RCB vs DC: ಇಂದು ಬೆಂಗಳೂರಿನಲ್ಲಿ IPL ಪಂದ್ಯ, ಈ ಮಾರ್ಗದಲ್ಲಿ ಸಂಚಾರ ನಿಷೇಧ
ಕನ್ನಡ ಸುದ್ದಿ  /  ಕ್ರೀಡೆ  /  Rcb Vs Dc: ಇಂದು ಬೆಂಗಳೂರಿನಲ್ಲಿ Ipl ಪಂದ್ಯ, ಈ ಮಾರ್ಗದಲ್ಲಿ ಸಂಚಾರ ನಿಷೇಧ

RCB vs DC: ಇಂದು ಬೆಂಗಳೂರಿನಲ್ಲಿ IPL ಪಂದ್ಯ, ಈ ಮಾರ್ಗದಲ್ಲಿ ಸಂಚಾರ ನಿಷೇಧ

RCB vs DC: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡೆಲ್ಲಿ ಮತ್ತು ಆರ್​ಸಿಬಿ ಪಂದ್ಯ ವೀಕ್ಷಿಸಲು ಅಭಿಮಾನಿಗಳು ದಂಡು ಹೆಚ್ಚಾಗಿ ಬರುತ್ತದೆ. ಹಾಗಾಗಿ ನಗರ ಟ್ರಾಫಿಕ್ ಪೊಲೀಸ್ ಇಲಾಖೆಯು ಹೊಸ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿದೆ.

ಸಂಚಾರ ದಟ್ಟಣೆ
ಸಂಚಾರ ದಟ್ಟಣೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಇಂದು (ಏಪ್ರಿಲ್ 10) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಸೆಣಸಾಡಲಿವೆ. ಈ ಹಿನ್ನೆಲೆ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಹೆಚ್ಚಾಗಿ ಬರುವ ಕಾರಣ ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆಯು ಹೊಸ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿದೆ. ಕೆಲವು ಪ್ರದೇಶಗಳಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಒದಗಿಸಿದೆ.

ಆರ್​ಸಿಬಿ ಮತ್ತು ಡೆಲ್ಲಿ ಪಂದ್ಯವು ಮಧ್ಯಾಹ್ನ 3ಕ್ಕೆ ನಡೆಯುವ ಕಾರಣ ವಾಹನ ಸವಾರರ ಸುಗಮ ಸಂಚಾರಕ್ಕಾಗಿ ನಗರ ಸಂಚಾರ ಪೊಲೀಸ್ ಇಲಾಖೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿದೆ. ಪಂದ್ಯ ಮಧ್ಯಾಹ್ನ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಯಿಂದ ರಾತ್ರಿ 9 ಗಂಟೆರವರೆಗೆ ಇರಲಿದೆ. ನಂತರ ಎಂದಿನಂತೆ ಎಲ್ಲಾ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಗ್ಗೆ ನಗರ ಸಂಚಾರ ಪೊಲೀಸರು ಟ್ವೀಟ್​ ಮಾಡಿದ್ದಾರೆ.

ವಾಹನ ನಿಲುಗಡೆಗೆ ನಿಷೇಧ

  1. ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
  2. ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ
  3. ಕಸ್ತೂರಿಬಾ ರಸ್ತೆ, ಅಂಬೇಡ್ಕರ್ ವೀಧಿ ರಸ್ತೆ, ಟ್ರಿನಿಟಿ ಜೆಎನ್, ಲ್ಯಾವೆಲ್ಲೆ ರಸ್ತೆ
  4. ವಿಟ್ಟಲ್ ಮಲ್ಯ ರಾಡ್ ಮತ್ತು ನೃಪತುಂಗ ರಸ್ತೆ

ವಾಹನ ಸವಾರರು ಸಂಜೆ 12.30 ಗಂಟೆಯಿಂದ 9 ಗಂಟೆವರೆಗೆ ಈ ರಸ್ತೆ ಮಾರ್ಗಗಳನ್ನು ಬಳಸದೆ ಬೇರೆ ಮಾರ್ಗಗಳಲ್ಲಿ ಸಂಚರಿಸಿ ಎಂದು ವಾಹನ ಸವಾರರಿಗೆ ಮನವಿ ಮಾಡಿದೆ.

ಪಾರ್ಕಿಂಗ್ ವ್ಯವಸ್ಥೆ

  1. ಯುಬಿ ಸಿಟಿ ಪಾರ್ಕಿಂಗ್ ಸ್ಥಳ
  2. ಕಿಂಗ್ಸ್ ರಸ್ತೆ
  3. ಬಿಆರ್​ಬಿ ಮೈದಾನ
  4. ಕಂಠೀರವ ಕ್ರೀಡಾಂಗಣ
  5. ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ
  6. ಓಲ್ಡ್​ ಕೆಜಿಯಡಿ ಬಿಲ್ಡಿಂಗ್ ಸಮೀಪ ವಾಹನಗಳನ್ನು ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಇಂದು ಆರ್​ಸಿಬಿ - ಡೆಲ್ಲಿ ಪಂದ್ಯ

RCB vs DC: ಆರ್​​ಸಿಬಿಗೆ 4 ಪಂದ್ಯ ಸೋತಿರುವ ಡೆಲ್ಲಿ ಸವಾಲು; ಸಂಭಾವ್ಯ ಪ್ಲೇಯಿಂಗ್ XI, ಪಿಚ್‌ ರಿಪೋರ್ಟ್, ಮುಖಾಮುಖಿ ದಾಖಲೆ ಇಲ್ಲಿದೆ!

ತವರು ಎಂ ಚಿನ್ನಸ್ವಾಮಿ ಮೈದಾನದಲ್ಲಿ ಸೋಲು ಕಂಡಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರಿಗೆ ಇಂದು ಅಗ್ನಿಪರೀಕ್ಷೆ. ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಅತಿಥೇಯ ಆರ್​​ಸಿಬಿ ತಂಡ, ಡೆಲ್ಲಿ ಕ್ಯಾಪಿಟಲ್ಸ್​​ ಸವಾಲಿಗೆ ಸಜ್ಜಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರೆಡ್​ ಆರ್ಮಿ ಗೆಲುವಿನ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದೆ.

ಮುಖಾಮುಖಿ ದಾಖಲೆ

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಪರಸ್ಪರ 29 ಬಾರಿ ಮುಖಾಮುಖಿಯಾಗುತ್ತಿವೆ. ಅದರಲ್ಲಿ ಆರ್​ಸಿಬಿ 18 ಗೆದ್ದು ಮೇಲುಗೈ ಸಾಧಿಸಿದೆ. ಡೆಲ್ಲಿ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಆರ್​ಸಿಬಿ ಸಂಭಾವ್ಯ ತಂಡ

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್/ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್​ ಕೀಪರ್​), ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್​​.

ಡೆಲ್ಲಿ ಸಂಭಾವ್ಯ ತಂಡ

ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮನೀಶ್ ಪಾಂಡೆ, ಮಿಚೆಲ್ ಮಾರ್ಷ್, ರಿಲೀ ರೊಸ್ಸೌ /ರೋವ್‌ಮನ್ ಪೊವೆಲ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಅಭಿಷೇಕ್ ಪೊರೆಲ್ (ವಿಕೆಟ್​ ಕೀಪರ್), ಕುಲ್ದೀಪ್ ಯಾದವ್, ಆ್ಯನ್ರಿಚ್​ ನೋಕಿಯಾ, ಖಲೀಲ್ ಅಹ್ಮದ್/ಮುಖೇಶ್ ಕುಮಾರ್.

Whats_app_banner