Suchana seth : ಕಂದನನ್ನೇ ಉಸಿರುಗಟ್ಟಿಸಿ ಕೊಂದ ಸುಚನಾ ಸೇಠ್ ; ಹರಿಶ್ಚಂದ್ರ ಘಾಟ್ ನಲ್ಲಿ ಮಗವಿನ ಅಂತ್ಯಕ್ರಿಯೆ
ಎಐ ಸ್ಟಾರ್ಟ್ಅಪ್ ಕಂಪನಿ ಸಿಇಒ ಸುಚನಾ ಸೇಠ್ (CEO Suchana Seth) ಅವರ 4 ವರ್ಷದ ಪುತ್ರ ಚಿನ್ಮಯ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಡಾ.ಕುಮಾರ್ ನಾಯಕ್ ತಿಳಿಸಿದ್ದಾರೆ. ಬಟ್ಟೆ ಅಥವಾ ದಿಂಬನ್ನು ಬಳಸಿರುವ ಸಾಧ್ಯತೆ ಇದೆ. ಮಗುವನ್ನು ಕೈಗಳಿಂದ ಕತ್ತು ಹಿಸುಕಿ ಕೊಲೆ ಮಾಡಿದಂತೆ ಕಾಣುತ್ತಿಲ್ಲ. ದಿಂಬು ಅಥವಾ ಇತರ ವಸ್ತುಗಳನ್ನು ಬಳಸಲಾಗಿದೆ ಎಂದು ತೋರುತ್ತದೆ. ಗಂಭೀರ ಉಸಿರುಗಟ್ಟುವಿಕೆಯಿಂದಾಗಿ ಸಾವು ಸಂಭವಿಸಿದೆ ಎಂದು ಚಿತ್ರದುರ್ಗದ ಹಿರಿಯೂರು ತಾಲ್ಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕುಮಾರ್ ನಾಯಕ್ ಸುದ್ದಿಗಾರರಿಗೆ ತಿಳಿಸಿದರು.