India vs New Zealand 2nd ODI: ಟೀಂ ಇಂಡಿಯಾ ಮಾರಕ ದಾಳಿಗೆ ಕಿವೀಸ್ ತತ್ತರ; ರಾಯ್​ಪುರದಲ್ಲಿ 108 ರನ್ ಗೆ ಆಲೌಟ್
ಕನ್ನಡ ಸುದ್ದಿ  /  ಕ್ರೀಡೆ  /  India Vs New Zealand 2nd Odi: ಟೀಂ ಇಂಡಿಯಾ ಮಾರಕ ದಾಳಿಗೆ ಕಿವೀಸ್ ತತ್ತರ; ರಾಯ್​ಪುರದಲ್ಲಿ 108 ರನ್ ಗೆ ಆಲೌಟ್

India vs New Zealand 2nd ODI: ಟೀಂ ಇಂಡಿಯಾ ಮಾರಕ ದಾಳಿಗೆ ಕಿವೀಸ್ ತತ್ತರ; ರಾಯ್​ಪುರದಲ್ಲಿ 108 ರನ್ ಗೆ ಆಲೌಟ್

ಟೀಂ ಇಂಡಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ 34.3 ಓವರ್ ಗಳಲ್ಲಿ 108 ರನ್ ಗಳಿಸಿ ಆಲೌಟ್ ಆಗಿದೆ. ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕಿವೀಸ್ ಆಟಗಾರ ಸ್ಯಾಟ್ನರ್ ಚೆಂಡನ್ನು ಬೌಂಡರಿಗಟ್ಟಿದ ಪರಿ (ಫೋಟೋ-AFP)
ಟೀಂ ಇಂಡಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕಿವೀಸ್ ಆಟಗಾರ ಸ್ಯಾಟ್ನರ್ ಚೆಂಡನ್ನು ಬೌಂಡರಿಗಟ್ಟಿದ ಪರಿ (ಫೋಟೋ-AFP)

ರಾಯ್ಪುರ: ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಟೀಂ ಇಂಡಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಕಿವೀಸ್ 34.3 ಓವರ್ ಗಳಲ್ಲಿ 108 ರನ್ ಗಳಿಗೆ ಸರ್ವ ಪತನ ಕಂಡಿದೆ. ಆರಂಭದಿಂದಲೇ ಭಾರತದ ಬೌಲರ್ ಗಳು ಟಾಮ್ ಲ್ಯಾಥಮ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.

ಮೊದಲ ಓವರ್ ನ ಐದನೇ ಎಸೆತದಲ್ಲೇ ಮೊಹಮ್ಮದ್ ಶಮಿ ಫಿನ್ ಅಲೆನ್(0) ಅವರನ್ನು ಬೌಲ್ಡ್ ಮಾಡುವ ಮೂಲಕ ವಿಕೆಟ್ ಖಾತೆಯನ್ನು ತೆರೆದರು. ಬಳಿಕ ಸಿರಾಜ್ ದಾಳಿಯನ್ನು ಮುಂದುವರೆಸಿ ಹೆನ್ರಿ ನಿಕೋಲ್ಸ್ (2) ಅವರನ್ನು ಪೆವಿಲಿಯನ್ ಗೆ ಕಳಿಸಿದರು. 10.3 ಓವರ್ ಗಳು ಆಗುವಷ್ಟರಲ್ಲಿ ನ್ಯೂಜಿಲೆಂಡ್ ತಂಡದ ಪ್ರಮುಖ ಐವರು ಬ್ಯಾಟರ್ ಗಳನ್ನು ಟೀಂ ಇಂಡಿಯಾದ ಬೌಲರ್ ಗಳು ಔಟ್ ಮಾಡುವ ಮೂಲಕ ಭಾರಿ ಆಘಾತ ನೀಡಿದರು.

ಯಾವುದೇ ಹಂತದಲ್ಲೂ ಕಿವೀಸ್ ಆಟಗಾರರು ರನ್ ಗಳಿಸಲು ಅವಕಾಶ ನೀಡಲೇ ಇಲ್ಲ. ಗ್ಲೆನ್ ಫಿಲಿಪ್ಸ್ (36), ಮೈಕೆಲ್ ಬ್ರೇಸ್ ವೆಲ್ (22), ಮಿಚೆಲ್ ಸ್ಯಾಂಟ್ನರ್ 27 ರನ್ ಗಳಿಸಿದರು. ಉಳಿದ ಯಾವೊಬ್ಬ ಆಟಗಾರನೂ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.

ಅಂತಿಮವಾಗಿ 34.3 ಓವರ್ ಗಳಲ್ಲಿ 108 ರನ್ ಗಳಿಸಿ ತನ್ನ ಆಟವನ್ನು ಮುಗಿಸಿತು. ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ ಹಾಗೂ ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಕಿತ್ತರು.

ರಾಯ್ಪುರ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿದೆ. ಹೀಗಾಗಿ ಪಿಚ್ ಬಗ್ಗೆಯೂ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.

ಭಾರತದ ಆಡುವ 11ರ ಬಳಗ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಬೆಂಚ್

ಯಜುವೇಂದ್ರ ಚಾಹಲ್, ಶ್ರೀಕರ್, ಭರತ್, ರಜತ್ ಪತ್, ಶ್ರೀಕರ್ ಭರತ್ ಉಮ್ರಾನ್ ಮಲಿಕ್

ನ್ಯೂಜಿಲೆಂಡ್ ನಆಡುವ 11ರ ಬಳಗ

ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ ಮತ್ತು ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

ಬೆಂಚ್‌

ಮಾರ್ಕ್ ಚಾಪ್‌ಮನ್, ಡೌಗ್ ಬ್ರೇಸ್‌ವೆಲ್, ಜಾಕೋಬ್ ಡಫಿ, ಇಶ್ ಸೋಧಿ

Whats_app_banner
ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.