ಕರ್ನಾಟಕ ಹವಾಮಾನ ಮೇ 19: ಕರ್ನಾಟಕದಲ್ಲಿ ಚಿತ್ರದುರ್ಗ, ಹಾಸನ ಸೇರಿ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಉಳಿದೆಡೆ ಕೆಲವು ಪ್ರದೇಶಗಳಲ್ಲಿ ಮಳೆ, ಒಣಹವೆ ಇರಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.