ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ನಗರದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ, ತುಮಕೂರಿಗೆ 6 ಹೊಸ ಹಾಸ್ಟೆಲ್ ಮಂಜೂರಾಗಿದ್ದು, ನಿರ್ಮಾಣ ಕಾಮಗಾರಿ ಶುರುವಾಗಲಿದೆ ಎಂದರು. (ವರದಿ- ಈಶ್ವರ್, ತುಮಕೂರು)