ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 2ನೇ ಪದಕ ಗೆದ್ದ ಮನು ಭಾಕರ್; ಶೂಟಿಂಗ್‌ನಲ್ಲಿ ಸರಬ್ಜೋತ್ ಸಿಂಗ್ ಜೊತೆಗೆ ಕಂಚಿನ ಪದಕ
10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತದ ಶೂಟರ್‌ಗಳಾದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ. ಮನು ಭಾಕರ್ ಅವರಿಗೆ ಇದು ಒಂದೇ ಒಲಿಂಪಿಕ್ಸ್‌ನಲ್ಲಿ ಎರಡನೇ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಎರಡನೇ ಪದಕ ಗೆದ್ದಿದೆ. ಮೊದಲ ಪದಕ ಗೆದ್ದು ಕೊಟ್ಟಿದ್ದ ಮನು ಭಾಕರ್ ಇಂದು ಎರಡನೇ ಪದಕ ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ. ದಕ್ಷಿಣ ಕೊರಿಯಾ ವಿರುದ್ಧದ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಶೂಟರ್‌ಗಳಾದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆದ್ದು ಬೀಗಿದ್ದಾರೆ.
ಮನು ಭಾಕರ್ ಈಗಾಗಲೇ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಆ ಮೂಕ ಸ್ವಾತಂತ್ರ್ಯದ ನಂತರ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಶೂಟಿಂಗ್‌ನಲ್ಲಿ ಭಾರತ ದೇಶಕ್ಕೆ ಇದು ಒಂದು ಅಮೋಘ ಕ್ಷಣವಾಗಿದೆ. ಭಾರತಕ್ಕೆ ಎರಡನೇ ಪದಕ ಬಂದಿದ್ದು ಭಾರತದ ಜೋಡಿಯು ಕೊರಿಯನ್ ಜೋಡಿಯನ್ನು 16-10 ಅಂತರದಿಂದ ಸೋಲಿಸಿತು.
ಪದಕ ಗೆದ್ದ ಜೋಡಿಯನ್ನು ಪ್ರಧಾನಿ ನರೇಂದ್ರ ಮೋದಿ ಅಭಿನ ಅಭಿನಂದಿಸಿದ್ದಾರೆ.
“ನಮ್ಮ ಶೂಟರ್‌ಗಳು ನಮ್ಮನ್ನು ಹೆಮ್ಮೆ ಪಡಿಸುತ್ತಿದ್ದಾರೆ. ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು. ಇಬ್ಬರೂ ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ಇವರ ಸಾಧನೆಯಿಂದ ಭಾರತವು ನಂಬಲಾಗದಷ್ಟು ಸಂತೋಷವಾಗಿದೆ. ಮನು ಅವರಿಗೆ, ಇದು ಸತತ ಎರಡನೇ ಒಲಿಂಪಿಕ್ ಪದಕವಾಗಿದೆ. ಇದು ಅವರ ಸಮರ್ಪಯನ್ನು ಪ್ರದರ್ಶಿಸುತ್ತದೆ” ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ನೀತಾ ಅಂಬಾನಿ ಅಭಿನಂದನೆ
ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಈವೆಂಟ್‌ನಲ್ಲಿ ಕಂಚಿನ ಪದಕವನ್ನು ಗೆದ್ದ ನಂತರ, ಐಒಸಿ ಸದಸ್ಯೆ ನೀತಾ ಅಂಬಾನಿ ಅವರು ಅಭಿನಂದನೆ ತಿಳಿಸಿದ್ದಾರೆ.
“ಒಲಿಂಪಿಕ್ಸ್‌ನಲ್ಲಿ ಮಿಶ್ರ ತಂಡಗಳ ಶೂಟಿಂಗ್ ಸ್ಪರ್ಧೆಯಲ್ಲಿ ಪದಕದೊಂದಿಗೆ ನಮ್ಮ ಕ್ರೀಡಾಪಟುಗಳು ಮತ್ತೆ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಮಿಶ್ರ ತಂಡ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದಿದ್ದಕ್ಕಾಗಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು. ಒಂದೇ ಒಲಿಂಪಿಕ್ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಮನು ಅವರಿಗೆ ವಿಶೇಷವಾಗಿ ಅಭಿನಂದನೆ. ಇಡೀ ರಾಷ್ಟ್ರವೇ ಈಗ ಅವರ ಹ್ಯಾಟ್ರಿಕ್‌ಗಾಗಿ ಉಸಿರು ಬಿಗಿ ಹಿಡಿದು ಕಾಯುತ್ತಿದೆ. ಮುಂಬರುವ ಕ್ರೀಡಾಕೂಟಗಳಿಗೆ ನಮ್ಮ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸುತ್ತೇವೆ," ಎಂದು ಅವರು ಹೇಳಿದ್ದಾರೆ.
ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ | ಪ್ಯಾರಿಸ್ ಒಲಿಂಪಿಕ್ಸ್ ಸೋಲಿನ ಬೆನ್ನಲ್ಲೇ ಟೆನಿಸ್ಗೆ ವಿದಾಯ ಘೋಷಿಸಿದ ರೋಹನ್ ಬೋಪಣ್ಣ
(ಸುದ್ದಿ ಅಪ್ಡೇಟ್ ಆಗಲಿದೆ)