
ಕನ್ನಡಿಗ ಕರುಣ್ ನಾಯರ್ 9 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ನಲ್ಲಿ ಅರ್ಧ ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ ಕರುಣ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅರ್ಧ ಶತಕ ಗಳಿಸಿದಾಗ ಇಂಗ್ಲೆಂಡ್ ಆಟಗಾರ ಜೋ ರೂಟ್ ಬೆನ್ನು ತಟ್ಟಿ ಅಭಿನಂದಿಸಿದ್ದಾರೆ.



