ಕನ್ನಡ ಸುದ್ದಿ  /  Sports  /  Ipl Ex Chairman Lalit Modi Health Condition Is Serious

Lalit Modi Hospitalised: ಐಪಿಎಲ್ ಮಾಜಿ ಚೇರ್ಮನ್ ಆರೋಗ್ಯ ಸ್ಥಿತಿ ಗಂಭೀರ; ಆಕ್ಸಿಜನ್ ಸಪೋರ್ಟ್ ನಲ್ಲಿ ಲಲಿತ್ ಮೋದಿ

ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇವರು ಕೆಲವು ದಿನಗಳಿಂದ ಕೋವಿಡ್ ಸೋಕಿನಿಂದ ಬಳಲುತ್ತಿದ್ದು, ನ್ಯುಮೋನಿಯಾ ಕೂಡ ತಗುಲಿದೆ ಎಂದು ಮೂಲಗಳು ತಿಳಿಸಿವೆ.

ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಆರೋಗ್ಯ ಗಂಭೀರವಾಗಿದೆ ಎಂದು ಹೇಳಲಾಗಿದೆ. ಆತ ಆಕ್ಸಿಜನ್ ಸಪೋರ್ಟ್ ನಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ.
ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಆರೋಗ್ಯ ಗಂಭೀರವಾಗಿದೆ ಎಂದು ಹೇಳಲಾಗಿದೆ. ಆತ ಆಕ್ಸಿಜನ್ ಸಪೋರ್ಟ್ ನಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ.

ಮುಂಬೈ: ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಕೋವಿಡ್ ಜೊತೆಗೆ ನ್ಯುಮೋನಿಯಾ ಕೂಡ ತಗುಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಆಕ್ಸಿಜನ್ ಸಪೋರ್ಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯವನ್ನು ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಬಹಿರಂಗಪಡಿಸಿದ್ದಾರೆ. ವಾರದಲ್ಲಿ ಎರಡು ಬಾರಿ ಕೋವಿಡ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ. ನ್ಯುಮೋನಿಯಾ ಕೂಡ ತೀವ್ರವಾಗಿದ್ದು, ಈ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ವರ್ಷ ಲಲಿತ್ ಅವರು ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರೊಂದಿಗಿನ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರ ಸುದ್ದಿಯಲ್ಲಿದ್ದರು.

ಇದೀಗ ಅವರು ತಮ್ಮ ಆರೋಗ್ಯ ಸ್ಥಿತಿ ಕುರಿತು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಳೆದ ಎರಡು ವಾರಗಳಲ್ಲಿ ಎರಡು ಬಾರಿ ಕೊರೊನಾ ಸೋಂಕಿಗೆ ಒಳಗಾಗಿದ್ದ ಲಲಿತ್ ಮೋದಿ ನ್ಯುಮೋನಿಯಾದಿಂದಲೂ ಬಳಲುತ್ತಿದ್ದಾರೆ. ಅವರು ಕೃತಕ ಆಮ್ಲಜನಕದ ಸಹಾಯದಿಂದ ಉಸಿರಾಡುತ್ತಿದ್ದಾರೆ.

ಮೂರು ವಾರಗಳ ಬಂಧನದ ನಂತರ ತಮ್ಮನ್ನು ಮೆಕ್ಸಿಕೊದಿಂದ ಲಂಡನ್‌ಗೆ ಕರೆದೊಯ್ಯಲಾಯಿತು ಎಂದು ಲಲಿತ್ ಮೋದಿ ಹೇಳಿಕೊಂಡಿದ್ದಾರೆ. ಆರೋಗ್ಯದ ಬಗ್ಗೆ ಅಪ್‌ಡೇಟ್ ನೀಡುವುದರ ಜೊತೆಗೆ, ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿರುವ ಚಿತ್ರವನ್ನು ಸಹ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬ್ಯಾಕ್-ಟು-ಬ್ಯಾಕ್ ಐದು ಫೋಟೋಗಳನ್ನು ಪೋಸ್ಟ್ ಮಾಡಿ, ಚೆನ್ನಾಗಿ ಚಿಕಿತ್ಸೆ ನೀಡಿದ ಇಬ್ಬರು ವೈದ್ಯರು, ತನ್ನ ಮಗನೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿ ಲಂಡನ್‌ಗೆ ಬಂದಿಳಿದಿರುವುದಾಗಿ ಮೋದಿ ಹೇಳಿಕೊಂಡಿದ್ದಾರೆ.

ಲಲಿತ್ ಮೋದಿ ಪೋಸ್ಟ್ ನೋಡಿದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಪ್ರತಿಕ್ರಿಯಿಸಿದ್ದು, ಲಲಿತ್ ಮೋದಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಜೊತೆಗೆ ಹಲವು ಗಣ್ಯರು ಕೂಡ ಲಲಿತ್ ಮೋದಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಕಳೆದ ವರ್ಷ ಲಲಿತ್ ಮೋದಿ ಅವರು ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರೊಂದಿಗಿನ ಸಂಬಂಧವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಸುದ್ದಿಯಲ್ಲಿದ್ದರು. ಸದ್ಯದಲ್ಲೇ ಇಬ್ಬರೂ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತು. ಆದರೆ ನಟಿ ಸುಶ್ಮಿತಾ ಸೇನ್ ಮಾತ್ರ ಈ ವದಂತಿಗಳನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಅದೆಲ್ಲ ಸುಳ್ಳು ಎಂದಿದ್ದರು.

ಲಲಿತ್ ಮೋದಿ ಮತ್ತು ಸುಶ್ಮಿತಾ ಸೇನ್ ಇಬ್ಬರೂ ಹಲವು ದಿನಗಳಿಂದ ಒಟ್ಟಿಗೆ ಇರುವ ಯಾವುದೇ ಚಿತ್ರಗಳನ್ನು ಪೋಸ್ಟ್ ಮಾಡಿಲ್ಲ ಮತ್ತು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಹೀಗಾಗಿ ಇವರಿಬ್ಬರದು ಬ್ರೇಕಪ್ ಆದಂತೆ ಎಂದು ಹೇಳಲಾಗಿದೆ.

ವಿಭಾಗ