದ ಭಾಗವಾಗಿರುವ ಹೆಚ್ಚಿನ ಆಟಗಾರರು ಇದ್ದಾರೆ. ಭಾರತ ಪ್ರವಾಸವನ್ನು ಉನ್ನತ ಮಟ್ಟದಲ್ಲಿ ಮುಗಿಸಲು ಹರಿಣಗಳು ಎದುರು ನೋಡುತ್ತಿದ್ದಾರೆ.

ನಾಳಿನ ಪಂದ್ಯವು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಭಾರತದ ಸಂಭಾವ್ಯ ಆಡುವ ಬಳಗ

ಶಿಖರ್ ಧವನ್(ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಕೆಎಲ್ ಯಾದವ್, ರವಿ ಬಿಷ್ಣೋಯ್

ದಕ್ಷಿಣ ಆಫ್ರಿಕಾ

ಆರ್ ಆರ್ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ಟಿ ಬವುಮಾ(ನಾಯಕ), ಎಕೆ ಮಾರ್ಕ್ರಾಮ್, ಜೆಎನ್ ಮಲನ್, ಡ್ವೈನ್ ಪ್ರಿಟೋರಿಯಸ್, ಡಬ್ಲ್ಯೂಡಿ ಪಾರ್ನೆಲ್, ಕ್ವಿಂಟನ್ ಡಿ ಕಾಕ್, ಕಗೀಸೋ ರಬಾಡ, ಟಿ ಶಮ್ಸಿ, ಕೇಶವ್ ಮಹಾರಾಜ್

ಸರಣಿಯ ಎರಡನೇ ಪಂದ್ಯವು ಅಕ್ಟೋಬರ್ 9ರಂದು ರಾಂಚಿಯಲ್ಲಿ ನಡೆಯಲಿದೆ. ಬಳಿಕ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವು ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲಿದೆ.

ರೋಹಿತ್ ಶರ್ಮಾ ಜತೆಗೆ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ಮತ್ತು ರಿಷಬ್ ಪಂತ್ ಸೇರಿದಂತೆ ಪ್ರಮುಖ ಆಟಗಾರರ ಬಳಗವು ಅಕ್ಟೋಬರ್ 23ರಿಂದ ಪ್ರಾರಂಭವಾಗುವ ಟಿ20 ವಿಶ್ವಕಪ್‌ಗೆ ತಯಾರಿ ನಡೆಸಲಿದೆ. ಇದೇ ಕಾರಣಕ್ಕೆ ಎರಡನೇ ದರ್ಜೆಯ ತಂಡವನ್ನು ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದೆ.

ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡ ಹೀಗಿದೆ

ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್‌ಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್‌ ಕೀಪರ್‌), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್. ಸಿರಾಜ್, ದೀಪಕ್ ಚಹಾರ್.