US Open 2023: ದಾಖಲೆಯ 24ನೇ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಸರ್ಬಿಯಾದ ನೊವಾಕ್ ಜೊಕೊವಿಕ್
ಕನ್ನಡ ಸುದ್ದಿ  /  ಕ್ರೀಡೆ  /  Us Open 2023: ದಾಖಲೆಯ 24ನೇ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಸರ್ಬಿಯಾದ ನೊವಾಕ್ ಜೊಕೊವಿಕ್

US Open 2023: ದಾಖಲೆಯ 24ನೇ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಸರ್ಬಿಯಾದ ನೊವಾಕ್ ಜೊಕೊವಿಕ್

ನ್ಯೂಯಾರ್ಕ್‌ನ ಫ್ಲಶಿಂಗ್ ಮೆಡೋಸ್‌ನಲ್ಲಿ ನಡೆದ ಯುಎಸ್ ಓಪನ್‌ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ವಿರುದ್ಧ ನೊವಾಕ್ ಜೊಕೊವಿಕ್ ದಾಖಲೆಯ ಗೆಲುವು ಸಾಧಿಸಿ, 24ನೇ ಗ್ರ್ಯಾಂಡ್ ಸ್ಲ್ಯಾಮ್ ಮುಡಿಗೇರಿಸಿಕೊಂಡಿದ್ದಾರೆ.

ಯುಎಸ್ ಓಪನ್ 2023 ಫೈನಲ್‌ನಲ್ಲಿ ಡೇನಿಯಲ್ ಮೆಡ್ವಡೆವ್ ವಿರುದ್ಧ ಗೆದ್ದು 24ನೇ ಗ್ರ್ಯಾಂಡ್ ಸ್ಲ್ಯಾಮ್ ಮುಡಿಗೇರಿಸಿಕೊಂಡ ನೊವಾಕ್ ಜೊಕೊವಿಕ್ (USA Today Sports)
ಯುಎಸ್ ಓಪನ್ 2023 ಫೈನಲ್‌ನಲ್ಲಿ ಡೇನಿಯಲ್ ಮೆಡ್ವಡೆವ್ ವಿರುದ್ಧ ಗೆದ್ದು 24ನೇ ಗ್ರ್ಯಾಂಡ್ ಸ್ಲ್ಯಾಮ್ ಮುಡಿಗೇರಿಸಿಕೊಂಡ ನೊವಾಕ್ ಜೊಕೊವಿಕ್ (USA Today Sports)

ನ್ಯೂಯಾರ್ಕ್ (ಅಮೆರಿಕ): ಯುಎಸ್ ಓಪನ್ (US Open 2023) ಪುರುಷರ ಸಿಂಗಲ್ಸ್‌ನಲ್ಲಿ ಸರ್ಬಿಯಾದ ದಿಗ್ಗಜ ಟೆನಿಸ್ ತಾರೆ ನೊವಾಕ್ ಜೊಕೊವಿಕ್ (Novak Djokovic) ಇತಿಹಾಸ ನಿರ್ಮಿಸಿದ್ದಾರೆ. ನ್ಯೂಯಾರ್ಕ್‌ನ ಫ್ಲಶಿಂಗ್ ಮೆಡೋಸ್‌ನಲ್ಲಿ ನಡೆದ ಯುಎಸ್ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ 27 ವರ್ಷದ ಡ್ಯಾನಿಯಲ್ ಮೆಡ್ವೆಡೆವ್ ಅವರನ್ನು ಮಣಿಸುವ ಮೂಲಕ ಸರ್ಬಿಯಾದ ನೊವಾಕ್ ಜೊಕೊವಿಕ್ 4ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

36 ವರ್ಷದ ಜೊಕೊವಿಕ್ 6-3, 7-6 (7/5), 6-3 ಅಂತರದ ನೇರ ಸೆಟ್‌ಗಳಿಂದ ಮೆಡ್ವೆಡೇವ್ ಅವರನ್ನು ಮಣಿಸಿ 2023ರ ಸಾಲಿನ ಯುಎಸ್ ಓಪನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಟೆನಿಸ್ ಲೋಕದಲ್ಲಿ 24 ಗ್ರ್ಯಾಂಡ್ ಸ್ಲ್ಯಾಮ್ ಟ್ರೋಫಿ ಗೆದ್ದ ಮೊದಲ ಟೆನಿಸ್ ತಾರೆ ಎಂಬ ಇತಿಹಾಸವನ್ನು ಬರೆದಿದ್ದಾರೆ.

ಫೈನಲ್ ಪಂದ್ಯದ ಮೊದಲ ಸೆಟ್‌ನಲ್ಲಿ ಜೊಕೊವಿಕ್ 6-3 ಅಂತರದ ಮುನ್ನಡೆ ಪಡೆದರು. ನಂತರದ ಸೆಟ್‌ನಲ್ಲಿ ಮೆಡ್ವೆಡೆವ್ ಮೇಲುಗೈ ಸಾಧಿಸಲು ಪ್ರಯತ್ನಿಸಿದರು. ಆದರೆ ಟೈ-ಬ್ರೇಕರ್‌ನಲ್ಲಿ 7-6 (5) ಹಿನ್ನಡೆ ಅನುಭವಿಸಿದರು. ನಂತರ ಮೂರನೇ ಸೆಟ್‌ನಲ್ಲಿ ಜೊಕೊವಿಕ್ ಮೊದಲ ಎರಡು ಸೆಟ್‌ಗಳಲ್ಲಿ 6-3 ಗೆಲುವು ಸಾಧಿಸಲು ಸುಲಭವಾಯಿತು. ಮಾರ್ಗರೆಟ್ ಕೋರ್ಟ್ ಅವರ ದಾಖಲೆಯ ಗ್ರ್ಯಾಂಡ್ ಸ್ಲಾಮ್‌ಗಳನ್ನು ಸರಿಗಟ್ಟುವಲ್ಲಿ ಯಶಸ್ವಿಯಾದರು.

ಇದನ್ನೂ ತಿಳಿಯಿರಿ: ಏಷ್ಯಾಕಪ್ 2023 ವೇಳಾಪಟ್ಟಿ

Whats_app_banner
ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.