ಪ್ರೊ ಕಬಡ್ಡಿ ಲೀಗ್ 11ನೇ ಸೀಸನ್ ಪಂದ್ಯಗಳನ್ನು ವೀಕ್ಷಿಸುವುದು ಹೇಗೆ; ಟಿವಿ ಚಾನೆಲ್, ಲೈವ್ ಸ್ಟ್ರೀಮಿಂಗ್ ವಿವರ
ಕನ್ನಡ ಸುದ್ದಿ  /  ಕ್ರೀಡೆ  /  ಪ್ರೊ ಕಬಡ್ಡಿ ಲೀಗ್ 11ನೇ ಸೀಸನ್ ಪಂದ್ಯಗಳನ್ನು ವೀಕ್ಷಿಸುವುದು ಹೇಗೆ; ಟಿವಿ ಚಾನೆಲ್, ಲೈವ್ ಸ್ಟ್ರೀಮಿಂಗ್ ವಿವರ

ಪ್ರೊ ಕಬಡ್ಡಿ ಲೀಗ್ 11ನೇ ಸೀಸನ್ ಪಂದ್ಯಗಳನ್ನು ವೀಕ್ಷಿಸುವುದು ಹೇಗೆ; ಟಿವಿ ಚಾನೆಲ್, ಲೈವ್ ಸ್ಟ್ರೀಮಿಂಗ್ ವಿವರ

PKL Season 11: ಹಳ್ಳಿಯಿಂದ ದಿಲ್ಲಿ ಜನರೂ ಇಷ್ಟಪಡುವ ಪ್ರೊ ಕಬಡ್ಡಿ ಲೀಗ್‌ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಭಿಮಾನಿಗಳು ಪಿಕೆಎಲ್‌ ಪಂದ್ಯಗಳನ್ನು ಮೊಬೈಲ್‌ ಹಾಗೂ ಟಿವಿಯಲ್ಲಿ ನೋಡಲು ಕಾಯುತ್ತಿದ್ದಾರೆ. ಹೀಗಾಗಿ ಪಿಕೆಎಲ್ ಟೂರ್ನಿಯ‌ ಎಲ್ಲಾ ಪಂದ್ಯಗಳ ಲೈವ್‌ ಸ್ಟ್ರೀಮಿಂಗ್ ಮತ್ತು ನೇರಪ್ರಸಾರದ ವಿವರಗಳನ್ನು ನೋಡೋಣ.

ಪ್ರೊ ಕಬಡ್ಡಿ ಲೀಗ್ 11ನೇ ಸೀಸನ್ ಪಂದ್ಯಗಳನ್ನು ವೀಕ್ಷಿಸುವುದು ಹೇಗೆ; ಲೈವ್ ಸ್ಟ್ರೀಮಿಂಗ್ ವಿವರ
ಪ್ರೊ ಕಬಡ್ಡಿ ಲೀಗ್ 11ನೇ ಸೀಸನ್ ಪಂದ್ಯಗಳನ್ನು ವೀಕ್ಷಿಸುವುದು ಹೇಗೆ; ಲೈವ್ ಸ್ಟ್ರೀಮಿಂಗ್ ವಿವರ

ಪ್ರೊ ಕಬಡ್ಡಿ ಲೀಗ್‌ನ 11ನೇ ಸೀಸನ್‌ನ ಆರಂಭಕ್ಕೆ ಇನ್ನೆರಡು ದಿನಗಳಷ್ಟೇ ಬಾಕಿ ಉಳಿದಿವೆ. ಅಕ್ಟೋಬರ್ 18ರ ಶುಕ್ರವಾರದಂದು ಪಿಕೆಎಲ್‌ಗೆ ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ಬೆಂಗಳೂರು ಬುಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಅದೇ ದಿನ ನಡೆಯುವ ಎರಡನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ಮತ್ತು ಯು ಮುಂಬಾ ಮುಖಾಮುಖಿಯಾಗಲಿವೆ. ಹೈದರಾಬಾದ್‌ನಲ್ಲಿ ಮೊದಲ ಹಂತದ ಪಂದ್ಯಗಳು ನಡೆಯಲಿದ್ದು, ಟ್ರೋಫಿ ಗೆಲುವಿಗೆ 12 ತಂಡಗಳು ಸೆಣಸಲಿವೆ.

ಪಂದ್ಯಾವಳಿಯು ಅಕ್ಟೋಬರ್ 18ರಂದು ಆರಂಭವಾಗಿ ಡಿಸೆಂಬರ್ 24ರವರೆಗೆ ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತ ಮುತ್ತಿನ ನಗರಿ ಹೈದರಾಬಾದ್‌ನಲ್ಲಿ ನಡೆದರೆ, ನೋಯ್ಡಾ ಮತ್ತು ಪುಣೆ ನಗರಗಳಲ್ಲಿ ಎರಡು ಹಾಗೂ ಮೂರನೇ ಹಂತದ ಪಂದ್ಯಗಳು ನಡೆಯಲಿವೆ. ಈ ಬಾರಿ ಬೆಂಗಳೂರು ಬುಲ್ಸ್‌ ತವರು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುತ್ತಿಲ್ಲ.

ಬ್ಲಾಕ್‌ಬಸ್ಟರ್ ಕಬಡ್ಡಿ ಈವೆಂಟ್‌ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಹೀಗಾಗಿ ಟೂರ್ನಿಯ ಲೈವ್‌ ಸ್ಟ್ರೀಮಿಂಗ್ ಮತ್ತು ಲೈವ್ ಟೆಲಿಕಾಸ್ಟ್ ವಿವರಗಳನ್ನು ನೋಡೋಣ.

ಪ್ರೊ ಕಬಡ್ಡಿ ಲೀಗ್ ಸೀಸನ್ 11 ಅಕ್ಟೋಬರ್ 18ರ ಶುಕ್ರವಾರದಿಂದ ಡಿಸೆಂಬರ್ 24 ರವರೆಗೆ ನಡೆಯಲಿದೆ. ಪಂದ್ಯಾವಳಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿ ಮೂಲಕ ನೇರಪ್ರಸಾರ ವೀಕ್ಷಿಸಬಹುದು. ಇದೇ ವೇಳೆ ಭಾರತದಲ್ಲಿ ಪ್ರೊ ಕಬಡ್ಡಿ ಲೀಗ್ 2024ಋ ಲೈವ್ ಸ್ಟ್ರೀಮ್ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರಲಿದೆ. ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ನೀವು ವೀಕ್ಷಿಸಬಹುದು.

ಪಿಕೆಎಲ್‌ 11ನೇ ಆವೃತ್ತಿಯಲ್ಲಿ ಭಾಗವಹಿಸುವ 12 ತಂಡಗಳು

ಬೆಂಗಳೂರು ಬುಲ್ಸ್, ಬೆಂಗಾಲ್ ವಾರಿಯರ್ಸ್, ದಬಾಂಗ್ ಡೆಲ್ಲಿ, ಗುಜರಾತ್ ಜೈಂಟ್ಸ್, ಹರಿಯಾಣ ಸ್ಟೀಲರ್ಸ್, ಜೈಪುರ ಪಿಂಕ್ ಪ್ಯಾಂಥರ್ಸ್, ಪಾಟ್ನಾ ಪೈರೇಟ್ಸ್, ಪುಣೇರಿ ಪಲ್ಟನ್, ತಮಿಳು ತಲೈವಾಸ್, ತೆಲುಗು ಟೈಟಾನ್ಸ್, ಯು ಮುಂಬಾ, ಯುಪಿ ಯೋಧಾಸ್.

ಪಿಕೆಎಲ್‌ 11ರ ಆವೃತ್ತಿಗೆ ಬೆಂಗಳೂರು ಬುಲ್ಸ್ ತಂಡ

ರೈಡರ್ಸ್: ಅಜಿಂಕ್ಯ ಅಶೋಕ್ ಪವಾರ್, ಪರ್ದೀಪ್ ನರ್ವಾಲ್, ಪ್ರಮೋತ್ ಸೈಸಿಂಗ್, ಜೈ ಭಗವಾನ್, ಜತಿನ್, ಸುಶೀಲ್, ಅಕ್ಷಿತ್

ಡಿಫೆಂಡರ್ಸ್: ಹಸುನ್ ಥೋಂಗ್ಕ್ರೂಯಾ, ಸೌರಭ್ ನಂದಲ್, ಪೊನ್‌ಪರ್ತಿಬನ್ ಸುಬ್ರಮಣಿಯನ್, ರೋಹಿತ್ ಕುಮಾರ್, ಆದಿತ್ಯ ಶಂಕರ್ ಪವಾರ್, ಅರುಳ್ನಂತಬಾಬು, ಪರ್ತೀಕ್.

ಆಲ್​ರೌಂಡರ್ಸ್: ನಿತಿನ್ ರಾವಲ್

Whats_app_banner
ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.