ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್; 6 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಕಿಡಂಬಿ ಶ್ರೀಕಾಂತ್
ಕನ್ನಡ ಸುದ್ದಿ  /  ಕ್ರೀಡೆ  /  ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್; 6 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಕಿಡಂಬಿ ಶ್ರೀಕಾಂತ್

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್; 6 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಕಿಡಂಬಿ ಶ್ರೀಕಾಂತ್

2019ರ ಇಂಡಿಯಾ ಓಪನ್‌ನಲ್ಲಿ ರನ್ನರ್ ಅಪ್ ಸ್ಥಾನ ಪಡೆದ ನಂತರ ಶ್ರೀಕಾಂತ್ ಬಿಡಬ್ಲ್ಯೂಎಫ್ ವಿಶ್ವ ಟೂರ್ನಿಯಲ್ಲಿ ಆಡುತ್ತಿರುವ ಮೊದಲ ಫೈನಲ್ ಪಂದ್ಯ ಇದಾಗಿದೆ. ಅವರು ಕೊನೆಯ ಬಾರಿಗೆ 2017ರಲ್ಲಿ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದ್ದರು.

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್; 6 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಕಿಡಂಬಿ ಶ್ರೀಕಾಂತ್
ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್; 6 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಕಿಡಂಬಿ ಶ್ರೀಕಾಂತ್ (Hindustan Times)

ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ (Malaysia Masters Super 500 badminton) ಭಾರತದ ಅನುಭವಿ ಬ್ಯಾಡ್ಮಿಂಟನ್‌ ಆಟಗಾರ ಕಿಡಂಬಿ ಶ್ರೀಕಾಂತ್ (Kidambi Srikanth) ಪುರುಷರ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದಾರೆ. ಜಪಾನ್‌ನ ಯೂಶಿ ಟನಾಕಾ ಅವರನ್ನು ನೇರ ಗೇಮ್‌ಗಳಿಂದ ಸೋಲಿಸುವ ಮೂಲಕ, ಬರೋಬ್ಬರಿ ಆರು ವರ್ಷಗಳ ನಂತರ ಬಿಡಬ್ಲ್ಯೂಎಫ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

2023ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ವಿಜೇತರಾಗಿರುವ 32ರ ಹರೆಯದ ಕಿಡಂಬಿ, ವಿಶ್ವದ 23ನೇ ಶ್ರೇಯಾಂಕಿತ ಆಟಗಾರ ಟನಾಕಾ ವಿರುದ್ಧ 21-18, 24-22 ಅಂತರದಲ್ಲಿ ಜಯ ಸಾಧಿಸಿದರು.

2019ರ ಇಂಡಿಯಾ ಓಪನ್‌ನಲ್ಲಿ ರನ್ನರ್ ಅಪ್ ಸ್ಥಾನ ಪಡೆದ ನಂತರ ಶ್ರೀಕಾಂತ್ ಬಿಡಬ್ಲ್ಯೂಎಫ್ ವಿಶ್ವ ಟೂರ್ನಮೆಂಟ್‌ನಲ್ಲಿ ಆಡುತ್ತಿರುವ ಮೊದಲ ಫೈನಲ್ ಪಂದ್ಯ ಇದಾಗಿದೆ. ಅವರು ಕೊನೆಯ ಬಾರಿಗೆ 2017ರಲ್ಲಿ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದ್ದರು.

ಮಾಜಿ ನಂಬರ್‌ ವನ್‌ ಆಟಗಾರ

ವಿಶ್ವದ ಮಾಜಿ ನಂ.1 ಆಟಗಾರ ಶ್ರೀಕಾಂತ್, ಕಳೆದ ಕೆಲವು ಋತುಗಳಲ್ಲಿ ಫಾರ್ಮ್ ಮತ್ತು ಫಿಟ್ನೆಸ್ ಕಾರಣದಿಂದಾಗಿ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಇದೀಗ ತಮ್ಮ ಫಿಟ್‌ನೆಸ್‌ ಮರಳಿ ಪಡೆದಿರುವ ಶ್ರೀಕಾಂತ್‌, ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಮೆಂಟ್‌ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

"ದೈಹಿಕವಾಗಿ ನಾನು ಚೆನ್ನಾಗಿದ್ದೇನೆ. ಆದರೆ ಕಳೆದ ವರ್ಷ ಹೆಚ್ಚು ಪಂದ್ಯಗಳಲ್ಲಿ ಆಡಿಲ್ಲ. ಅರ್ಹತಾ ಸುತ್ತಿನಲ್ಲಿ ಆಡಿಲ್ಲ. ಹೀಗಾಗಿ ಪಂದ್ಯಗಳನ್ನು ಆಡುವ ಸ್ಪರ್ಶವನ್ನು ಕಳೆದುಕೊಂಡಿರಬಹುದು. ಈ ಬಾರಿ ಹೇಗೋ ಗೊತ್ತಿಲ್ಲ, ಎಲ್ಲವೂ ಕಾರ್ಯರೂಪಕ್ಕೆ ಬಂತು. ಕಳೆದ ತಿಂಗಳು ನಾನು ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ," ಎಂದು ಅವರು ಹೇಳಿದ್ದಾರೆ.

ಶ್ರೀಕಾಂತ್ ಕಾಮನ್ವೆಲ್ತ್ ಕ್ರೀಡಾಕೂಟದ ತಂಡ ಈವೆಂಟ್‌ನಲ್ಲಿ ಭಾರತವನ್ನು ಮೊದಲ ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕಕ್ಕೆ ಮುನ್ನಡೆಸುವ ಮೂಲಕ ಗಮನ ಸೆಳೆದಿದ್ದರು.

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ವಿಭಾಗ

ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.