ಕ್ರಿಮಿನಲ್ ಮಾನನಷ್ಟ ಪ್ರಕರಣ; ಬಜರಂಗ್ ಪುನಿಯಾಗೆ ಜಾಮೀನು
ಕುಸ್ತಿಪಟು ಬಜರಂಗ್ ಪುನಿಯಾ ಅವರಿಗೆ ಕ್ರಿಮಿನಲ್ ಮಾನನಷ್ಟ ಪ್ರಕರಣ ಸಂಬಂಧ ದೆಹಲಿ ಕೋರ್ಟ್ ಜಾಮೀನು ನೀಡಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ (Bajrang Punia) ಅವರಿಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ನೀಡಿದೆ.
ಟ್ರೆಂಡಿಂಗ್ ಸುದ್ದಿ
ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆ ವೇಳೆ ತಮ್ಮ ಹೇಳಿಕೆಯಿಂದ ತನ್ನ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ, ಕುಸ್ತಿಪಟು ಬಜರಂಗ್ ಪುನಿಯಾ ವಿರುದ್ಧ ಕೋಚ್ ನರೇಶ್ ದಹಿಯಾ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಇದೀಗ ಪುನಿಯಾ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.
ತಿಂಗಳ ಹಿಂದೆ ದೆಹಲಿಯಲ್ಲಿ ನಡೆದ ಕುಸ್ತಿಪಟುಗಳ ಪ್ರತಿಭಟನೆಯ ಸಂದರ್ಭದಲ್ಲಿ, ತಾವೇ (ದಹಿಯಾ) ಅತ್ಯಾಚಾರ ಪ್ರಕರಣವನ್ನು ಎದುರಿಸುತ್ತಿರುವ ಕಾರಣ ದಹಿಯಾ ಅವರಿಗೆ ಪ್ರತಿಭಟನೆಯನ್ನು ವಿರೋಧಿಸುವ ಯಾವುದೇ ಹಕ್ಕು ಇಲ್ಲ ಎಂದು ಭಜರಂಗ್ ಹೇಳಿದ್ದರು.
ಈ ಹೇಳಿಕೆ ಸಂಬಂಧ ದಹಿಯಾ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಹೀಗಾಗಿ ಪೂನಿಯಾ ಅವರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು.
“ಭಜರಂಗ್ ಅವರು ನ್ಯಾಯಾಲಯಕ್ಕೆ ದೈಹಿಕವಾಗಿ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದರು. ಮೊದಲ ಮೂರು ವಿಚಾರಣೆಗಳನ್ನು ತಪ್ಪಿಸಿಕೊಂಡರು. ಅವರು ಇಂದು (ಗುರುವಾರ) ಭೌತಿಕವಾಗಿ ಹಾಜರಾಗಿದ್ದು, ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ,” ಎಂದು ದಹಿಯಾ ಪರ ವಕೀಲ ರಾಜೇಶ್ ಕುಮಾರ್ ರೆಕ್ಸ್ವಾಲ್ ಅವರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ದಹಿಯಾ ಅವರು ಖುಲಾಸೆಗೊಂಡಿದ್ದಾರೆ. ಭಜರಂಗ್ ಅವರ ಹೇಳಿಕೆಗಳು ಅವರಿಗೆ ಕೆಟ್ಟ ಹೆಸರನ್ನು ತಂದಿದೆ ಎಂದು ದಹಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.
ಕುಸ್ತಿಪಟುಗಳಾದ ಬಜರಂಗ್, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕವಾಗಿ ಶೋಷಣೆ ನಡೆಸಿದ್ದರು ಎಂದು ಆರೋಪಿಸಿದ್ದರು.
ಎಐಎಫ್‌ಎಫ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಶಾಜಿ ಪ್ರಭಾಕರನ್ ವಜಾ; ಕಾರಣ ಹೀಗಿದೆ
ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಶಾಜಿ ಪ್ರಭಾಕರನ್ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಲಾಗಿದೆ. ವಿಶ್ವಾಸಾರ್ಹ ಕೊರತೆಯ ಕಾರಣದಿಂದ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. 2022ರ ಸೆಪ್ಟೆಂಬರ್ 3ರಂದು ಎಐಎಫ್‌ಎಫ್ ಕಾರ್ಯದರ್ಶಿಯಾಗಿ ಪ್ರಭಾಕರನ್ ನೇಮಕವಾಗಿದ್ದರು. ಎಐಎಫ್‌ಎಫ್ ಅಧ್ಯಕ್ಷ ಕಲ್ಯಾಣ್ ಚೌಬೆ ಅವರು ಪ್ರಭಾಕರನ್ ಅವರಿಗೆ ಮಂಗಳವಾರ ಕರ್ತವ್ಯ ಅವಧಿ ಮುಕ್ತಾಯ ಪತ್ರ ನೀಡಿದ್ದಾರೆ.
ವಿಭಾಗ