ಕರ್ನಾಟಕದಲ್ಲಿ ಜನ ಔಷಧಿ ಕೇಂದ್ರಗಳು ಬಂದ್ ಆಗ್ತವಾ ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊಟ್ಟ ವಿವರಣೆ ಏನು, ವಿಡಿಯೋ ನೋಡಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕರ್ನಾಟಕದಲ್ಲಿ ಜನ ಔಷಧಿ ಕೇಂದ್ರಗಳು ಬಂದ್ ಆಗ್ತವಾ ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊಟ್ಟ ವಿವರಣೆ ಏನು, ವಿಡಿಯೋ ನೋಡಿ

ಕರ್ನಾಟಕದಲ್ಲಿ ಜನ ಔಷಧಿ ಕೇಂದ್ರಗಳು ಬಂದ್ ಆಗ್ತವಾ ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊಟ್ಟ ವಿವರಣೆ ಏನು, ವಿಡಿಯೋ ನೋಡಿ

Published May 23, 2025 04:42 PM IST Umesh Kumar S
twitter
Published May 23, 2025 04:42 PM IST

ಬೆಂಗಳೂರು: ಕರ್ನಾಟಕದಲ್ಲಿ ಜನ ಔಷಧಿ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನ ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್‌ಗಳು ಏಕೆ ಬೇಕು ಎಂದು ಕೇಳಿದ್ದಾರೆ. ಜನ ಔಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೆರೆಸುವುದು ಸರಿಯಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳ ಹೊರತಾಗಿ ರಾಜ್ಯದಲ್ಲಿ ಇನ್ನು 1220 ಜನ ಔಷಧಿ ಕೇಂದ್ರಗಳಿವೆ. ಅಲ್ಲದೇ ತತ್‌ಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲ ಜನ ಔಷಧಿ ಕೇಂದ್ರಗಳನ್ನ ಮುಚ್ಚಿಸಿ ಎಂದು ಹೇಳಿಲ್ಲ.. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನ ತಿರಸ್ಕರಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

More