ಅಣ್ಣಯ್ಯ ಧಾರಾವಾಹಿ
ಅಣ್ಣಯ್ಯ ಧಾರಾವಾಹಿಯ ಕಥೆ, ಪ್ರತಿದಿನದ ಬೆಳವಣಿಗೆ, ರೋಚಕ ತಿರುವುಗಳ ಮಾಹಿತಿ, ಪಾತ್ರವರ್ಗದ ಪರಿಚಯ ಸೇರಿದಂತೆ ನೀವು ತಿಳಿಯಲು ಇಚ್ಛಿಸುವ ಎಲ್ಲ ವಿವರ ಇಲ್ಲಿ ಲಭ್ಯ. ಅಣ್ಣ ಮತ್ತು ತಂಗಿಯರ ಬಾಂಧವ್ಯದ ಕಥೆ ಹೊಂದಿರುವ ಅಣ್ಣಯ್ಯ ಧಾರಾವಾಹಿ ಜೀ ಕನ್ನಡದಲ್ಲಿ ರಾತ್ರಿ 7.30 ಗಂಟೆಗೆ ಪ್ರಸಾರವಾಗುತ್ತಿದೆ. ಝೀ 5 ಒಟಿಟಿಯಲ್ಲೂ ಈ ಸೀರಿಯಲ್ ನೋಡಬಹುದು. ಅಣ್ಣಯ್ಯ ಸೀರಿಯಲ್‌ನಲ್ಲಿ ವಿಕಾಸ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ಗಟ್ಟಿಮೇಳ ಖ್ಯಾತಿಯ ನಿಶಾ ರವಿಕೃಷ್ಣನ್ ನಾಯಕಿಯಾಗಿದ್ದಾರೆ. ಅಂಕಿತಾ ಗೌಡ, ನಾಗಶ್ರೀ ಬೇಗಾರ್, ಪ್ರತೀಕ್ಷಾ ಶರೀನಾಥ್ ಮತ್ತು ರಾಘವಿ ಅಣ್ಣಯ್ಯನ ತಂಗಿಯರಾಗಿ ಅಭಿನಯಸಿದ್ದಾರೆ. ಅಣ್ಣಯ್ಯ ಸೀರಿಯಲ್‌ನ ಎಲ್ಲಾ ಎಪಿಸೋಡ್‌ಗಳ ಕಥೆ ಇಲ್ಲಿ ಓದಬಹುದು.