ಕನ್ನಡ ಸುದ್ದಿ  /  Sports  /  Team India For Upcoming Series Against New Zealand And Australia

Team India for Upcoming series: ಕಿವೀಸ್ ಸರಣಿಗೆ ಶಾಗೆ ಬುಲಾವ್; ಭಾರತ-ಆಸೀಸ್ ಮೊದಲ ಎರಡು ಟೆಸ್ಟ್‌ಗೆ ಸೂರ್ಯ-ಇಶಾನ್ ಆಯ್ಕೆ

ಟಿ20 ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಗೈರುಹಾಜರಾಗಿರುವುದರಿಂದ ಹಾರ್ದಿಕ್ ಪಾಂಡ್ಯ ಅವರು ಮತ್ತೆ ಭಾರತದ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಪೃಥ್ವಿ ಶಾ
ಪೃಥ್ವಿ ಶಾ (BCCI)

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದೆ. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೂ ಟೀಂ ಇಂಡಿಯಾವನ್ನು ಅಂತಿಮಗೊಳಿಸಿದೆ. ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಟೆಸ್ಟ್ ಸರಣಿಗೆ ಚೊಚ್ಚಲ ಕರೆ ಪಡೆದರೆ, ಕಿವೀಸ್ ವಿರುದ್ಧದ ಟಿ20 ಸರಣಿಗೆ ಪೃಥ್ವಿ ಶಾಗೆ ಬುಲಾವ್‌ ನೀಡಲಾಗಿದೆ.

2021ರ ಜುಲೈನಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಪರ ಕೊನೆಯದಾಗಿ ಆಡಿದ್ದ ಶಾ‌, ಅದಾದ 537 ದಿನಗಳ ಬಳಿಕ ಭಾರತ ತಂಡಕ್ಕೆ ಪುನರಾಗಮಿಸುತ್ತಿದ್ದಾರೆ. ಇನ್ನೊಂದೆಡೆ ಇಶಾನ್ ಕಿಶನ್ ಮತ್ತು ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಕೆ ಎಸ್‌ ಭರತ್ ಅವರನ್ನು ಟೆಸ್ಟ್ ತಂಡದಲ್ಲಿ ಸೇರಿಸಲಾಗಿದೆ. ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗೈರುಹಾಜರಿ ಸದ್ಯಕ್ಕೆ ಮುಂದುವರೆಯಲಿದೆ. ಶ್ರೀಲಂಕಾ ವಿರುದ್ಧದ ಏಕದಿನ ತಂಡಕ್ಕೆ ವೇಗಿಯನ್ನು ಆರಂಭದಲ್ಲಿ ಸೇರಿಸಲಾಗಿತ್ತು. ಆದರೆ, ನಂತರ ಸರಣಿಯ ಸಮಯದಲ್ಲಿ ಚೇತರಿಸಿಕೊಳ್ಳಲು ವಿಫಲವಾದ ಕಾರಣ ಮತ್ತೆ ತೆಗೆದುಹಾಕಲಾಯಿತು.

ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ಭಾರತ ತಂಡದ ಅವಿಭಾಜ್ಯ ಅಂಗವಾಗಿರುವ ಕೆ ಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಅವರು ‘ಕೌಟುಂಬಿಕ ಕಾರ್ಯಗಳ’ ಕಾರಣದಿಂದಾಗಿ ನ್ಯೂಜಿಲೆಂಡ್ ಪ್ರವಾಸಕ್ಕೆ ಅಲಭ್ಯರಾಗಿದ್ದಾರೆ. ಏಕದಿನಕ್ಕೆ ಇವರಿಬ್ಬರ ಅನುಪಸ್ಥಿತಿಯಲ್ಲಿ ಕೆ ಎಸ್ ಭರತ್ ಮತ್ತು ಶಹಬಾಜ್ ಅಹ್ಮದ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಟಿ20 ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಗೈರುಹಾಜರಾಗಿರುವುದರಿಂದ ಹಾರ್ದಿಕ್ ಪಾಂಡ್ಯ ಅವರು ಮತ್ತೆ ಭಾರತದ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಕಿವೀಸ್‌ ಸರಣಿಗೆ ಅಲಭ್ಯರಾದ ರಾಹುಲ್ ಮತ್ತು ಅಕ್ಸರ್ ಇಬ್ಬರೂ, ಟೆಸ್ಟ್ ಸರಣಿಗೆ ತಂಡಕ್ಕೆ ಮರಳುತ್ತಾರೆ. ಕನ್ನಡಿಗೆ ರಾಹುಲ್‌ ಪಿಂಕ್‌ ಬಾಲ್‌ ಕ್ರಿಕೆಟ್‌ನಲ್ಲಿ ತಂಡದ ಉಪನಾಯಕನಾಗಿ ತಮ್ಮ ಪಾತ್ರವನ್ನು ಮುಂದುವರೆಸುತ್ತಾರೆ. ಕಳೆದ ತಿಂಗಳು ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಜಯದೇವ್ ಉನದ್ಕತ್ ಕೂಡ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅತ್ತ ಗಾಯದಿಂದಾಗಿ ಸುದೀರ್ಘ ಸಮಯದಿಂದ ಹೊರಗುಳಿದಿರುವ ರವೀಂದ್ರ ಜಡೇಜಾ ಕೂಡ ತಂಡಕ್ಕೆ ಮರಳಿದ್ದಾರೆ. ಆದರೆ, ಅವರ ಲಭ್ಯತೆಯು ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ನ್ಯೂಜಿಲೆಂಡ್ ಸರಣಿಗೆ ಭಾರತ ತಂಡ ಹೀಗಿದೆ

ಕಿವೀಸ್‌ ವಿರುದ್ಧ ಏಕದನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಸ್ ಭರತ್ (ವಿಕೆಟ್‌ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್‌ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಚಹಾಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ ವಿರುದ್ಧದ ಮೊದಲ 2 ಟೆಸ್ಟ್‌ಗಳಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆ ಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೆತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ‌ ಎಸ್ ಭರತ್ (ವಿಕೆಟ್‌ ಕೀಪರ್), ಇಶಾನ್ ಕಿಶನ್ (ವಿಕೆಟ್‌ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್.