ರಾಮನವಮಿಯ ವಿಶೇಷ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಬಾಲರಾಮನ ಹಣೆಗೆ ಸೂರ್ಯ ರಶ್ಮಿಯ ಸ್ಪರ್ಶವಾಗಿದೆ. ಸಾವಿರಾರು ಮಂದಿ ಭಕ್ತರು ಈ ವಿಶೇಷ ವಿದ್ಯಮಾನವನ್ನು ಕಣ್ಣಾರೆ ಕಂಡು ಪುಳಕಿತರಾಗಿದ್ದಾರೆ. ಅಲ್ಲದೆ, ಆನ್‌ಲೈನ್ ಮೂಲಕವೂ ಲಕ್ಷಾಂತರ ಮಂದಿ ಲೈವ್‌ನಲ್ಲಿ ಬಾಲರಾಮನ ಹಣೆಗೆ ಸೂರ್ಯ ರಶ್ಮಿಯ ಸ್ಪರ್ಶವನ್ನು ಕಂಡು ಧನ್ಯರಾಗಿದ್ದಾರೆ.