ಟೆಂಪೋದಿಂದ ಮರಳು ಅನ್ಲೋಡ್ ಮಾಡುತ್ತಿದ್ದ ವೇಳೆ ಇಬ್ಬರ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ (ಮೇ 27) ನಡೆದಿದೆ. ರಹೀಂ ಮೃತರು. ಮತ್ತೋರ್ವ ಯುವಕ ಖಲಂದರ್ ಶಾಫಿ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.